ಕೂಡಲಸಂಗಮದಲ್ಲಿ ಆದಿ ವೀರಶೈವ ಸಮಾವೇಶ
Team Udayavani, Mar 6, 2017, 1:29 PM IST
ಕಲಬುರಗಿ: ಮುಂದಿನ ತಿಂಗಳು ಕೂಡಲ ಸಂಗಮದಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಆದಿ ವೀರಶೈವ ಸಮಾಜದ ಸಮಾವೇಶಕ್ಕೆ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವುದು ಅವಶ್ಯಕವಾಗಿದೆ ಎಂದು ಸಮಾಜದ ರಾಜ್ಯಾಧ್ಯಕ್ಷ ಶಂಕರಗೌಡ ಹೇಳಿದರು.
ನಗರದ ಜಗತ್ ಪ್ರದೇಶದ ಮೈಲಾರಲಿಂಗೇಶ್ವರ ಕಲ್ಯಾಣ ಮಂಟಪದಲ್ಲಿ ರವಿವಾರ ನಡೆದ ನಡೆದ ಅಖೀಲ ಕರ್ನಾಟಕ ಆದಿ ವೀರಶೈವ ಸಮಾಜದ ರಾಜ್ಯಮಟ್ಟದ ಸಮಾವೇಶದ ಪೂರ್ವಭಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಆದಿ ವೀರಶೈವ ಸಮಾಜ ಬಾಂಧವರು ರಾಜ್ಯ ಸಮಾವೇಶಕ್ಕೆ ಒಕ್ಕೊರಲಿನಿಂದ ಕೈ ಜೋಡಿಸಿ, ಸಮಾಜದ ಸಂಘಟನೆ ಸದೃಢಗೊಳಿಸಬೇಕು ಎಂದರು.
ಆದಿ ವೀರಶೈವ ಸಮಾಜದ ಬಾಂಧವರು ಶೈಕ್ಷಣಿಕವಾಗಿ ಬೆಳೆಯಲು ಈಗಿರುವ ಪ್ರವರ್ಗ 3ಬಿ ಯಿಂದ 2ಎಗೆ ಸೇರ್ಪಡೆಗೊಳ್ಳುವುದು ಅವಶ್ಯಕವಾಗಿದೆ. ಸೇರ್ಪಡೆಯಾಗಲು ಆದಿ ಸಮಾಜದ ಸಮಾವೇಶಗಳು ನಡೆಯುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಶಕ್ತಿ ಪ್ರದರ್ಶಿಸಲು ಸಮಾಜ ಹಿಂದೆಂದಿಗಿಂತಲೂ ಒಗ್ಗಟ್ಟಾಗಬೇಕಿದೆ ಎಂದು ಹೇಳಿದರು.
ರಾಜ್ಯ ಮಟ್ಟದ ಸಮಾವೇಶಕ್ಕೆ ತಾಲೂಕು, ಹೋಬಳಿ ಹಾಗೂ ಹಳ್ಳಿ ಮಟ್ಟದಲ್ಲಿಯೂ ಜನಜಾಗೃತಿ ಮೂಡಿಸಿ ಸಮಾವೇಶದಲ್ಲಿ ಭಾಗವಹಿಸಲು ಪ್ರೇರೇಪಿಸಬೇಕು. ಸಂಘಟಿತ ಸಮಾಜ ನಿರ್ಮಿಸಲು ಒಂದಾಗಲು ಹಗಲಿರುಳು ಶ್ರಮಿಸಬೇಕು ಎಂದು ಕರೆ ನೀಡಿದರು.
ಆದಿ ವೀರಶೈವ ಸಮಾಜದ ಜಿಲ್ಲಾಧ್ಯಕ್ಷ ಬಸವರಾಜ ಕೊನೇಕ್ ಮಾತನಾಡಿ, ಕೂಡಲ ಸಂಗಮದಲ್ಲಿ ನಡೆಯಲಿರುವ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸೇರಿಸಲು ಈಗಾಗಲೇ ಹಲವು ಸುತ್ತಿನ ಸಭೆಗಳನ್ನು ನಡೆಸಲಾಗಿದೆ ಎಂದು ಹೇಳಿದರು.
ಹೈದ್ರಾಬಾದ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಸೋಮಶೇಖರ ಟೆಂಗಳಿ, ಎಪಿಎಂಸಿ ಮಾಜಿ ಅಧ್ಯಕ್ಷ ಗುಂಡೇರಾವ್ ಹಾಗರಗಿ, ಜಿ.ಪಂ. ಮಾಜಿ ಸದಸ್ಯೆ ಶಶಿಕಲಾ ಟೇಂಗಳಿ, ಸಮಾಜದ ಮುಖಂಡರಾದ ವೀರಣ್ಣ ಮಹಾಂತಗೋಳ,
ರಾಜೇಂದ್ರ ಕರೆಕಲ್, ಶಿವಪುತ್ರಪ್ಪ ಪಾಟೀಲ ಮುನ್ನಹಳ್ಳಿ, ಹಣಮಂತರಾವ ಪಾಟೀಲ ಕೊಟನೂರ, ಗುರುಬಸವಪ್ಪ ಪಾಟೀಲ, ಚಂದ್ರಕಾಂತ ಪಾಟೀಲ, ಶಿವಪುತ್ರಪ್ಪ ಬುರುಡೆ, ಆದಿ ವೀರಶೈವ ಸಮಾಜದ ತಾಲೂಕು ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಹಾಗೂ ಸಮಾಜದ ಮುಖಂಡರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.