ಅತ್ಯಾಚಾರ ಆರೋಪಿ ಪ್ರಜಾಪತಿಗೆ ಸುಪ್ರೀಂ ನಿಂದ ರಿಲೀಫ್ ಇಲ್ಲ
Team Udayavani, Mar 6, 2017, 3:34 PM IST
ಹೊಸದಿಲ್ಲಿ : ಅತ್ಯಾಚಾರದ ಆರೋಪಕ್ಕೆ ಗುರಿಯಾಗಿ ಪೊಲೀಸ್ ಬಂಧನದಿಂದ ಶತಾಯ ಗತಾಯ ತಪ್ಪಿಸಿಕೊಳ್ಳುತ್ತಿರುವ ಉತ್ತರ ಪ್ರದೇಶದ ಸಚಿವ ಗಾಯತ್ರಿ ಪ್ರಜಾಪತಿಗೆ ಸುಪ್ರೀಂ ಕೋರ್ಟ್ ನಿಂದ ಯಾವುದೇ ರಿಲೀಫ್ ಸಿಕ್ಕಿಲ್ಲ; ಈ ಎಸ್ ಪಿ ನಾಯಕನ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಸೂಚಿಸುವ ತನ್ನ ಆದೇಶಕ್ಕೆ ರಾಜಕೀಯ ಬಣ್ಣ ನೀಡಲಾಗುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಅತೃಪ್ತಿ ವ್ಯಕ್ತಪಡಿಸಿದೆ.
ಗ್ಯಾಂಗ್ ರೇಪ್ ಹಾಗೂ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪ ಹೊತ್ತಿರುವ ಪ್ರಜಾಪತಿಯ ವಿರುದ್ಧ ಎಫ್ಐಆರ್ ದಾಖಲಿಸುವಂತೆ ತಾನು ಉತ್ತರ ಪ್ರದೇಶ ಪೊಲೀಸರಿಗೆ ಆದೇಶ ನೀಡಿದ್ದೇನೆಯೇ ಹೊರತು ತಾನು ಆ ಪ್ರಕರಣಗಳ ಮೇಲುಸ್ತುವಾರಿ ಮಾಡುತ್ತಿಲ್ಲ ಎಂದು ಜಸ್ಟಿಸ್ ಎ ಕೆ ಸಿಕ್ರಿ ನೇತೃತ್ವದ ಪೀಠವು ಸ್ಪಷ್ಟಪಡಿಸಿತು.
ತನ್ನ ವಿರುದ್ಧ ಎಫ್ಐಆರ್ ದಾಖಲಿಸುವಂತೆ ನೀಡಿರುವ ಆದೇಶವನ್ನು ಹಿಂದೆಗೆದುಕೊಳ್ಳಬೇಕೆಂಬ ಪ್ರಜಾಪತಿಯ ಮನವಿಯನ್ನು ತಿರಸ್ಕರಿಸಿರುವ ಸುಪ್ರೀಂ ಕೋರ್ಟ್, ಸೂಕ್ತ ಪರಿಹಾರಕ್ಕಾಗಿ ಆತ ಸಂಬಂಧಿತ ನ್ಯಾಯಾಲಯವನ್ನು ಸಂಪರ್ಕಿಸಬಹುದಾಗಿದೆ ಎಂದು ಹೇಳಿತು.
ಕಳೆದ ಫೆ.17ರಂದು ಸುಪ್ರೀಂ ಕೋರ್ಟ್, ಸಮಾಜವಾದಿ ಪಕ್ಷದ ನಾಯಕ ಪ್ರಜಾಪತಿ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮತ್ತು ಎಂಟು ವಾರಗಳ ಒಳಗೆ ತನಗೆ ಮುಚ್ಚಿದ ಲಕೋಟೆಯಲ್ಲಿ ಕ್ರಮತೆಗೆದುಕೊಂಡ ಕುರಿತಾದ ವರದಿಯನ್ನು ಸಲ್ಲಿಸುವಂತೆ ಉತ್ತರಪ್ರದೇಶ ಪೊಲàಸರಿಗೆ ಆದೇಶಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
PM ನರೇಂದ್ರ ಮೋದಿಗೆ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಗೌರವ
MUST WATCH
ಹೊಸ ಸೇರ್ಪಡೆ
Siruguppa: ಬೈಕ್ ಮತ್ತು ಅಪರಿಚಿತ ವಾಹನದ ಮಧ್ಯೆ ಭೀಕರ ಅಪಘಾತ; ಇಬ್ಬರ ಸಾವು
Karkala: ತಿಂಗಳ ಹಿಂದೆ ಮೃತಪಟ್ಟ ಪತಿ, ಮನನೊಂದು ಆತ್ಮಹತ್ಯೆಗೆ ಶರಣಾದ ಅಂಗನವಾಡಿ ಶಿಕ್ಷಕಿ
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.