ಗೋಡಂಬಿ ಉದ್ಯಮ ಘಟಕಕ್ಕೆ ಕೆನರಾ ಬ್ಯಾಂಕ್ ಗರಿಷ್ಠ ಸಾಲ
Team Udayavani, Mar 6, 2017, 5:51 PM IST
ಉಡುಪಿ: ಗೋಡಂಬಿ ಸಂಸ್ಕರಣಾ ಘಟಕ ನಿರ್ಮಾಣಕ್ಕೆ ಕೆನರಾ ಬ್ಯಾಂಕ್ ಉತ್ತೇಜನ ನೀಡುತ್ತಿದ್ದು, ಘಟಕಗಳ ವಿಸ್ತರಣೆ, ನಿರ್ಮಾಣಕ್ಕೆ 50 ಸಾವಿರದಿಂದ 20 ಕೋ.ರೂ.ವರೆಗೆ ಸಾಲ ಸೌಲಭ್ಯವನ್ನು ಕೆನರಾ ಬ್ಯಾಂಕ್ ನೀಡಲು ಯೋಜನೆ ಹಮ್ಮಿಕೊಂಡಿದೆ ಎಂದು ಕೆನರಾ ಬ್ಯಾಂಕಿನ ಮಂಗಳೂರು ವೃತ್ತ ಕಚೇರಿಯ ಜನರಲ್ ಮ್ಯಾನೇಜರ್ ಕೆ. ವಿರೂಪಾಕ್ಷ ಹೇಳಿದರು.
ಶನಿವಾರ ಉಡುಪಿಯಲ್ಲಿ ಕೆನರಾ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿ ವತಿಯಿಂದ ನಡೆದ ಗೇರು ಬೀಜ ಸಂಸ್ಕರಣಾ ಘಟಕಗಳ ವ್ಯಾಪಾರಸ್ಥರ ಜತೆಗೆ ಸಮ್ಮೇಳನ-ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಗೋಡಂಬಿ ಉದ್ದಿಮೆಯ ಬೆಳವಣಿಗೆಗೆ ತಕ್ಕಂತೆ ಯೋಜನೆಗಳನ್ನು ಮಾರ್ಪಾಡುಗೊಳಿಸಲಾಗಿದೆ. ಗೋಡಂಬಿ ಉದ್ಯಮ ಕೂಡ ಕೃಷಿಯ ಒಂದು ಭಾಗವಾಗಿದೆ. ಇದಕ್ಕೆ ಹೆಚ್ಚಿನ ಉತ್ತೇಜನ ನೀಡಲು ಬ್ಯಾಂಕು ಯೋಜನೆಗಳನ್ನು ಪರಿಷ್ಕರಿಸುತ್ತಲಿದೆ. ಗೋಡಂಬಿ ರಫ್ತು ಹೆಚ್ಚಬೇಕಿದೆ ಎಂದು ಹೇಳಿದರು.
ಗೋಡಂಬಿ ಸಂಸ್ಕರಣಾ ಘಟಕ ನಿರ್ಮಾಣದಲ್ಲಿ ಬ್ಯಾಂಕಿನ ಪಾತ್ರದ ಕುರಿತು ಕೆನರಾ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ಶ್ರೀನಾಥ್ ಜೋಶಿ ಮಾತನಾಡಿ, ಸಾಲ ಸೌಲಭ್ಯ ಯೋಜನೆಗಳ ಬಗ್ಗೆ ಪ್ರಾತ್ಯಕ್ಷಿಕೆ ಯೊಂದಿಗೆ ವಿವರಣೆ ನೀಡಿದರು.
ಕೆನರಾ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಚೇರಿಯ ಅಸಿಸ್ಟೆಂಟ್ ಜನರಲ್ ಮ್ಯಾನೇಜರ್ ರಾಜಶೇಖರ್ ಕೆ. ಮೇಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Udupi: ಗೀತಾರ್ಥ ಚಿಂತನೆ-94: ದುಗುಡಗಳನ್ನು ಕೇಳುವುದೂ ಚಿಕಿತ್ಸೆ
Udupi: ನಿದ್ರೆ ಮಾತ್ರೆ ಸೇವಿಸಿ ಅಸ್ವಸ್ಥಗೊಂಡು ವ್ಯಕ್ತಿ ಸಾವು
MUST WATCH
ಹೊಸ ಸೇರ್ಪಡೆ
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.