ಬೀದಿ ವ್ಯಾಪಾರಿಗಳಿಗೆ ಐಡಿ ಕಾರ್ಡ್‌


Team Udayavani, Mar 7, 2017, 12:21 PM IST

trader-oad-side.jpg

ಬೆಂಗಳೂರು: ನಗರದ ಬೀದಿ ಬದಿ ವ್ಯಾಪಾರಿಗಳಿಗೆ ಶೀಘ್ರದಲ್ಲೇ ಬಿಬಿಎಂಪಿಯಿಂದ ವ್ಯಾಪಾರ ನಡೆಸುವ ಸಂಬಂಧ ಗುರುತಿನ ಚೀಟಿ ವಿತರಣೆಯಾಗಲಿದೆ. 
ಈ ಸಂಬಂಧ ನಗರದಲ್ಲಿರುವ ಬೀದಿ ಬದಿ ವ್ಯಾಪಾರಿಗಳ ಸಮೀಕ್ಷೆ ನಡೆಸಲು ಪಾಲಿಕೆ ನಿರ್ಧರಿಸಿದೆ. ವಾರ್ಡ್‌ ಮಟ್ಟದಿಂದ ಆಯುಕ್ತರವರೆಗೆ ಮೂರು ಹಂತಗಳಲ್ಲಿ ಸಮಿತಿ ರಚಿಸಲಾಗಿದೆ. ಸಮಿತಿ ವರದಿ ಪರಿಶೀಲಿಸಿ ಎಲ್ಲ ವ್ಯಾಪಾರಿಗಳಿಗೆ ಗುರುತಿನ ಚೀಟಿ ನೀಡಲು ತೀರ್ಮಾನಿಸಲಾಗಿದೆ. 

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ ಪ್ರಸಾದ್‌, “ಗುರುತಿನ ಚೀಟಿ ವಿತರಣೆ ಸಂಬಂಧ ಬೀದಿ ಬದಿ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಸಾಮಾನ್ಯವಾಗಿ ವ್ಯಾಪಾರಿಗಳಿಗೆ ಪರವಾನಗಿ ಇರುತ್ತದೆ. ಆದರೆ, ಬೀದಿ ವ್ಯಾಪಾರಿಗಳಿಗೆ ಈ ಪರವಾನಗಿಗಳು ಇರುವುದಿಲ್ಲ. ಹೀಗಾಗಿ, ವ್ಯಾಪಾರ ನಡೆಸಲು ಕಷ್ಟ ಜತೆಗೆ ಹಲವು ರೀತಿಯ ಕಿರುಕುಳ ಅನುಭವಿಸಬೇಕಾಗುತ್ತದೆ. ಇದನ್ನು ತಪ್ಪಿಸಲು ನಿರ್ದಿಷ್ಟವಾದ ಜಾಗಗಳಲ್ಲಿ ನಿಯಮಿತವಾಗಿ ವ್ಯಾಪಾರ ಮಾಡಿಕೊಂಡು ಬರುತ್ತಿರುವವರಿಗೆ ಗುರುತಿನ ಚೀಟಿ ವಿತರಿಸಲಾಗುವುದು,” ಎಂದು ತಿಳಿಸಿದರು. 

ಲಕ್ಷ ವ್ಯಾಪಾರಿಗಳಿರುವ ಅಂದಾಜು: ಮೇಯರ್‌ ಜಿ. ಪದ್ಮಾವತಿ ಮಾತನಾಡಿ, “ನಗರದಲ್ಲಿ ಅಂದಾಜು ಒಂದು ಲಕ್ಷ ಬೀದಿ ಬದಿ ವ್ಯಾಪಾರಿಗಳು ಇರಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಈ ಬಗ್ಗೆ ಸಮೀಕ್ಷೆ ನಡೆಸಲು ವಾರ್ಡ್‌ ಮಟ್ಟದಲ್ಲಿ ಸಮಿತಿಗಳನ್ನು ರಚಿಸಲಾಗುವುದು. ಈ ಸಮಿತಿಗಳಲ್ಲಿ ಸ್ಥಳೀಯ ಠಾಣೆ ಪೊಲೀಸರು, ಕಂದಾಯ ವಿಭಾಗದ ಅಧಿಕಾರಿಗಳು ಕೂಡ ಇರುತ್ತಾರೆ. ಅವರು ನೀಡುವ ವರದಿಯನ್ನು ಮರುಪರಿಶೀಲಿಸಿ, ನಂತರ ಗುರುತಿನ ಚೀಟಿ ನೀಡಲಾಗುವುದು. ಒಂದು ಕುಟುಂಬಕ್ಕೆ ಒಂದೇ ಗುರುತಿನ ಚೀಟಿ ವಿತರಿಸಲಾಗುವುದು. ಇದರಲ್ಲಿ ಕುಟುಂಬದ ಸದಸ್ಯರೆಲ್ಲರ ಭಾವಚಿತ್ರಗಳೂ ಇರುತ್ತವೆ. ಹೀಗಾಗಿ, ವಂಚಿಸಲಿಕ್ಕೂ ಅವಕಾಶ ಇಲ್ಲ,” ಎಂದು ಹೇಳಿದರು. 

ಗುರುತಿನ ಚೀಟಿ ಪಡೆದು ವ್ಯಾಪಾರ ನಡೆಸುತ್ತಿರುವ ವ್ಯಾಪಾರಿಗಳಿಗೆ ಕುಡಿಯುವ ನೀರು, ಶೌಚಾಲಯ ಮತ್ತಿತರ ವ್ಯವಸ್ಥೆ ಕೂಡ ಮಾಡಲಾಗುವುದು. ಆದರೆ, ಬೀದಿ ವ್ಯಾಪಾರಿಗಳು ಉತ್ಪಾದಿಸುವ ಘನತ್ಯಾಜ್ಯದ ವ್ಯವಸ್ಥಿತ ವಿಲೇವಾರಿ ಆಯಾ ವ್ಯಾಪಾರಿಗಳ ಹೊಣೆ. ಎಲ್ಲೆಂದರಲ್ಲಿ ಕಸ ಎಸೆಯುವಂತಿಲ್ಲ. ಬೆಳಿಗ್ಗೆ ವ್ಯಾಪಾರಕ್ಕೂ ಮುನ್ನ ಅಥವಾ ಸಂಜೆ ವ್ಯಾಪಾರ ಮುಗಿದ ನಂತರ ತ್ಯಾಜ್ಯವನ್ನು ಹತ್ತಿರದ ಕಸ ಸಂಗ್ರಹ ತೊಟ್ಟಿಗೆ ವಿಂಗಡಣೆ ಮಾಡಿ, ವಿಲೇವಾರಿ ಮಾಡಲು ಸೂಚಿಸಲಾಗುವುದು ಎಂದು ವಿವರಿಸಿದರು. 

ಬಿಬಿಎಂಪಿ ಪೌರಕಾರ್ಮಿಕರಿಗೆ ನೀಡಬೇಕಾದ ಐದು ತಿಂಗಳ ಹಿಂಬಾಕಿ ಪೈಕಿ ಮೊದಲ ಹಂತದಲ್ಲಿ ಮೂರು ತಿಂಗಳ ಹಿಂಬಾಕಿ 70 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಆಗಸ್‌-ಡಿಸೆಂಬರ್‌ವರೆಗಿನ ಹಿಂಬಾಕಿ ಪೈಕಿ ಮೂರು ತಿಂಗಳ ಬಾಕಿ ಬಿಡುಗಡೆಯಾಗಿದೆ. ಶೀಘ್ರದಲ್ಲೇ ಉಳಿದ ಹಣ ಬಿಡುಗಡೆ ಮಾಡಲಾಗುವುದು. ಪೌರಕಾರ್ಮಿಕರ ವೇತನ 10 ಸಾವಿರದಿಂದ ಏಕಾಏಕಿ 17 ಸಾವಿರ ರೂ. ಆಗಿದ್ದರಿಂದ ಪಾಲಿಕೆಗೆ ನೂರು ಕೋಟಿ ರೂ. ಹೊರೆಯಾಗಿದೆ. 
-ಮಂಜುನಾಥ್‌ ಪ್ರಸಾದ್‌, ಆಯುಕ್ತ

ಟಾಪ್ ನ್ಯೂಸ್

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agriculture: ಏಕಕಾಲದಲ್ಲಿ ಮೀನು, ತರಕಾರಿ ಬೆಳೆಯುವ ಅಕ್ವಾಫೋನಿಕ್ಸ್‌ ಕೃಷಿ

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Agricultural fair: ಕೃಷಿ ಮೇಳಕ್ಕೆ ನಿನ್ನೆ ಸುಮಾರು 10.25 ಲಕ್ಷ ಜನರ ಭೇಟಿ!

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Arrested: 15 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಫ‌ರ್ಹಾನ್‌ ಸೆರೆ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Bengaluru Airport: ಏರ್ ಪೋರ್ಟ್‌ನಲ್ಲಿ ಆಮೆ, ಮೊಸಳೆ ಸಾಗಣೆ ಯತ್ನ

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

Crime: ಮೊಬೈಲ್‌ಗಾಗಿ ಜಗಳ; ಪುತ್ರನ ಕೊಂದ ಅಪ್ಪ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

2

Udupi: ಯುವತಿ ನಾಪತ್ತೆ; ದೂರು ದಾಖಲು

Sahakara-saptha

Cooperation: ನಬಾರ್ಡ್‌ ನೆರವು ಕಡಿತದಿಂದ ರಾಜ್ಯದ ರೈತರಿಗೆ ದೊಡ್ಡ ಅನ್ಯಾಯ: ಸಿದ್ದರಾಮಯ್ಯ

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.