ತೋಟಗಾರಿಕೆಗೆ ವಿಶೇಷ ಪ್ಯಾಕೇಜ್ ಘೋಷಿಸಿ
Team Udayavani, Mar 7, 2017, 3:58 PM IST
ಕಲಬುರಗಿ: ಈ ಭಾಗದಲ್ಲಿ ತೋಟಗಾರಿಕೆ ಬೆಳೆ ಬೆಳೆಯುವ ರೈತರಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ವಿಶೇಷ ಪ್ಯಾಕೇಜ್ ಪ್ರಕಟಿಸಿ ಹೆಚ್ಚಿನ ಆರ್ಥಿಕ ಪ್ರೋತ್ಸಾಹ ನೀಡಬೇಕು ಎಂದು ಕರ್ನಾಟಕ ರಾಜ್ಯ ತೋಟಗಾರಿಕೆ ಮಹಾಮಂಡಳಿ ಅಧ್ಯಕ್ಷಬಸವರಾಜ ಆರ್. ಪಾಟೀಲ ಹೇಳಿದರು.
ನಗರದ ಶರಣಬಸವೇಶ್ವರ ಕೆರೆ ಉದ್ಯಾನವನದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮೂರು ದಿನಗಳಫಲ-ಪುಷ್ಪ ಪ್ರದರ್ಶನ ಪ್ರದರ್ಶದಲ್ಲಿ ಪಾಲ್ಗೊಂಡ ಜಿಲ್ಲೆಯ ವಿವಿಧ ತಾಲೂಕುಗಳ 70 ರೈತರಿಗೆ ಪ್ರಶಂಸಾ ಪತ್ರ ಮತ್ತು ಸಮಗ್ರ ತೋಟಗಾರಿಕೆ ಕೈಪಿಡಿ ವಿತರಿಸಿ ಅವರು ಮಾತನಾಡಿದರು.
ತೋಟಗಾರಿಕೆ ಬೆಳೆಗಳಿಗೆ ಸೂಕ್ತ ಬೆಂಬಲ ಬೆಲೆ ಪ್ರಕಟಿಸಬೇಕು. ಜಿಲ್ಲೆಯ ವಾತಾವರಣ ತೋಟಗಾರಿಕೆ ಬೆಳೆಗಳಿಗೆ ಸೂಕ್ತವಾಗಿದ್ದು, ರೈತರಲ್ಲಿ ಜಾಗೃತಿ ಮೂಡಿಸಲು ತೋಟಗಾರಿಕೆ ಅಧಿಧಿಕಾರಿಗಳು ನಿರಂತರ ಪ್ರಯತ್ನ ಮಾಡಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿದ್ರಾಮಪ್ಪ ಧಂಗಾಪುರ ಮಾತನಾಡಿ, ಈ ಭಾಗದಲ್ಲಿ ತೋಟಗಾರಿಕೆ ಬೆಳೆ ಸಮಗ್ರ ಅಭಿವೃದ್ಧಿಗೆ ಅನುವಾಗುವಂತೆ ಸರ್ಕಾರ ತೋಟಗಾರಿಕೆ ಕಾಲೇಜು ಪ್ರಾರಂಭಿಸಬೇಕು. ರೈತ ಸಮುದಾಯ ಕೃಷಿಯೊಂದನ್ನೇ ಅವಲಂಬಿಸದೆ ಪ್ರತಿ ದಿನ ಆದಾಯ ಒದಗಿಸುವ ತೋಟಗಾರಿಕೆ, ಹೈನುಗಾರಿಕೆ, ರೇಷ್ಮೆಮುಂತಾದ ಉಪಕಸುಬುಗಳನ್ನು ಕೈಗೊಳ್ಳಬೇಕು.
ಇದಕ್ಕಾಗಿ ಸರ್ಕಾರ ವಿಶೇಷ ಯೋಜನೆ ರೂಪಿಸಬೇಕು. ಮಹಿಳೆಯರು ತಮ್ಮ ಕುಟುಂಬದ ಆರೋಗ್ಯಕರ ಜೀವನಕ್ಕಾಗಿ ಕೈತೋಟಕೈಗೊಳ್ಳುವ ಮೂಲಕ ತಮ್ಮ ತಮ್ಮ ಮನೆಗಳಿಗೆ ಬೇಕಾಗುವ ತಾಜಾ ಹಣ್ಣು ಮತ್ತು ತರಕಾರಿಗಳನ್ನು ಬೆಳೆಯಬೇಕು ಎಂದು ಹೇಳಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಪ ನಿರ್ದೇಶಕ ಜಿ.ಚಂದ್ರಕಾಂತ ಅತಿಥಿಗಳಾಗಿದ್ದರು.
ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಮೊಹಮ್ಮದ್ ಅಲಿ ಪ್ರಾಸ್ತಾವಿಕವಾಗಿ ಮಾತನಾಡಿದರು. ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಶಿವಕುಮಾರ, ಸಂತೋಷ, ರಾಘವೇಂದ್ರ ಉಕ್ಕಿನಾಳ, ಬಾಬುರಾವ ಪಾಟೀಲ, ರಾಹುಲಕುಮಾರ ಬಾವಿದೊಡ್ಡಿ, ಸಹಾಯಕ ನಿರ್ದೇಶಕರಾದ ಸುರೇಂದ್ರನಾಥ, ರಾಜಕುಮಾರ, ಶಂಕರಗೌಡ ಪಾಲ್ಗೊಂಡಿದ್ದರು. ಸಹಾಯಕ ತೋಟಗಾರಿಕೆ ಅಧಿಕಾರಿ ಬಸವರಾಜೇಶ್ವರಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು
ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ
Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು
Hunasagi: ನಕಲಿ ಕ್ಲಿನಿಕ್ ಮೇಲೆ ತಾಲೂಕು ವೈದ್ಯಾಧಿಕಾರಿಗಳಿಂದ ದಾಳಿ
MUST WATCH
ಹೊಸ ಸೇರ್ಪಡೆ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.