ಬೆಂಗಳೂರಲ್ಲಿ ಮೈಕ್ರೋಸಾಫ್ಟ್ ಕಚೇರಿ ಶುರು?
Team Udayavani, Mar 8, 2017, 3:45 AM IST
ನವದೆಹಲಿ: ಪ್ರಪಂಚದ ಅತಿದೊಡ್ಡ ಸಾಫ್ಟ್ವೇರ್ ಕಂಪನಿ “ಮೈಕ್ರೋಸಾಫ್ಟ್’ ಬೆಂಗಳೂರಿನಲ್ಲಿ ತನ್ನ ಕಚೇರಿ ತೆರೆಯಲು ಸಿದ್ಧತೆ ನಡೆಸಿದೆಯೇ? ಆಂಗ್ಲ ಪತ್ರಿಕೆಯೊಂದರ ವರದಿ ಪ್ರಕಾರ ಖಾಸಗಿ ಸಂಸ್ಥೆ ಜತೆ ಅದು ಒಂಭತ್ತು ವರ್ಷಗಳ ಗುತ್ತಿಗೆ ಒಪ್ಪಂದ ಮಾಡಿಕೊಂಡಿದೆ. ಒಟ್ಟು 6 ಲಕ್ಷ ಚದರ ಅಡಿ ವ್ಯಾಪ್ತಿಯಲ್ಲಿ ಕಂಪನಿಯ ನೂತನ ಕಚೇರಿ ಇರಲಿದೆ. ಜತೆಗೆ 6 ಸಾವಿರ ಉದ್ಯೋಗಿಗಳು ಕಾರ್ಯನಿರ್ವಹಿಸಲಿದ್ದಾರೆ ಎನ್ನಲಾಗುತ್ತಿದೆ. ಬೆಂಗಳೂರು ಮತ್ತು ದೇಶದ ಇತರ ಪ್ರತಿಭಾವಂತ ಯುವಕರಿಗೆ ಹೆಚ್ಚಿನ ಅವಕಾಶ ಸಿಗಬೇಕೆಂಬ ಕಂಪನಿ ಸಿಇಒ ಸತ್ಯಾ ನಾದೆಳಾÉ ಆಶಯದಂತೆ ಈ ನಿರ್ಧಾರಕ್ಕೆ ಬರಲಾಗುತ್ತಿದೆ. ಹಾಲಿ ವರ್ಷದಲ್ಲಿಯೇ ಅದು ಕಾರ್ಯಾರಂಭ ಮಾಡಲಿದೆ ಎಂದು ಹೇಳಲಾಗಿದೆ.
ಮೈಕ್ರೋಸಾಫ್ಟ್ ಕಂಪನಿಯ ವಕ್ತಾರರೊಬ್ಬರು ಪರೋಕ್ಷವಾಗಿ ಈ ಮಾಹಿತಿಯನ್ನು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ. “ಬೆಂಗಳೂರಿನಲ್ಲಿ ನಮ್ಮ ಉದ್ಯೋಗಿಗಳ ಸಂಖ್ಯೆ ಬಹಳಷ್ಟಿದೆ. ಒಮ್ಮೆ ನಮ್ಮ ಯೋಜನೆ ಪೂರ್ಣವಾಯಿತೆಂದರೆ ಅದರ ಮಾಹಿತಿ ಹಂಚಿಕೊಳ್ಳುತ್ತೇವೆ’ ಎಂದರು. ಇತ್ತೀಚೆಗಷ್ಟೇ ಆ್ಯಪಲ್ ಕಂಪೆನಿ ಬೆಂಗಳೂರಲ್ಲಿ 40 ಸಾವಿರ ಚದರ ಅಡಿ ಸ್ಥಳ ಗುತ್ತಿಗೆ ಪಡೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
DGP: ಮಹಾರಾಷ್ಟ್ರದ ನೂತನ ಡಿಜಿಪಿ ಆಗಿ ಐಪಿಎಸ್ ಅಧಿಕಾರಿ ಸಂಜಯ್ ವರ್ಮಾ ನೇಮಕ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
Maharashtra poll ; ಕಣದಲ್ಲಿ ಉಳಿದಿದ್ದು 4,140 ಅಭ್ಯರ್ಥಿಗಳು
DMK ನಾಶವೇ ಹೊಸ ಪಕ್ಷದ ಉದ್ದೇಶ: ವಿಜಯ್ ವಿರುದ್ಧ ಸ್ಟಾಲಿನ್ ಕಿಡಿ
MUST WATCH
ಹೊಸ ಸೇರ್ಪಡೆ
Session:ನ.25- ಡಿ.20- ಸಂಸತ್ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?
Malpe ಫಿಶರೀಸ್ ಕಾಲೇಜು: ದುರ್ವಾಸನೆಯಲ್ಲೇ ಪಾಠ
Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!
County Championship: ಶಕಿಬ್ ಹಸನ್ ಬೌಲಿಂಗ್ ಶೈಲಿ ಬಗ್ಗೆ ಅಂಪೈರ್ ಗಳ ಆಕ್ಷೇಪ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.