ಕೆವಿಜಿ ವೈದ್ಯ ಕಾಲೇಜಿಗೆ: ನವಜಾತ ಶಿಶು ರಕ್ಷಣಾ ಘಟಕಕ್ಕೆ 25 ಲ.ರೂ.
Team Udayavani, Mar 8, 2017, 11:41 AM IST
ಮಂಗಳೂರು: ಕರ್ಣಾಟಕ ಬ್ಯಾಂಕ್ ತನ್ನ ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಯೋಜನೆಯಲ್ಲಿ ಸುಳ್ಯದ ಕುರುಂಜಿ ವೆಂಕಟರಮಣ ಗೌಡ ಮೆಡಿಕಲ್ ಕಾಲೇಜಿನಲ್ಲಿ “ನವಜಾತ ಶಿಶುಗಳ ನಿರ್ವಹಣ ಘಟಕ’ ಸ್ಥಾಪನೆಗೆ 25 ಲಕ್ಷ ರೂ. ನೆರವು ನೀಡಿದೆ. ಅವಧಿಗೆ ಮುನ್ನ ಜನಿಸುವ ಶಿಶುಗಳನ್ನು ಈ ಅತ್ಯಾಧುನಿಕ ತಂತ್ರಜ್ಞಾನದ ಘಟಕದಲ್ಲಿ ಸಂರಕ್ಷಣೆ ಮಾಡಲಾಗುತ್ತಿದೆ.
ಘಟಕವನ್ನು ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಪಿ. ಜಯರಾಮ ಭಟ್ ಉದ್ಘಾಟಿಸಿದರು. “ಕಾರ್ಪೊರೇಟ್ ಸಾಮಾಜಿಕ ಹೊಣೆಗಾರಿಕೆ ಯೋಜನೆಯಲ್ಲಿ ಶಾಲಾ ಕಾಲೇಜುಧಿಗಳ ಕೊಠಡಿಗಳ ನಿರ್ಮಾಣ, ಕುಡಿಯುವ ನೀರು, ಹಸುರೀಕರಣ, ಆರೋಗ್ಯ ರಕ್ಷಣೆ ಮುಂತಾದ ಕಾರ್ಯಗಳಿಗೆ ಈ ವರ್ಷ 6 ಕೋಟಿ ರೂ.ಗೂ ಅಧಿಕ ಮೊತ್ತ ಒದಗಿಸಲಾಗಿದೆ’ ಎಂದು ತಿಳಿಸಿದರು.
ಅಕಾಡೆಮಿ ಆಫ್ ಲಿಟರಲ್ ಎಜುಕೇಶನ್ ಸಂಸ್ಥೆಯ ಅಧ್ಯಕ್ಷ- ಕಾಲೇಜಿನ ವೈದ್ಯಕೀಯ ನಿರ್ದೇಶಕ ಡಾ| ಕೆ. ವಿ. ಚಿದಾನಂದ, ಪ್ರಾಂಶುಪಾಲೆ ಡಾ| ರೂಪಾ ಕುಲಕರ್ಣಿ, ಸಂಸ್ಥೆಯ ಖಜಾಂಚಿ ಶೋಭಾ ಚಿದಾನಂದ, ಡಾ| ಶಿವನ ಗೌಡ, ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್, ಬ್ಯಾಂಕಿನ ಎಜಿಎಂ ನಾಗರಾಜ ಆರ್. ಹೆಬ್ಟಾರ್, ಚೀಫ್ ಮ್ಯಾನೇಜರ್ ಶ್ರೀನಿವಾಸ ದೇಶಪಾಂಡೆ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್ ಯತ್ನಾಳ್
NH Highway Works: ಬಿ.ಸಿ.ರೋಡು: ಟ್ರಾಫಿಕ್ ಜಾಮ್
Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ
ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ
Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.