ಎಟಿಎಂ ಹಲ್ಲೆಕೋರ 8 ದಿನ ಪೊಲೀಸ್‌ ವಶಕ್ಕೆ


Team Udayavani, Mar 8, 2017, 12:03 PM IST

police-arresr.jpg

ಬೆಂಗಳೂರು: ರಾಜ್ಯವನ್ನು ಬೆಚ್ಚಿ ಬೀಳಿಸಿದ್ದ ಎಟಿಎಂ ಹಲ್ಲೆ ಪ್ರಕರಣದ ಆರೋಪಿ ಮಧುಕರ್‌ರೆಡ್ಡಿಯನ್ನು ಎಸ್‌.ಜೆ ಪಾರ್ಕ್‌ ಪೊಲೀಸರು ಮಂಗಳವಾರ ಬೆಳಗ್ಗೆ 6ನೇ ಎಸಿಎಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಿ ಎಂಟು ದಿನಗಳ ಕಾಲ ಪೊಲೀಸ್‌ ವಶಕ್ಕೆ ಪಡೆದಿದ್ದಾರೆ. 

ಮೂರು ವರ್ಷಗಳ ನಂತರ ಜ.31 ರಂದು ಆಂಧ್ರ ಚಿತ್ತೂರು ಜಿಲ್ಲೆ ಮದನಪಲ್ಲಿಯಲ್ಲಿ ಬಂಧನಕ್ಕೊಳಗಾಗಿದ್ದ ಆರೋಪಿ ಮಧುಕರರೆಡ್ಡಿಯನ್ನು ನಗರ ಪೊಲೀಸರು ಬಾಡಿ ವಾರೆಂಟ್‌ ಮೇಲೆ ಆಂಧ್ರ ಪೊಲೀಸರಿಂದ ವಶಕ್ಕೆ ಪಡೆದು ನಗರಕ್ಕೆ ಕರೆ ತಂದಿದ್ದಾರೆ. 

ಮಧುಕರ್‌ ರೆಡ್ಡಿಯನ್ನು ಮಂಗಳವಾರ 6ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಆರೋಪಿಯು ಎಟಿಎಂನಲ್ಲಿ ಜ್ಯೋತಿ ಉದಯ್‌ ಎಂಬ ಮಹಿಳೆ ಮೇಲೆ ಹಲ್ಲೆ ನಡೆಸಿರುವ ಸಂಬಂಧ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದು, ಸ್ಥಳ ಮಹಜರು ಬಾಕಿ ಇರುವ ಹಿನ್ನೆಲೆಯಲ್ಲಿ ಪೊಲೀಸರು 14 ದಿನಗಳ ಕಾಲ ಆತನನ್ನು ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಪ್ರಕರಣದ ಬಗ್ಗೆ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಘವೇಂದ್ರ ಅವರು ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ಮಾ.14ರ ವರೆಗೆ ಪೊಲೀಸರ ವಶಕ್ಕೆ ನೀಡಿದರು. ಎಟಿಎಂ ಹಲ್ಲೆ ಪ್ರಕರಣದಲ್ಲಿ ವಿಚಾರಣೆಗಾಗಿ ಬೆಂಗಳೂರಿಗೆ ಕರೆತಂದಿರುವ ಮಧುಕರ್‌ ರೆಡ್ಡಿಯನ್ನು ಹಲಸೂರು ಗೇಟ್‌ ಎಸಿಪಿ ತಿಮ್ಮಯ್ಯ ನೇತೃತ್ವದ ತಂಡ ವಿಚಾರಣೆಗೊಳಪಡಿಸಲಿದೆ.

ಘಟನೆಯ ದಿನ ಕೃತ್ಯಕ್ಕೆ ಬಳಸಿದ್ದ ಮಚ್ಚು ಮತ್ತು ಆರೋಪಿ ಧರಿಸಿದ್ದ ಬಟ್ಟೆ ಹಾಗೂ ಬ್ಯಾಗ್‌ಗಳನ್ನು ತನಿಖೆಯ ದೃಷ್ಟಿಯಿಂದ ವಶಕ್ಕೆ ಪಡೆಯಬೇಕಿದೆ. ಇದಾದ ನಂತರ ಆರೋಪಿ ಮಧುಕರ್‌ ರೆಡ್ಡಿಯಿಂದ ಘಟನಾ ಸ್ಥಳದ ಮಹಜರ್‌ ಮಾಡುತ್ತಾರೆ. ಇದಾದ ಬಳಿಕ ಗುರುತು ಪತ್ತೆಗೆ ಪರೇಡ್‌ ನಡೆಸಲಿದ್ದಾರೆ.

ಚಪ್ಪಲಿ ಬಿಟ್ಟು ಕೋರ್ಟ್‌ ಹಾಲ್‌ಗೆ ಬರುವಂತೆ ಸೂಚಿಸಿದ ನ್ಯಾಯಾಧೀಶರು!
ಪೊಲೀಸರು ಆರೋಪಿಯನ್ನು ನ್ಯಾಯಾಧೀಶ ರಾಘವೇಂದ್ರ ಅವರ ಮುಂದೆ ಹಾಜರುಪಡಿಸಿದಾಗ ಮಧುಕರ್‌ ರೆಡ್ಡಿ ಚಪ್ಪಲಿ ಹಾಕಿಕೊಂಡು ನ್ಯಾಯಾಲಯ ಪ್ರವೇಶಿಸುತ್ತಿದ್ದ. ಇದನ್ನು ಕಂಡ  ನ್ಯಾಯಾಧೀಶರು ಕೋರ್ಟ್‌ ಹಾಲ್‌ ಹೊರಗೆ ಚಪ್ಪಲಿ ಬಿಟ್ಟು ಬರುವಂತೆ ಸೂಚಿಸಿದರು.

ಇದರಿಂದ ಕೆಲಕಾಲ ಆರೋಪಿ ಮಧುಕರ್‌ ರೆಡ್ಡಿ ತಬ್ಬಿಬ್ಟಾದ. ಬಳಿಕ ಅವರ ಆಜ್ಞೆಯಂತೆ ಕೋರ್ಟ್‌ ಹಾಲ್‌ನ ಹೊರಗೆ ಚಪ್ಪಲಿ ಬಿಟ್ಟು ಒಳಗೆ ತೆರಳಿದ. ಆದರೆ ನ್ಯಾಯಾಧೀಶರು ಯಾವ ಉದ್ದೇಶಕ್ಕೆ ಕೋರ್ಟ್‌ ಹಾಲ್‌ನ ಹೊರಗೆ ಚಪ್ಪಲಿ ಬಿಡುವಂತೆ ಹೇಳಿದರು ಎಂಬುದು ಮಾತ್ರ ಪ್ರಶ್ನೆಯಾಗಿಯೇ ಉಳಿಯಿತು.

ಟಾಪ್ ನ್ಯೂಸ್

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

Desi Swara@150: ದಾಸರೆಂದರೆ ದಾಸರಯ್ಯಾ…ಸಾಹಿತ್ಯ ಲೋಕದಲ್ಲಿ “ಕನ್ನಡ ಮತ್ತು ಕರ್ನಾಟಕ’

1

Lawyer Jagadish: ಮತ್ತೆ ಬಿಗ್‌ ಬಾಸ್‌ಗೆ ಕಾರ್ಯಕ್ರಮಕ್ಕೆ ಲಾಯರ್‌ ಜಗದೀಶ್‌ ಎಂಟ್ರಿ..!

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

11-KEA-exam

Bengaluru: 54 ಎಂಜಿನಿಯರಿಂಗ್‌ ಸೀಟ್‌ ಬ್ಲಾಕ್‌: ಕೆಇಎ ಶಂಕೆ

6

Bengaluru: ಕಸವನ್ನು ಗೊಬ್ಬರವಾಗಿಸುವ “ಕಪ್ಪು ಸೈನಿಕ ನೊಣ’!

3-beehive

Bengaluru: ಇನ್ಮುಂದೆ ಜೇನುಗೂಡು ಕಟ್ಟಬೇಕಿಲ್ಲ; 3ಡಿ ಗೂಡು ಆವಿಷ್ಕಾರ!

4-cock

Bengaluru: ಮಾಂಸದ ನಾಟಿ ಕೋಳಿಗೆ ಭರ್ಜರಿ ಡಿಮ್ಯಾಂಡ್‌!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ

14-darshan

Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್‌

13-notes-1

Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ

Maharashtra Election: Focus on winning the booth: Modi’s Mantra to Workers

Maharashtra Election: ಬೂತ್‌ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.