ಜಯಪ್ರಕಾಶ್‌ ಹೆಗ್ಡೆಗೆ ಬಿಜೆಪಿಯಲ್ಲಿ ಅವಕಾಶಗಳಿವೆ, ಸವಾಲುಗಳೂ ಇವೆ!

Team Udayavani, Mar 8, 2017, 12:12 PM IST

Untitled-1.jpg

ಉಡುಪಿ : ಕರಾವಳಿಯ ಪ್ರಭಾವೀ ರಾಜಕಾರಣಿ, ಅಪಾರ ಬೆಂಬಲಿಗರನ್ನು ಹೊಂದಿರುವ ಮಾಜಿ ಸಚಿವ, ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ ಅವರು ಬುಧವಾರ ಅಧಿಕೃತವಾಗಿ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇದು ಅವರ ರಾಜಕೀಯ ಜೀವನದ 3 ನೇ ಪಕ್ಷವಾಗಿದೆ. 

ಜನತಾ ಪರಿವಾರದಿಂದ ರಾಜಕೀಯ ಜೀವನ ಆರಂಭಿಸಿದ್ದ ಹೆಗ್ಡೆ ಅವರು ಸೋಲನ್ನೇ ಸವಾಲಾಗಿ ಸ್ವೀಕರಿಸಿ ಜನರ ನಡುವಿನಿಂದ ಬ್ರಹ್ಮಾವರ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿ ಸಚಿವರಾಗಿಯೂ ಕಾರ್ಯನಿರ್ವಹಿಸಿದವರು.  ಜನತಾ ಪರಿವಾರ ಒಡೆದು ಹೋದ ಸಂದರ್ಭ  ಯಾವ ಬಣದತ್ತವೂ ವಾಲದೆ ಪಕ್ಷೇತರನಾಗಿ 2 ಬಾರಿ  ಚುನಾವಣೆ ಎದುರಿಸಿ  ಜನರ ಆಶೀರ್ವಾದ ಪಡೆದಿದ್ದರು. 

ಕ್ಷೇತ್ರ ಮರುವಿಂಗಡಣೆಯ ಬಳಿಕ ಬ್ರಹ್ಮಾವರ ಕ್ಷೇತ್ರ ವಿಲೀನ ಗೊಂಡಾಗ ಕಾಂಗ್ರೆಸ್‌ ಸೇರ್ಪಡೆಯಾದ ಹೆಗ್ಡೆ  ಅವರು ಹುಟ್ಟೂರು ಕುಂದಾಪುರ ಕ್ಷೇತ್ರದಲ್ಲಿ ಅಭ್ಯರ್ಥಿಯಾದರು. ಕ್ಷೇತ್ರದ ಪ್ರಭಾವಿ ಅಭ್ಯರ್ಥಿ ಹಾಲಾಡಿ ಶ್ರೀನಿವಾಸ್‌ ಶೆಟ್ಟಿ ಅವರೆದುರು ಸೋಲು  ಅನುಭವಿಸಬೇಕಾಯಿತು. 

ಬಳಿಕ ನಡೆದ ರಾಜಕೀಯ ವಿದ್ಯಮಾನದಿಂದ ಮುಖ್ಯಮಂತ್ರಿ ಹುದ್ದೆಗೇರಿದ ಉಡುಪಿ -ಚಿಕ್ಕಮಗಳೂರು ಕ್ಷೇತ್ರದ ಸಂಸದ ಸದಾನಂದ ಗೌಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಲೋಕಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ  ಕಣಕ್ಕಿಳಿದು ಬಿಜೆಪಿ ಅಭ್ಯರ್ಥಿ ಸುನಿಲ್‌ ಕುಮಾರ್‌ ಕಾರ್ಕಳ ಅವರ ವಿರುದ್ಧ ಜಯಭೇರಿ ಬಾರಿಸಿ ಮತ್ತೆ ರಾಜಕೀಯದಲ್ಲಿ ಹೊಸ ಹುರುಪು  ಪಡೆದುಕೊಂಡರು. 

 ಕಳೆದ ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು  ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ  ಸೋಲಿನ ಬಳಿಕ ಕಾಂಗ್ರೆಸ್‌ನಲ್ಲಿ ಕಡೆಗಣನೆ ಯಿಂದ ಬೇಸರಗೊಂಡಿದ್ದ ಹೆಗ್ಡೆ ಪರಿಷತ್‌ ಚುನಾವಣೆಯ ವೇಳೆ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದು ಪಕ್ಷದಿಂದಲೇ ಅಮಾನತುಗೊಂಡಿದ್ದರು. 

ಇದೀಗ ಅಪಾರ ಬೆಂಬಲಿಗರೊಂದಿಗೆ  ಬಿಜೆಪಿಗೆ ಸೇರ್ಪಡೆಗೊಂಡಿರುವ ಹೆಗ್ಡೆ ಅವರಿಗೆ ಬಿಜೆಪಿಯಲ್ಲಿ ಮುಂಬರುವ ವಿಧಾನಸಭಾ ಚುನಾವಣೆ ಒಂದು ಪರೀಕ್ಷಾ ವೇದಿಕೆಯಾಗಲಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾ ಯ ವ್ಯಕ್ತಪಡಿಸಿದ್ದಾರೆ. 

ಕಾರಣವಿಷ್ಟೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಭಾರೀ  ಅಂತರದಲ್ಲಿ ಗೆಲುವು ಸಾಧಿಸಿ ಈಗ ಸಚಿವರಾಗಿರುವ ಪ್ರಮೋದ್‌ ಮಧ್ವರಾಜ್‌ ಅವರು ಪ್ರತಿನಿಧಿಸುತ್ತಿರುವ ಉಡುಪಿ ವಿಧಾನಸಭಾ ಕ್ಷೇತ್ರ ಮತ್ತು ಮಾಜಿ ಸಚಿವ ವಿನಯ್‌ ಕುಮಾರ್‌ ಸೊರಕೆ ಅವರು ಪ್ರತಿನಿಧಿಸುತ್ತಿರುವ ಕಾಪು ಕ್ಷೇತ್ರ ವನ್ನು ಬಿಜೆಪಿಗೆ ಗೆಲ್ಲಿಸಿ ಕೊಡುವ ಮಹತ್ತರ ಹೊಣೆ ಹೆಗ್ಡೆಯವರಿಗೆ ನೀಡಲಾಗಿದೆ ಎಂದು ಹೇಳಲಾಗಿದೆ. ಉಡುಪಿ ಕ್ಷೇತ್ರದ ಗ್ರಾಮಾಂತರ ಭಾಗದಲ್ಲಿ ಹೆಗ್ಡೆ ಅವರು ಅಪಾರ ವರ್ಚಸ್ಸು ಹೊಂದಿದ್ದು ಇದಕ್ಕೆ ಅವರ ಬೆಂಬಲಿಗರೆ ಸಾಕ್ಷಿ . 

ಕಾಪು ವಿಧಾನ ಸಭಾ ಕ್ಷೇತ್ರದಲ್ಲಿ ಹೆಗ್ಡೆ ಅವರು ಶಾಸಕರಾಗಿ ಪ್ರತಿನಿಧಿಸುತ್ತಿರುವ ಬ್ರಹ್ಮಾವರ ಕ್ಷೇತ್ರದ ಕೆಲ ಪಂಚಾಯತ್‌ಗಳು ವಿಲೀನಗೊಂಡಿದ್ದು ಅಲ್ಲಿಯೂ ಅವರ ಬೆಂಬಲಿಗರ ಪ್ರಭಾವ ಸಾಕಷ್ಟಿದೆ. ಸೊರಕೆ ಮತ್ತು ಸಚಿವ ಮಧ್ವರಾಜ್‌ ಅವರು ಈಗಾಗಲೇ ಕ್ಷೇತ್ರಗಳಲ್ಲಿ ಸಕ್ರಿಯವಾಗಿದ್ದು ಮುಂದಿನ ಚುನಾವಣೆಯಲ್ಲಿ ಅಭ್ಯರ್ಥಿಗಳಾಗುವುದು ಖಚಿತ ಎನ್ನಲಾಗಿದೆ. ಇಬ್ಬರಿಗೂ ಪ್ರಬಲ ಸ್ಪರ್ಧೆ ಒಡ್ಡಲು ಹೆಗ್ಡೆ ಅವರನ್ನು ಬಿಜೆಪಿ ಬಳಸಿಕೊಳ್ಳುವ ಸಾಧ್ಯತೆಗಳಿವೆ. 

 ಹೆಗ್ಡೆ ಅವರಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯನ್ನಾಗಿಸುವ ಭವವಸೆಯನ್ನು ಬಿಜೆಪಿ ನೀಡಿದೆ ಎಂದು ಹೇಳಲಾಗಿದೆ. 

ಈ ಹಿಂದೆ ಹೆಗ್ಡೆ ಅವರು ಕಾಂಗ್ರೆಸ್‌ ಸೇರಿದ್ದಾಗ ಅವರನ್ನು ಬೆಂಬಲಿಸುತ್ತಿದ್ದ ಕೆಲ ಮತದಾರರು ಬಿಜೆಪಿಯತ್ತ ವಾಲಿದ್ದರು. ಹೆಚ್ಚಿನ ಬೆಂಬಲಿಗರು ಕಾಂಗ್ರೆಸ್‌ ಸೇರಿದ್ದರು. ಕಾಂಗ್ರೆಸ್‌ನಲ್ಲಿದ್ದ ಕೆಲ ಮೂಲ ಕಾರ್ಯಕರ್ತರು ಬಿಜೆಪಿಗೆ ಪಕ್ಷಾಂತರ ಮಾಡಿದ್ದರು.  

ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಕರಾವಳಿಯ 13 ವಿಧಾನಸಭಾ ಕ್ಷೇತ್ರಗಳ ಪೈಕಿ ಎರಡನ್ನು ಮಾತ್ರ ಗೆದ್ದಿದ್ದ ಬಿಜೆಪಿ  ಈಗಾಗಲೇ ಪಕ್ಷ ಸಂಘಟನೆ ಬಲ ಪಡಿಸುವ ಕಾರ್ಯ ನಡೆಸುತ್ತಿದೆ. ಒಂದೆಡೆ ಕುಂದಾಪುರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ್‌ ಶೆಟ್ಟಿ ಅವರು ಬಿಜೆಪಿಗೆ ಮರಳುತ್ತಿರುವುದು, ಹೆಗ್ಡೆ ಬಿಜೆಪಿಗೆ ಸೇರ್ಪಡೆಯಾಗಿರುವುದು  ಕೇಸರಿ ಪಾಳಯಕ್ಕೆ ಹೆಚ್ಚಿನ ಬಲ ತಂದುಕೊಡುವುದರಲ್ಲಿ ಅನುಮಾನವಿಲ್ಲ. 

ಈಗಾಗಲೇ ಪಕ್ಷಾಂತರ ಪರ್ವ ಆರಂಭವಾಗಿದ್ದು  ಕರಾವಳಿಯ ರಾಜಕೀಯದಲ್ಲಿ ಹೊಸ ಬದಲಾವಣೆಗೆ ಕಾರಣವಾಗುತ್ತದೊ ಕಾದು ನೋಡಬೇಕು.

*ಗೋರ್ಪಾಡಿ ವಿಷ್ಣುದಾಸ್‌ ಪಾಟೀಲ್‌ 

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.