ಮೋದಿಜಿ ಕಲಬುರಗಿಗೆ ಬನ್ನಿ


Team Udayavani, Mar 8, 2017, 3:20 PM IST

gul7.jpg

ಕಲಬುರಗಿ: ದೇಶದ ಜನರ ನೋವು ಅರ್ಥ ಮಾಡಿಕೊಳ್ಳದೆ ನೋಟು ಬ್ಯಾನ್‌ ಮಾಡಿ ನರೇಂದ್ರ ಮೋದಿ ಅವರೇ ಅನರ್ಥ ಮಾಡಿದ್ದಿರಿ. ನಿಮ್ಮ ಪ್ರಮಾದದಿಂದ ಉಂಟಾದ ಪರಿಸ್ಥಿತಿ ನೋಡಲು ಕಲಬುರಗಿಗೆ ಬನ್ನಿ ಎಂದು ಕಲಬುರಗಿ ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಕಾರ್ಯಕರ್ತರು ಮಂಗಳವಾರ ಪ್ರಧಾನಿ ಮೋದಿ ಅವರಿಗೆ  ಪತ್ರ ಕಳಿಸುವ ಮೂಲಕ ಪ್ರತಿಭಟನೆ ಮಾಡಿದರು.

ಜಿಲ್ಲಾಧಿಕಾರಿ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಕಳುಹಿಸಲಾಯಿತು. ಇದಕ್ಕೂ ಮುನ್ನ ಜಿಲ್ಲಾಧಿಕಾರಿ  ಕಚೇರಿ ಎದುರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಚಿವ, ಹಾಲಿ ಶಾಸಕ ಖಮರುಲ್‌ ಇಸ್ಲಾಂ, ಮೋದಿ ಅವರೇ ನೀವು ನಿಮ್ಮ 50 ದಿನಗಳನ್ನು ನನಗೆ ಕೊಡಿ.

ದೊಡ್ಡದೊಂದು ಬದಲಾವಣೆ ಮಾಡುತ್ತೇನೆ ಎಂದು ದೇಶದ ಜನರಿಗೆ ನೆಮ್ಮದಿ ಕೊಡುವ ವಾಗ್ಧಾನ ಮಾಡಿದ್ದಿರಿ. ಆದರೆ ಆ 50 ದಿನಗಳಲ್ಲಿ ನೋಟು ಬ್ಯಾನ್‌  ಮಾಡಿ ಜನರ ನೆಮ್ಮದಿಯಲ್ಲ, ಇಡೀ ಜೀವನವನ್ನೇ ಕಸಿದು ಬಿಟ್ಟಿರಿ. ನಿಮ್ಮ ಹುಡುಗಾಟಿಕೆಯ ಕಪ್ಪು ಹಣ ಬಯಲು ಮಾಡುವ ದೊಡ್ಡ ಉಮೇದಿಗೆ ದೇಶದ ಜನರು ತತ್ತರಿಸಿದ್ದಾರೆ ಎಂದರು. 

ಕೂಲಿ ಕಾರ್ಮಿಕರು, ಸಂಘಟಿಕ ವಲಯ, ಅಸಂಘಟಿತ ವಲಯದ ಕಾರ್ಮಿಕರು, ಸರಕಾರಿ ನೌಕರರು ಹಾಗೂ ಬೀದಿ ವ್ಯಾಪಾರಿಗಳು, ಗ್ರಾಮೀಣ ಭಾಗದಲ್ಲಿನ ಜನರು ಕಂಗಾಲಾಗಿದ್ದಾರೆ. ಅವರಿಗೆ ನೀವು ನೀಡಿರುವ ಭರವಸೆ ಆತ್ಮವಿಶ್ವಾಸವನ್ನು ಹಾಳು ಮಾಡಿದೆ. ಇಡೀ ದೇಶ ಆಂತರಿಕವಾಗಿ, ಆರ್ಥಿಕವಾಗಿ ಜರ್ಜರಿತಗೊಂಡಿದೆ.

ಕೂಡಲೇ ಇನ್ನಷ್ಟು ಜರ್ಜರಿತವಾಗುವ ಮುನ್ನವೇ ವ್ಯವಸ್ಥೆ ಸುಧಾರಿಸಿ, ಬ್ಯಾಂಕುಗಳು ಮಾಡುತ್ತಿರುವ ಹೊಸ ಹೊಸ ಕಾನೂನು, ಉಪಟಳ ತಡೆಯಿರಿ. ಇಲ್ಲವೇ ನಿಮಗೆ ಇನ್ನೂ ದೇಶದ ಜನರ ನೋವು ಅರ್ಥವಾಗಿಲ್ಲ ಎಂದರೆ ಕಲಬುರಗಿಗೆ ನಮ್ಮ ಕ್ಷೇತ್ರಕ್ಕೆ ಬನ್ನಿ.

ನಾವು ನಿಮಗೆ ಜನರ ನೋವು ಪರಿಚಯ ಮಾಡಿಸ್ತೀವಿ ಎಂದರು. ಶಹಾಬಜಾರ ಕಾಂಗ್ರೆಸ್‌ ಬ್ಲಾಕ್‌ ಕಮಿಟಿ ಅಧ್ಯಕ್ಷ ವಿಜಯಕುಮಾರ ಪಾಟೀಲ, ಉತ್ತರ ಬ್ಲಾಕಿನ ಅಧ್ಯಕ್ಷ ಹಾಗೂಮಾಜಿ ಜಿಡಿಎ ಅಧ್ಯಕ್ಷ ಮೊಹಮ್ಮದ ಅಸಗರ್‌ ಚುಲ್‌ಬುಲ್‌ ಹಾಗು ನೂರಾರು ಕಾರ್ಯಕರ್ತರು, ಮುಖಂಡರು ಇದ್ದರು. 

ಟಾಪ್ ನ್ಯೂಸ್

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Gundlupet-Arrest

Gundlupet: ಜಿಂಕೆ ಮಾಂಸ ಸಾಗಾಣೆ: ಐವರ ಬಂಧಿಸಿದ ಅರಣ್ಯಾಧಿಕಾರಿಗಳು

amit Shah (2)

Rahul Gandhi ಭರವಸೆಗಳನ್ನು ನೀಡುತ್ತಾರೆ ಮತ್ತು ವಿದೇಶಕ್ಕೆ ಹಾರುತ್ತಾರೆ: ಶಾ ವಾಗ್ದಾಳಿ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ICC: ಬಿಸಿಸಿಐನ ಆಕ್ಷೇಪದ ನಂತರ ಚಾಂಪಿಯನ್ಸ್ ಟ್ರೋಫಿ ಪ್ರವಾಸದ ಸ್ಥಳ ಪರಿಷ್ಕರಣೆ

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  

ಖುಷಿ ಕೊಡಬಲ್ಲ ಕೆಲವು ವಿಧಾನ ತಿಳಿಸಿ…ಏನೂ ಇಲ್ಲದೆಯೂ ಸಂತೋಷವಾಗಿರಿ!  


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

Kalaburagi: ರೌಡಿ ಶೀಟರ್ ಬರ್ಬರ ಹತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

Kalaburagi: ರೌಡಿ ಶೀಟರ್ ಬರ್ಬರ ಹ*ತ್ಯೆ… ರೈಲು ಹಳಿ ಬಳಿ ಶವ ಎಸೆದು ಹೋದ ದುಷ್ಕರ್ಮಿಗಳು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

Desi Swara: ಲಕ್ಸಂಬರ್ಗ್‌ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ

ec-aa

Poll code violations ; ಖರ್ಗೆ, ನಡ್ಡಾ ಪ್ರತಿಕ್ರಿಯೆ ಕೇಳಿದ ಚುನಾವಣ ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.