ಬಿಪಿಎಲ್ ಮಹಿಳೆಯರಿಗೆ ಉಚಿತ ಎಲ್ಪಿಜಿ ಸಂಪರ್ಕ: ಆಧಾರ್ ಕಡ್ಡಾಯ
Team Udayavani, Mar 8, 2017, 3:39 PM IST
ಹೊಸದಿಲ್ಲಿ : ಪ್ರಧಾನ ಮಂತಿ ಉಜ್ವಲ ಯೋಜನೆಯಡಿ ಬಡ ಮಹಿಳೆಯರಿಗೆ ಉಚಿತ ಎಲ್ಪಿಜಿ ಸಂಪರ್ಕ ಪಡೆಯುವುದಕ್ಕೆ ಅವಕಾಶವಿದ್ದು ಇದಕ್ಕೆ ಸರಕಾರ ಆಧಾರ್ ಕಾರ್ಡ್ ಕಡ್ಡಾಯ ಮಾಡಿದೆ.
ಕಳೆದ ವರ್ಷ ಅಕ್ಟೋಬರ್ನಲ್ಲಿ ಸರಕಾರ ಎಲ್ಪಿಜಿ ಸಬ್ಸಿಡಿ ಪಡೆಯಲು ಎಲ್ಲರಿಗೂ ಆಧಾರ್ ಕಾರ್ಡ್ ಕಡ್ಡಾಯ ಮಾಡಿತ್ತು. ಆದೇ ರೀತಿ ಈಗ ಸರಕಾರ ಬಿಪಿಎಲ್ ಕುಟುಂಬಗಳ ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕ ಪಡೆಯುವುದಕ್ಕೆ ಕಡ್ಡಾಯ ಮಾಡಿದೆ.
ಕಳೆದ ವರ್ಷ ಸರಕಾರ ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು ಆರಂಭಿಸಿತ್ತು. ಇದರಡಿ ದೇಶ ಐದು ಕೋಟಿ ಬಡ ಮಹಿಳೆಯರಿಗೆ ಮೂರು ವರ್ಷಗಳ ಒಳಗೆ ಉಚಿತ ಎಲ್ಪಿಜಿ ಸಂಪರ್ಕ ನೀಡುವ ಗುರಿಯನ್ನು ಹೊಂದಿತ್ತು. ದೇಶಾದ್ಯಂತ ಶುದ್ಧ ಅಡುಗೆ ಇಂಧನ ಪೂರೈಸುವುದು ಈ ಯೋಜನೆಯಡಿ ಸರಕಾರದ ಮುಖ್ಯ ಉದ್ದೇಶವಾಗಿತ್ತು.
ಉಚಿತ ಗ್ಯಾಸ್ ಸಂಪರ್ಕ ಪಡೆಯ ಬಯಸುವ ಬಿಪಿಎಲ್ ಕುಟುಂಬದ ಮಹಿಳೆಯರು ಈಗಿನ್ನೂ ಆಧಾರ್ ಕಾರ್ಡ್ ಹೊಂದಿರದಿದ್ದರೆ ಅದನ್ನು ಮೇ 31ರ ಒಳಗಾಗಿ ಮಾಡಿಸಿಕೊಳ್ಳಬೇಕು ಎಂದು ಪೆಟ್ರೋಲಿಯಂ ಸಚಿವಾಲಯ ಹೊರಡಿಸಿರುವ ಗಜೆಟ್ ಅಧಿಸೂಚನೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.