ಫುಡ್ ಪಾಯ್ಸನ್‌ಗೆ 3 ವಿದ್ಯಾರ್ಥಿಗಳು ಬಲಿ; ಮಾಜಿ ಶಾಸಕ ಅರೆಸ್ಟ್
Team Udayavani, Mar 9, 2017, 8:57 AM IST
ತುಮಕೂರು : ಜಿಲ್ಲೆಯ ಚಿಕ್ಕನಾಯಕನ ಹಳ್ಳಿಯ ಹುಳಿಯಾರಿನಲ್ಲಿ ವಿದ್ಯಾವಾರಿಧಿ ಇಂಟರ್‌ನ್ಯಾಷನಲ್ ಬೋರ್ಡ್ ಶಾಲೆಯ ಹಾಸ್ಟೆಲ್‌ನಲ್ಲಿ ಫುಡ್ ಪಾಯ್ಸನ್‌ಗೆ ಮೂವರು ವಿದ್ಯಾರ್ಥಿಗಳು ಬಲಿಯಾಗಿದ್ದು, ಇಬ್ಬರು ತೀವ್ರ ಅಸ್ವಸ್ಥರಾಗಿದ್ದಾರೆ.
ಬುಧವಾರ ರಾತ್ರಿ ಊಟದ ಬಳಿಕ ನಾಲ್ವರು ವಿದ್ಯಾರ್ಥಿಗಳು ಮತ್ತು ಹಾಸ್ಟೆಲ್ ಸ್ಯೆಕುರಿಟಿ ಗಾರ್ಡ್ ತೀವ್ರ ಅಸ್ವಸ್ಥಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆಗೆ ಸ್ಪಂದಿಸದೆ ವಿದ್ಯಾರ್ಥಿಗಳಾದ ಶಾಂತಮೂರ್ತಿ(15),ಶ್ರೇಯಸ್(15)ಮತ್ತು ಆಕಾಂಕ್ಷ್
ಪಲ್ಲಕ್ಕಿ(15)ಕೊನೆಯುಸಿರೆಳೆದಿದ್ದು, ಇನ್ನುಳಿದ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು ಚಿಕಿತ್ಸೆ ಮುಂದುವರಿಸಲಾಗಿದೆ. ಆಸ್ಪತ್ರೆಯ ಎದುರು ಮೃತ ವಿದ್ಯಾರ್ಥಿಗಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ಜಿಲ್ಲಾಸ್ಪತ್ರೆಗೆ ಜಿಲ್ಲಾಧಿಕಾರಿ ಕೆ.ಪಿ.ಮೋಹನ್ ರಾಜ್ ಭೇಟಿ ನೀಡಿ ಘಟನೆಯ ಕುರಿತು ವಿವರ ಪಡೆದಿದ್ದಾರೆ. ಘಟನೆಗೆ ಕಾರಣವೇನೆಂದು ವರದಿ ಬಂದ ಬಳಿಕ ತಿಳಿಸುವುದಾಗಿ ಡಿಎಚ್‌ಓ ರಂಗಸ್ವಾಮಿ ತಿಳಿಸಿದ್ದಾರೆ.
ಹಾಸ್ಟೆಲ್‌ನಲ್ಲಿ 30 ಮಂದಿ ವಿದ್ಯಾರ್ಥಿಗಳಿದ್ದು 25 ಮಂದಿ ಮೊಸರನ್ನ ಸೇವಿಸಿದ್ದು ಅಸ್ವಸ್ಥ ಗೊಂಡ ನಾಲ್ವರು ಮತ್ತು ಸ್ಯೆಕುರಿಟಿ ಗಾರ್ಡ್ ಅನ್ನ ಸಾಂಬಾರ್ ಸೇವಿಸಿ ಅಸ್ವಸ್ಥಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಲು ಜಿಲ್ಲಾಡಳಿತ ಕ್ಕೆ ಸೂಚನೆ ನೀಡಿದ್ದಾರೆ. ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಅವರು ಜಿಲ್ಲಾಸ್ಪತ್ರೆ ಭೇಟಿ ನೀಡಿ ಮೃತ ವಿದ್ಯಾರ್ಥಿಗಳ ಪೋಷಕರಿಗೆ ಸಾಂತ್ವನ ಹೇಳಿದ್ದಾರೆ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಶಾ ಪಂತ್ ಅವರು ಹಾಸ್ಟೆಲ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಶಾಲೆಯ ಮಾಲಿಕ ಮಾಜಿ ಶಾಸಕ ಕಿರಣ್ ಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಊಟದಲ್ಲಿ ಏನೋ ಮಿಶ್ರಣ ಮಾಡಿರಬಹುದು ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ .ವಿದ್ಯಾರ್ಥಿಗಳ ಸಾವು ನನಗೆ ತೀವ್ರ ದುಃಖ ತಂದಿದೆ ಎಂದಿದ್ದಾರೆ.
ಕಿರಣ್ ಕುಮಾರ್ ಪೊಲೀಸ್ ವಶಕ್ಕೆ
ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಶಾಲೆಯ ಮಾಲಿಕ ಕಿರಣ್ ಕುಮಾರ್ ಅವರನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ
Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್
Mysuru: ಕೋವಿಡ್ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್.ಮಂಜುನಾಥ್
Inquiry Report: ಬಿಜೆಪಿಗೆ ’40 ಪರ್ಸೆಂಟ್’ ಕ್ಲೀನ್‌ಚಿಟ್ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್
Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್ ಪರಾರಿ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.