ಅಕ್ರಮ ಕೆಂಪುಕಲ್ಲು ಗಣಿಗಾರಿಕೆ ಪತ್ತೆ: 8 ಲಾರಿ ವಶ
Team Udayavani, Mar 9, 2017, 12:48 PM IST
ಬಜಪೆ: ಎಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಡಗ ಎಕ್ಕಾರಿನ ಅರಸುಲ ಪದವಿನಲ್ಲಿ ಅಕ್ರಮ ಕೆಂಪು ಕಲ್ಲು ಗಣಿಗಾರಿಕೆ ನಡೆದಿದ್ದ ಪ್ರದೇಶಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆ, ಬಜಪೆ ಪೊಲೀಸ್ ಮತ್ತು ಕಂದಾಯ ಇಲಾಖೆಗಳ ನೇತೃತ್ವದಲ್ಲಿ ದಾಳಿ ನಡೆಸಿ, ಅಕ್ರಮ ಕೆಂಪು ಗಣಿಕಾರಿಕೆಯಲ್ಲಿ ತೊಡಗಿದ್ದª ಎಂಟು ಲಾರಿಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ದಾಳಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಭೂವಿಜ್ಞಾನಿ ಬಿ.ಕೆ. ಮೂರ್ತಿ ಸಿಬಂದಿ ಚೆನ್ನಪ್ಪ, ಕೇಶವ ಮೂರ್ತಿ, ಶ್ರೀಜಿತ್,ಎಕ್ಕಾರು ಗ್ರಾಮ ಕರಣಿಕ ವಿಜೇತ, ಗ್ರಾಮ ಸಹಾಯಕ ಕರುಣಾಕರ, ಬಜಪೆ ಪೊಲೀಸರು ಭಾಗಿಯಾಗಿದ್ದರು. ಅಕ್ರಮ ಗಣಿಗಾರಿಕೆಯ ಬಗ್ಗೆ ದೂರಿನಂತೆ ಈ ದಾಳಿ ನಡೆಸಲಾಗಿತ್ತು. ಪರವಾನಿಗೆ ಪಡೆಯದೇ ಗಣಿಗಾಕಾರಿಕೆ ನಡೆಸುತ್ತಿದ್ದ ಆರೋಪದ ಮೇಲೆ ಈ ದಾಳಿ ನಡೆದಿದೆ ಎಂದು ಭೂವಿಜ್ಞಾನಿ ಬಿ.ಕೆ. ಮೂರ್ತಿ ಅವರು ತಿಳಿಸಿದ್ದಾರೆ.
ಕಲ್ಲು ಸಹಿತ ಲಾರಿಯನ್ನು ಬಜಪೆ ಪೊಲೀಸರ ವಶಕ್ಕೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.