ರಾಷ್ಟ್ರದ ಅಭಿವೃದ್ಧಿಗೆ ಕೈಜೋಡಿಸಿ: ಯುವ ಜನರಿಗೆ ಶಾಸಕದ್ವಯರ ಕರೆ


Team Udayavani, Mar 9, 2017, 2:31 PM IST

09-KASARGOD-5.jpg

ಮಡಿಕೇರಿ: ಅಭಿವೃದ್ಧಿಗೆ ಪೂರಕವಾದ ಆಲೋಚನೆಗಳ ಮೂಲಕ ಯುವಜನರು ರಾಷ್ಟ್ರದ ಬಲವರ್ಧನೆಗೆ ಕೈಜೋಡಿಸಬೇಕೆಂದು ಶಾಸಕರಾದ ಕೆ.ಜಿ. ಬೋಪಯ್ಯ ಕರೆ ನೀಡಿದ್ದಾರೆ.   

ಜಿಲ್ಲಾಡಳಿತ, ನೆಹರೂ ಯುವ ಕೇಂದ್ರ, ಯುವ ಸಬಲೀ ಕರಣ ಮತ್ತು  ಕೀಡಾ ಇಲಾಖೆ, ಜಿಲ್ಲಾ ಯುವ ಒಕ್ಕೂಟ ಹಾಗೂ 3 ತಾಲೂಕು ಯುವ ಒಕ್ಕೂಟದ ಸಂಯುಕ್ತ ಆಶ್ರಯದಲ್ಲಿ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಜಿಲ್ಲಾ ಯುವ ಸಮಾವೇಶ, ಕ್ರೀಡಾ ಸಾಮಾಗ್ರಿ ವಿತರಣೆ, ಸಂಘ ಪ್ರಶಸ್ತಿ, ಯುವ ಕೃತಿ ಪ್ರದರ್ಶನ ಹಾಗೂ ಜಿಲ್ಲಾ ಯುವ ಸಮ್ಮೇಳನ, ಯುವ ಕಾರ್ಯಾಗಾರ, ಯುವ ಪ್ರಶಸ್ತಿ ಪ್ರಧಾನ, ಸಹಾಯಧನ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ದೇಶದಲ್ಲಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಯುವ ಶಕ್ತಿಯು ದೇಶದ ಶಕ್ತಿಯಾಗಿದ್ದು, ಅಭಿವೃದ್ಧಿ ಪರ ಚಿಂತನೆ ಮಾಡಬೇಕಾಗಿದೆ. ರಾಷ್ಟ್ರೀಯತೆ ಬೆಳೆಸಿಕೊಳ್ಳುವುದ ರೊಂದಿಗೆ ಯುವಶಕ್ತಿ ಜಾಗೃತರಾಗಬೇಕು ಎಂದು ಬೋಪಯ್ಯ ಕರೆ ನೀಡಿದರು.   

ಸರಕಾರದ ಸೌಲಭ್ಯಗಳನ್ನು ಪಡೆದು ಯುವ ಜನರು ಮುಖ್ಯವಾಹಿನಿಗೆ ಬರಬೇಕು ಎಂದರು.  ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್‌ ಮಾತನಾಡಿ ಸರಕಾರದ ಬಜೆಟ್‌ನಲ್ಲಿ 230 ಕೋಟಿ ರೂ.ನಷ್ಟು ಮಾತ್ರ ಯುವ ಸಬಲೀಕರಣ ಇಲಾಖೆಗೆ ಮೀಸಲಿಡಲಾಗಿದೆ. ಇದನ್ನು ಒಂದು ಸಾವಿರ ಕೋಟಿ ರೂ.ಗೆ ಹೆಚ್ಚಿಸಬೇಕು ಎಂದು ಒತ್ತಾಯಿಸಿದರು.   

ಯುವ ಸಬಲೀಕರಣವಾದಲ್ಲಿ ದೇಶದ ಅಭಿವೃದ್ಧಿ ಸಾಧ್ಯ ವಾಗಿದ್ದು, ಆ ನಿಟ್ಟಿನಲ್ಲಿ ಯುವ ನೀತಿಯನ್ನು ಜಾರಿಗೆ ತರ ಲಾಯಿತು. ರಾಷ್ಟ್ರಮಟ್ಟದಲ್ಲಿಯೂ ರಾಷ್ಟ್ರೀಯ ಯುವ ನೀತಿ ಜಾರಿಗೆ ಬರಬೇಕು ಎಂದು ಅವರು ತಿಳಿಸಿದರು.

ಯುವ ಜನರು ಅಭಿವೃದ್ಧಿಯತ್ತ ಚಿಂತನೆ ಮಾಡಬೇಕು. ಶಿಕ್ಷಣ, ಕ್ರೀಡೆ, ವಾಣಿಜ್ಯ ಮತ್ತಿತರ ಕ್ಷೇತ್ರಗಳಲ್ಲಿ ತೊಡಗಿಸಿ ಕೊಳ್ಳುವಂತಾಗಬೇಕು ಎಂದು ಅವರು ಹೇಳಿದರು. ನಗರಸಭೆ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ ಮಾತ ನಾಡಿದರು. ಜಿ.ಪಂ. ಅಧ್ಯಕ್ಷರಾದ ಬಿ.ಎ. ಹರೀಶ್‌ ಅವರು ರಾಷ್ಟ್ರೀಯ ಯುವ ದಿನದ ಮಹತ್ವದ ಬಗ್ಗೆ ಪ್ರತಿಜ್ಞಾ ವಿಧಿ ಬೋಧಿಸಿದರು. 

ಯುವ ಸಂಘಗಳಿಗೆ ಪ್ರಶಸ್ತಿ, ಕ್ರೀಡಾ ಸಾಮಗ್ರಿ ವಿತರಿಸಲಾಯಿತು. ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷರಾದ ಮೂಕೊಂಡ ಶಶಿ ಸುಬ್ರ ಮಣಿ, ತಾ.ಪಂ. ಅಧ್ಯಕ್ಷರಾದ ಶೋಭಾ ಮೋಹನ್‌, ನೆಹರೂ ಯುವ ಕೇಂದ್ರದ ಜಿಲ್ಲಾ ಸಮನ್ವಯಾಧಿಕಾರಿ ನಟರಾಜು, ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಕೆ.ಸಿ. ದಯಾನಂದ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಯಲಕ್ಷ್ಮೀ ಬಾಯಿ, ತಾಲೂಕು ಯುವ ಒಕ್ಕೂಟದ ಅಧ್ಯಕ್ಷರಾದ ರವಿ, ಇತರರು ಇದ್ದರು. ನವೀನ್‌ ದೇರಳ, ಸಾ.ಬಾ. ಸುಬ್ರಮಣಿ ನಿರೂಪಿಸಿದರು. ಎಂ.ಬಿ. ಜೋಯಪ್ಪ ಸ್ವಾಗತಿಸಿದರು. 

ಪ್ರಶಸ್ತಿ ಪ್ರಧಾನ 
ಈ ಬಾರಿ ಪೊನ್ನಂಪೇಟೆಯ ಚೈತನ್ಯ ಕಲಾ ಮಂಡಳಿ ಯು ನೆಹರು ಯುವ ಕೇಂದ್ರ ನೀಡುವ ಉತ್ತಮ ಸಂಘ‌ ಪ್ರಶಸ್ತಿಯನ್ನು ಪಡೆಯಿತು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನೀಡುವ ಉತ್ತಮ ಸಂಘ ಪ್ರಶಸ್ತಿಯನ್ನು ಚೆಂಬು ಗ್ರಾಮದ ಶ್ರೀರಾಮ ಯುವಕ ಸಂಘ ಹಾಗೂ ಪೊನ್ನಂಪೇಟೆಯ ಡಾ| ಅಂಬೇಡ್ಕರ್‌ ಕಲಾ ಯುವತಿ ಮಂಡಳಿ ಪಡೆದುಕೊಂಡಿತು. ವೈಯಕ್ತಿಕ ಯುವ ಪ್ರಶಸ್ತಿಯನ್ನು ಬಿಳಿಗೇರಿಯ ಶ್ರೀ ಭಗವತಿ ಯುವಕ ಸಂಘದ ಎಂ.ಎ. ಟಾಟಾ ದೇವಯ್ಯ, ಕಾರ್ಯದರ್ಶಿ ಬಿ.ಎನ್‌. ಪ್ರಸಾದ್‌, ಚೆಂಬುವಿನ ಶ್ರೀರಾಮ ಯುವಕ ಸಂಘ‌ದ ಪ್ರಜ್ವಲ್‌ ಬೊಳ್ತಜೆ, ಪೊನ್ನಂಪೇಟೆ ಅಂಬೇಡ್ಕರ್‌ ಕಲಾ ಯುವತಿ ಮಂಡಳಿಯ ಜೆ. ನಿರ್ಮಲ, ಪೊನ್ನಂಪೇಟೆಯ ಚೈತನ್ಯ ಕಲಾ ಯುವತಿ ಮಂಡಳಿಯ ವೀಣಾ ಮನು ಕುಮಾರ್‌ ಪ್ರಶಸ್ತಿ ಗಳಿಸಿದರು. 

ನಮ್ಮೂರ ಶಾಲೆಗೆ ನಮ್ಮ ಯುವ ಜನ ಕಾರ್ಯಕ್ರಮದ ಅನುದಾನದಡಿ ಬಿಳಿಗೇರಿಯ ಶ್ರೀ ಭಗವತಿ ಯುವಕ ಸಂಘ, ಮಾಯಮುಡಿಯ ಕಾವೇರಿ ಯುವಕ ಸಂಘ, ತೋಳೂರು ಶೆಟ್ಟಳ್ಳಿಯ ಗಂಧರ್ವ ಯುವಕ ಸಂಘಕ್ಕೆ ತಲಾ 1 ಲಕ್ಷ ರೂ. ನೀಡಲಾಯಿತು. 

ಕ್ರೀಡಾ ಮಿತ್ರ ಕಾರ್ಯಕ್ರಮದಡಿ ಅವಂದೂರು ಗ್ರಾಮದ ಶ್ರೀ ಗೋಪಾಲಕೃಷ್ಣ ಯುವಕ ಸಂಘ, ಕಬ್ಬಡಗೇರಿ ಗ್ರಾಮದ ಕಬ್ಬಡಗೇರಿ ಯುವಕ ಸಂಘ, ಬಿಳಿಗೇರಿ ಗ್ರಾಮದ ಶ್ರೀ ಭಗವತಿ ಯುವಕ ಸಂಘ‌, ಅರವತ್ತೂಕ್ಲು ಗ್ರಾಮದ ಪ್ರತಿಭಾ ಯುವಕ ಸಂಘ, ಪೊನ್ನಂಪೇಟೆಯ ಜೈ ಭೀಮ್‌ ಕಲಾ ಯುವಕ ಸಂಘ ಹಾಗೂ ನಿಸರ್ಗ ಯುವತಿ ಮಂಡಳಿ ತಲಾ 25 ಸಾವಿರವನ್ನು ಪಡೆಯಿತು.

ಟಾಪ್ ನ್ಯೂಸ್

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod ಅಪರಾಧ ಸುದ್ದಿಗಳು

Untitled-5

Kasaragod: ಮಾನ್ಯ ಅಯ್ಯಪ್ಪ ಭಜನ ಮಂದಿರದಿಂದ ಕಳವು; ಓರ್ವನ ಬಂಧನ

Arrest

Kasaragodu: ಆಸ್ತಿ ವಿವಾದ: ಅಣ್ಣನ ಕೊಲೆ, ಇಬ್ಬರಿಗೆ ಇರಿತ; ತಮ್ಮನ ಸೆರೆ

ACT

Manjeshwar: ಬಂಧಿತರ ಪೈಕಿ ಓರ್ವ 15 ಪ್ರಕರಣಗಳಲ್ಲಿ ಆರೋಪಿ

POlice

Kumbla: ಪ್ರಾಣ ಲೆಕ್ಕಿಸದೆ ಹೊಳೆಗೆ ಹಾರಿ ಆರೋಪಿಯನ್ನು ಬಂಧಿಸಿದ ಪೊಲೀಸರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.