ಉತ್ತರ ಬಾಗ್ಧಾದ್ನಲ್ಲಿ ಅವಳಿ ಆತ್ಮಾಹುತಿ ದಾಳಿಗೆ 20 ಮಂದಿ ಬಲಿ
Team Udayavani, Mar 9, 2017, 3:26 PM IST
ಬಾಗ್ಧಾದ್ : ಉತ್ತರ ಬಾಗ್ಧಾದ್ನಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ಗ್ರಾಮವೊಂದನ್ನು ಗುರಿಯಾಗಿರಿಸಿಕೊಂಡು ನಡೆಸಲಾದ ಅವಳಿ ಆತ್ಮಾಹುತಿ ಬಾಂಬ್ ಸ್ಫೋಟದಲ್ಲಿ ಕನಿಷ್ಠ 20 ಮಂದಿ ಹತಾರಾಗಿರುವುದಾಗಿ ಇರಾಕ್ನ ರಕ್ಷಣಾ ಸಚಿವಾಲಯ ಹೇಳಿದೆ.
ತಿಕ್ರಿತ್ ನಗರಕ್ಕೆ ಸಮೀಪದ ಅಲ್ ಹಜಾಜ್ ಎಂಬ ಗ್ರಾಮದಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ಸ್ಥಳಕ್ಕೆ ಇಬ್ಬರು ಆತ್ಮಾಹುತಿ ಬಾಂಬ್ ದಾಳಿಕೋರರು ಹೋಗಿ ಅಲ್ಲಿ ತಮ್ಮನ್ನು ಸ್ಫೋಟಿಸಿಕೊಂಡರು. ಕನಿಷ್ಠ 20 ಮಂದಿ ಸಾವಿಗೀಡಾದರೆ ಸುಮಾರು 13 ಮಂದಿ ಗಾಯಗೊಂಡರು ಎಂದು ಸಚಿವಾಲಯ ಹೇಳಿದೆ.
ತಿಕ್ರಿತ್ ನಗರವು ಬಾಗ್ಧಾದಿನಿಂದ 130 ಕಿ.ಮೀ. ಅಥವಾ 80 ಮೈಲು ದೂರದಲ್ಲಿದೆ.
ಈ ಭೀಕರ ಆತ್ಮಾಹುತಿ ದಾಳಿಯನ್ನು ನಡೆಸಿದವರು ಯಾರೆಂಬುದು ತತ್ಕ್ಷಣಕ್ಕೆ ಗೊತ್ತಾಗಿಲ್ಲ; ಆದರೂ ಇದು ಐಸಿಸ್ ಉಗ್ರರದ್ದೇ ಕೃತ್ಯ ಎಂದು ಶಂಕಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Sri Lanka Election Result:ಸಂಸತ್ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
Marriage: ಕ್ರಿಸ್ಮಸ್ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
MUST WATCH
ಹೊಸ ಸೇರ್ಪಡೆ
Cricket: ಐಪಿಎಲ್ ಹರಾಜಿನಲ್ಲಿ 574 ಕ್ರಿಕೆಟಿಗರು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Tennis: ಏಷ್ಯಾಡ್ ಕಂಚಿನ ಪದಕ ವಿಜೇತ ಟೆನಿಸಿಗ ಪ್ರಜ್ಞೇಶ್ ಗುಣೇಶ್ವರನ್ ನಿವೃತ್ತಿ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
Shivamogga: ಆಸ್ಪತ್ರೆಯಲ್ಲಿನ ತೆರೆದ ನೀರಿನ ತೊಟ್ಟಿಗೆ ಬಿದ್ದು ಮಗು ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.