ಮಿನಿ ಫೈಟ್, ಕೌಂಟ್ ಡೌನ್; ಎಲ್ಲರ ಚಿತ್ತ ಚುನಾವಣೋತ್ತರ ಸಮೀಕ್ಷೆಯತ್ತ
Team Udayavani, Mar 9, 2017, 4:31 PM IST
ನವದೆಹಲಿ/ಉತ್ತರಪ್ರದೇಶ:ಹೈವೋಲ್ಟೇಜ್ ಮಿನಿ ಸಮರ ಎಂದೇ ಬಿಂಬಿತವಾಗಿದ್ದ ಪಂಚರಾಜ್ಯಗಳ ಜಿದ್ದಾಜಿದ್ದಿನ ಚುನಾವಣೆ ಮುಗಿದಿದೆ. ಮಾರ್ಚ್ 11ರಂದು ಫಲಿತಾಂಶ ಹೊರಬೀಳಲಿದ್ದು, ಏತನ್ಮಧ್ಯೆ ಇದೀಗ ಎಲ್ಲರ ಚಿತ್ತ ಗುರುವಾರ 5.30ಕ್ಕೆ ಬಹಿರಂಗವಾಗಲಿರುವ ಚುನಾವಣೋತ್ತರ ಸಮೀಕ್ಷೆ ಮೇಲೆ ನೆಟ್ಟಿದೆ.
ಉತ್ತರಪ್ರದೇಶ, ಉತ್ತರಾಖಂಡ್, ಪಂಜಾಬ್, ಗೋವಾ ಹಾಗೂ ಮಣಿಪುರ ಸೇರಿದಂತೆ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಮಾ.11ಕ್ಕೆ ಜಗಜ್ಗಾಹೀರಾಗಲಿದೆ. ಚುನಾವಣೋತ್ತರ ಸಮೀಕ್ಷೆಯಲ್ಲಿ ಯಾವ ಪಕ್ಷಕ್ಕೆ ಎಷ್ಟು ಸ್ಥಾನ ದೊರೆಯಲಿದೆ ಎಂಬ ಲೆಕ್ಕಾಚಾರದ ವರದಿಯತ್ತ ಎಲ್ಲರಲ್ಲಿ ಕುತೂಹಲ ಗರಿಗೆದಿರಿಸಿದೆ.
ಇಬ್ಬರು ಅಭ್ಯರ್ಥಿಗಳ ನಿಧನದಿಂದ ತೆರವಾಗಿರುವ ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಈ ಹಿನ್ನೆಲೆಯಲ್ಲಿ ಮಾ.9ರ ಸಂಜೆವರೆಗೆ ಚುನಾವಣೋತ್ತರ ಸಮೀಕ್ಷೆ ಪ್ರಸಾರ ಮಾಡದಂತೆ ಚುನಾವಣಾ ಆಯೋಗ ನಿರ್ಬಂಧ ಹೇರಿತ್ತು. ಯಾವುದೇ ಕಾರಣಕ್ಕೂ ಮಾ.9ರ ಸಂಜೆ 5.30ರೊಳಗೆ ಎಕ್ಸಿಟ್ ಪೋಲ್ ಫಲಿತಾಂಶ ಪ್ರಸಾರ ಮಾಡಬಾರದು ಎಂದು ಚುನಾವಣಾ ಆಯೋಗ ಸೂಚನೆ ನೀಡಿತ್ತು.
ಉತ್ತರಪ್ರದೇಶದ ಅಲಾಪುರ್ ಹಾಗೂ ಉತ್ತರಾಖಂಡ್ ನ ಕರ್ಣಪ್ರಯಾಗ್ ಕ್ಷೇತ್ರದಲ್ಲಿ ಚುನಾವಣೆ ನಡೆಯುತ್ತಿದೆ. ಉತ್ತರಪ್ರದೇಶ ಅಲಾಪುರ್ ಕ್ಷೇತ್ರದಲ್ಲಿನ ಸಮಾಜವಾದಿ ಪಕ್ಷದ ಅಭ್ಯರ್ಥಿ ಚಾಂದ್ ಶೇಖರ್ ಹಾಗೂ ಉತ್ತರಾಖಂಡ್ ನ ಕರ್ಣಪ್ರಯಾಗ್ ಕ್ಷೇತ್ರದ ಬಿಎಸ್ಪಿ ಅಭ್ಯರ್ಥಿ ಕಾನ್ವಾಸಿ ಸಾವನ್ನಪ್ಪಿದ್ದರು. ತೆರವಾದ 2 ಕ್ಷೇತ್ರಗಳಿಗೆ ಚುನಾವಣೆ ನಡೆಯುತ್ತಿದ್ದು, ಮತದಾನ ಮುಕ್ತಾಯವಾದ ಬಳಿಕ ಎಕ್ಸಿಟ್ ಫೋಲ್ ಫಲಿತಾಂಶ ಪ್ರಕಟಿಸುವಂತೆ ಆಯೋಗ ತಿಳಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
Eye Surgeries: ವೈದ್ಯಕೀಯ ಪದವಿ ಪೂರ್ಣಗೊಳಿಸದೇ 44 ಕಣ್ಣಿನ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.