ಎದ್ದು ಬಿದ್ದು ಮುನ್ನಡೆದ ಮುಂಬಯಿ ಶೇರು ಕೊನೆಗೂ 27 ಅಂಕ ಏರಿಕೆ
Team Udayavani, Mar 9, 2017, 4:37 PM IST
ಮುಂಬಯಿ : ಪಂಚ ರಾಜ್ಯಗಳ ಚುನಾವಣೆಗಳ ಮತದಾನೋತ್ತರ ಸಮೀಕ್ಷೆಯನ್ನು ಎದುರು ನೋಡುತ್ತಿರುವ ಮುಂಬಯಿ ಶೇರು ಪೇಟೆ ಇಂದು ಗುರುವಾರದ ವಹಿವಾಟಿನಲ್ಲಿ ಏಳು ಬೀಳುಗಳ ಹಾದಿಯಲ್ಲಿ ಸಾಗುತ್ತಾ ಅಂತಿಮವಾಗಿ 27.19 ಅಂಕಗಳ ಏರಿಕೆಯನ್ನು ಸಾಧಿಸಿ ದಿನದ ವಹಿವಾಟನ್ನು 28,929.13 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇದೇ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 2.70 ಅಂಕಗಳ ಅಲ್ಪ ಗಳಿಕೆಯನ್ನು ಸಾಧಿಸಿ ದಿನದ ವಹಿವಾಟನ್ನು 8,927 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು.
ಇಂದಿನ ವಹಿವಾಟಿನಲ್ಲಿ ಎಸ್ಬಿಐ, ಮಾರುತಿ ಸುಜುಕಿ, ಎಕ್ಸಿಸ್ ಬ್ಯಾಂಕ್, ಟಾಟಾ ಮೋಟರ್, ಏಶ್ಯನ್ ಪೇಂಟ್ ಶೇರುಗಳು ಶೇ.1ರಿಂದ ಶೇ.1.5ರಷ್ಟು ಏರಿಕೆ ಕಂಡವು. ಆದರೆ ಡಾ.ರೆಡ್ಡೀಸ್ ಲ್ಯಾಬ್, ಅದಾನಿ ಪೋರ್ಟ್, ಓಎನ್ಜಿಸಿ, ವಿಪ್ರೋ,ಗೇಲ್ ಮತ್ತು ಟಾಟಾ ಸ್ಟೀಲ್ ಶೇ.1ರಿಂದ ಶೇ.5ರಷ್ಟು ಕುಸಿದವು.
ಇಂದಿನ ವಹಿವಾಟಿನಲ್ಲಿ 1,632 ಶೇರುಗಳು ಹಿನ್ನಡೆಗೆ ಗುರಿಯಾದವು; 1,176 ಶೇರುಗಳು ಮುನ್ನಡೆ ಕಂಡವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್’ ಹೊಸ ವೆಬ್ಸೈಟ್ ಪ್ರತ್ಯಕ್ಷ!
Haldiram ಭುಜಿಯಾವಾಲಾದಲ್ಲಿ ₹235 ಕೋಟಿ ಹೂಡಿಕೆ ಮಾಡಿದ ಭಾರತ್ ವ್ಯಾಲ್ಯು ಫಂಡ್
Gold Rates:ಡಾಲರ್ ಬೆಲೆ ಏರಿಕೆ-18k, 22K, 24K, ಇಂದಿನ ಚಿನ್ನದ ಮಾರುಕಟ್ಟೆ ಬೆಲೆ ಎಷ್ಟು?
Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….
Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ
MUST WATCH
ಹೊಸ ಸೇರ್ಪಡೆ
Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.