ಶಾಲಾ ಮಕ್ಕಳಿಗೆ ಬೇಸಿಗೆ ರಜೆಯಲ್ಲೂ ಬಿಸಿಯೂಟ ಸೌಲಭ್ಯ
Team Udayavani, Mar 10, 2017, 11:11 AM IST
ಚಿತ್ರದುರ್ಗ: ರಾಜ್ಯದ ಬರಪೀಡಿತ ಪ್ರದೇಶಗಳ ಶಾಲಾ ಮಕ್ಕಳಿಗೆ ಬೇಸಿಗೆ ರಜೆಯಲ್ಲೂ ಮಧ್ಯಾಹ್ನದ ಬಿಸಿಯೂಟ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಬೇಸಿಗೆ ರಜೆಯಲ್ಲೂ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ನೀಡುವಂತೆ
ಸರ್ವೋತ್ಛ ನ್ಯಾಯಾಲಯ ಆದೇಶಿಸಿರುವ ಹಿನ್ನೆಲೆ ಸರ್ಕಾರ ಈ ತೀರ್ಮಾನ ಕೈಗೊಂಡಿದೆ. ರಾಜ್ಯದ 30 ಜಿಲ್ಲೆಗಳ 160 ತಾಲೂಕುಗಳಲ್ಲಿ ತೀವ್ರ ಬರವಿರುವ ಕಾರಣ ಜನರು ಗುಳೆ ಹೋಗುವುದನ್ನು ತಪ್ಪಿಸುವ ಭಾಗವಾಗಿ ಈ ಕ್ರಮವನ್ನು ಜರುಗಿಸಲಾಗಿದೆ.
ಏ.11 ರಿಂದ ಮೇ.28ರವರೆಗೆ ಇರುವ ಬೇಸಿಗೆ ರಜೆಯ ಅವಧಿಯಲ್ಲಿ ಬಿಸಿಯೂಟ ನೀಡುವಂತೆ ಮಾ.7ರಂದು ಸುತೋ¤ಲೆ ಹೊರಡಿಸಿ ಆದೇಶಿಸಿದೆ. ಬರಪೀಡಿತ ತಾಲೂಕುಗಳ ಜನರು ಗುಳೆ ಹೋಗದಂತೆ, ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ 1ರಿಂದ 8ನೇ ತರಗತಿ ಶಾಲಾ ಮಕ್ಕಳ ಪಾಠ ಪ್ರವಚನಗಳಿಗೆ ತೊಂದರೆಯಾಗದಂತೆ
ನೋಡಿಕೊಳ್ಳಲು ಈ ಕ್ರಮ ಕೈಗೊಂಡಿದೆ. ಮಧ್ಯಾಹ್ನದ ಬಿಸಿಯೂಟ ಮಾಡುವ ಮಕ್ಕಳ ಸಂಖ್ಯೆಯ ಮಾಹಿತಿಯ ಸಂದೇಶವನ್ನು ಪ್ರತಿ ನಿತ್ಯ ಟೋಲ್ μÅà ಸಂಖ್ಯೆ 15544ರ ಮೂಲಕ ಕಳುಹಿಸಬೇಕು. ಬಿಸಿಯೂಟ ಮಾಡುವ ಮಕ್ಕಳ
ಮಾಹಿತಿಯನ್ನು ಕಡ್ಡಾಯವಾಗಿ ಎಂಐಎಸ್ ವೆಬ್ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲು ಸೂಚಿಸಲಾಗಿದೆ. ಪ್ರತಿ ಗ್ರಾಮಗಳಲ್ಲಿ ಒಂದಕ್ಕಿಂತ ಹೆಚ್ಚಿನ ಶಾಲೆಗಳಿದ್ದರೆ ಯಾವ ಶಾಲೆಯಲ್ಲಿ ಹೆಚ್ಚಿನ ಮಕ್ಕಳಿರುತ್ತಾರೋ ಅಲ್ಲಿಯೇ
ಬಿಸಿಯೂಟ ನೀಡಿ ಹಾಜರಾತಿ ಪಡೆಯುವಂತೆ ಸೂಚಿಸಲಾಗಿದೆ.
ಮಕ್ಕಳ ಸಂಖ್ಯೆಗನುಗುಣವಾಗಿ ಮುಖ್ಯ ಶಿಕ್ಷಕರು ಅಡುಗೆ ತಯಾರಿಸುವವರನ್ನು ಕೆಲಸಕ್ಕೆ ಪಡೆದು, ಅವರು ಕೆಲಸ ಮಾಡಿದ ದಿನಗಳಿಗೆ ಮಾತ್ರ ಸಂಭಾವನೆಯನ್ನು ಅಡುಗೆ ಸಿಬ್ಬಂದಿ ಖಾತೆಗೆ ರವಾನಿಸಬೇಕೆಂದು ಸೂಚಿಸಲಾಗಿದೆ.
ಬಿಸಿಯೂಟ ಮಾಡುವ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಆಹಾರ ಬೇಡಿಕೆ, ಸಿಬ್ಬಂದಿ ವೇತನ, ನಿರ್ವಹಣಾ ವೆಚ್ಚದ ಕ್ರಿಯಾಯೋಜನೆ ತಯಾರಿಸಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕರಿಗೆ ಪಟ್ಟಿ ನೀಡಬೇಕಾಗುತ್ತದೆ. ಬೇಸಿಗೆ ಮುಗಿಯುವವರೆಗೆ ಪರಿಸ್ಥಿತಿಯನ್ನು ಸಮರೋಪಾದಿಯಲ್ಲಿ ಎದುರಿಸಲು ಸರ್ಕಾರ ನಿರ್ದೇಶನ ನೀಡಿದೆ.
ಬಿಸಿಯೂಟದ ಮೆನು ಇದು: ಪ್ರತಿ ದಿನ ಶಾಲಾ ಮಕ್ಕಳಿಗೆ ಚಿತ್ರಾನ್ನ, ಪುಳಿಯೋಗರೆ, ಉಪ್ಪಿಟ್ಟು, ಮೊಸರನ್ನ, ವೆಜಿಟಬಲ್ ಪಲಾವ್, ಬಾಳೆಹಣ್ಣು ನೀಡುವಂತೆ ಸೂಚನೆ ನೀಡಲಾಗಿದೆ. ಸಾಮಾನ್ಯವಾಗಿ ಶೈಕ್ಷಣಿಕ ವರ್ಷ ಮುಗಿದ ಬಳಿಕ ಮಧ್ಯಾಹ್ನದ ಬಿಸಿಯೂಟ ನೀಡುತ್ತಿರಲಿಲ್ಲ. ಆದರೆ ಈ ಬಾರಿ ಬರ ಎದುರಾಗಿರುವ ಹಿನ್ನೆಲೆಯಲ್ಲಿ ಮಕ್ಕಳಿಗೆ ಈ
ವ್ಯವಸ್ಥೆ ಕಲ್ಪಿಸಲಾಗಿದೆ. ಬಿಸಿಯೂಟದ ಹೊಣೆಯನ್ನು ಆಯಾ ಶಾಲೆಯ ಮುಖ್ಯೋಪಾಧ್ಯಾರು ವಹಿಸಲಿದ್ದು, ಶಿಕ್ಷಕರ ಹಾಜರಾತಿ, ಬಿಸಿಯೂಟದ ಉಸ್ತುವಾರಿ ಕಡ್ಡಾಯ ಮಾಡಲಾಗಿದೆ. ಗೈರು ಹಾಜರಿಗೆ ಅವಕಾಶವಿಲ್ಲ. ಒಂದು ವೇಳೆ ಯಾರಾದರೂ ಗೈರುಹಾಜರಾದರೆ ಅಂತಹ ಶಿಕ್ಷಕರ ವಿರುದ್ಧ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aadhar Card: ಆಧಾರ್ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!
ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
AICC ಅಧಿವೇಶನ: ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿಂದು ಮಹತ್ವದ ಸಭೆ
CT Ravi ಜಾಮೀನು ಅರ್ಜಿ ವಿಚಾರಣೆ ಇಂದು ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರಿಗೆ ವರ್ಗ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
M. Chinnaswamy ಸ್ಟಾಂಡ್‌ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
iPhone: ಕೈತಪ್ಪಿ ಕಾಣಿಕೆ ಹುಂಡಿಗೆ ಬಿದ್ದ ಐಫೋನ್… ಇದು ದೇವರ ಸೊತ್ತು ಎಂದ ಸಿಬ್ಬಂದಿ
Kumbra ಜಂಕ್ಷನ್‌ನಲ್ಲಿ ಈಗ ಸೆಲ್ಫಿ ಪಾಯಿಂಟ್ ಆಕರ್ಷಣೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.