ಟ್ಯಾಕ್ಸಿ ಮಾಲೀಕರಿಂದ ದಿಢೀರ್‌ ರಸ್ತೆ ತಡೆ


Team Udayavani, Mar 10, 2017, 12:52 PM IST

dvg6.jpg

ದಾವಣಗೆರೆ: ಪರವಾನಗಿಯಿಲ್ಲದೆ ಪ್ರಯಾಣಿಕರನ್ನು ಕರೆದೊಯ್ಯುವ ಖಾಸಗಿ ಟ್ಯಾಕ್ಸಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಲು ಆಗ್ರಹಿಸಿ ನಗರ ಟ್ಯಾಕ್ಸಿ ಮಾಲೀಕರ, ಚಾಲಕರ ಸಂಘದಿಂದ ಗುರುವಾರ ದಿಢೀರ್‌ ರಸ್ತೆ ತಡೆ ನಡೆಸಲಾಯಿತು. ಉಪವಿಭಾಗಾಧಿಕಾರಿ ಕಚೇರಿಮುಂದೆ ಪಿಬಿ ರಸ್ತೆ ತಡೆ ನಡೆಸಿದ  ಚಾಲಕರು, ಮಾಲೀಕರು ಖಾಸಗಿ ಟ್ಯಾಕ್ಸಿಗಳ ವಿರುದ್ಧ ಕ್ರಮ ವಹಿಸದ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದರು. 

ಪೇಪರ್‌ ವಾಹನದ ಹೆಸರಲ್ಲಿಅನೇಕ ಟ್ಯಾಕ್ಸಿಗಳು ಹೈಸ್ಕೂಲ್‌  ಮೈದಾನದ ಮುಂಭಾಗದಿಂದ ಪ್ರಯಾಣಿಕರನ್ನು ಕರೆದೊಯ್ಯುತ್ತಿವೆ. ಇದರಿಂದ ಪರವಾನಗಿ ಪಡೆದ ಟ್ಯಾಕ್ಸಿಗಳಿಗೆ ನಷ್ಟವಾಗುತ್ತದೆ. ಇದರ ವಿರುದ್ಧ ಕ್ರಮ ವಹಿಸಲು ಅನೇಕ ಬಾರಿ ಮನವಿ ಮಾಡಿದರೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಂಡಿಲ್ಲಎಂದು ದೂರಿದರು. 

ಖಾಸಗಿ ಬಸ್‌ ಮಾಲೀಕ, ಪಾಲಿಕೆ ಸದಸ್ಯ ಡಿ.ಕೆ. ಕುಮಾರ್‌ ಮಾತನಾಡಿ, ಪೊಲೀಸ್‌, ಆರ್‌ಟಿಒ ಇತರೆ ಅಧಿಕಾರಿಗಳು ಈ ಟ್ಯಾಕ್ಸಿಗಳ ಮಾಲೀಕರಿಂದ ಮಾಮೂಲಿವಸೂಲಿ ಮಾಡುತ್ತಿದ್ದಾರೆ. ಇದರಿಂದಲೇ ಅವರ ವಿರುದ್ಧ ಕ್ರಮ ವಹಿಸುತ್ತಿಲ್ಲ. ಈ ಕೂಡಲೇ ಅಧಿಕಾರಿಗಳು ನಮ್ಮ ಬೇಡಿಕೆಗೆ ಸ್ಪಂದಿಸಬೇಕು.

ಯಾವುದೇ ಕಾರಣಕ್ಕೂ ಖಾಸಗಿ ಟ್ಯಾಕ್ಸಿಗಳು ಪ್ರಯಾಣಿಕರನ್ನು ಹತ್ತಿಸಿಕೊಂಡು ಹೋಗದಂತೆ ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದರು. ಒಂದು ಕ್ರೂಸರ್‌ ವಾಹನದಲ್ಲಿ 10 ಜನಕ್ಕೆ ಅನುಮತಿ ಇರುತ್ತದೆ.ಆದರೆ, ಇಲ್ಲಿ ಸಂಚರಿಸುವ ಕ್ರೂಸರ್‌ ವಾಹನಗಳು 15 ಜನರನ್ನು ತುಂಬಿಕೊಂಡು ಹೋಗುತ್ತವೆ. 

ಸಂಚಾರಿ ಪೊಲೀಸರು ಸ್ಥಳದಲ್ಲಿಯೇ ಇದ್ದರೂ ಈ ಕುರಿತು ಕ್ರಮ ವಹಿಸಲುಮುಂದಾಗುವುದಿಲ್ಲವೇಕೆ? ಎಂದು ಅವರು ಪ್ರಶ್ನಿಸಿದರು. ಯಾವುದೇ ಕಾರಣಕ್ಕೂ ನಮ್ಮ ಬೇಡಿಕೆ ಈಡೇರುವವರೆಗೆ ರಸ್ತೆ ತಡೆ ಹಿಂಪಡೆಯುವುದಿಲ್ಲ. ಕೂಡಲೇ ಸ್ಥಳಕ್ಕೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು, ರಾಜ್ಯಸಾರಿಗೆ ನಿಗಮದ ಜಿಲ್ಲಾಮಟ್ಟದ ಅಧಿಕಾರಿ, ಪೊಲೀಸ್‌ ವರಿಷ್ಠಾಧಿಕಾರಿ ಸ್ಥಳಕ್ಕೆ ಬಂದು ನಮ್ಮ ಬೇಡಿಕೆ ಈಡೇರಿಸಬೇಕು ಎಂದು ಸುಮಾರು 30 ಕ್ರೂಸರ್‌ವಾಹನದ ಮಾಲೀಕರು,

ಚಾಲಕರು  ಪಟ್ಟು ಹಿಡಿದರು. ಕೊನೆಗೆ ನಗರ ಡಿಎಸ್‌ಪಿ ಅಶೋಕ್‌ಕುಮಾರ್‌, ಸಿಪಿಐ ಸಂಗನಾಳ್‌ ಇತರೆ ಪೊಲೀಸ್‌ ಅಧಿಕಾರಿಗಳು ರಸ್ತೆ ತಡೆ ನಡೆಸಿದ್ದವರನ್ನು ಸ್ಥಳದಿಂದ ಚದುರಿಸಿದರು. ಮನವಿ ಪತ್ರ ಪಡೆದುಕೊಂಡು ಶೀಘ್ರ ಕ್ರಮ ವಹಿಸುವ ಭರವಸೆ ನೀಡಿದರು. ದೀಕ್ಷಿತ್‌, ರಾಜು, ರವಿ, ಸಾಧಿಕ್‌, ರಂಗನಾಥ, ಸುಧೀಂದ್ರ, ದಯಾನಂದ, ಪ್ರಕಾಶ್‌ ಹೋರಾಟದ ನೇತೃತ್ವ ವಹಿಸಿದ್ದರು.   

ಟಾಪ್ ನ್ಯೂಸ್

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

Udupi: ಗೀತಾರ್ಥ ಚಿಂತನೆ 50: ಧೃತರಾಷ್ಟ್ರನನ್ನು ಬಂಧಿಸಿದ ಮಮಕಾರ

1-nepp

Nepal; ಮಳೆ, ಪ್ರವಾಹ, ಭೂಕುಸಿತಕ್ಕೆ 170 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kolar

Air Force Emergency: ಬಂಗಾರಪೇಟೆ ಬಳಿ ವಾಯುಪಡೆ ಹೆಲಿಕಾಪ್ಟರ್‌ ತುರ್ತು ಭೂ ಸ್ಪರ್ಶ

CM-letter

CM Siddramaiah: “ರಾಜೀನಾಮೆ ನೀಡಬೇಡಿ’ ರಕ್ತದಲ್ಲಿ ಪತ್ರ ಬರೆದ ಅಭಿಮಾನಿ

Kunigal

Rare occurrence: ಮಳೆಗಾಗಿ ಪ್ರಾರ್ಥಿಸಿ ಬಾಲಕರಿಬ್ಬರಿಗೆ ಮದುವೆ

Renukacharya

BJP: ರಾಜ್ಯಾಧ್ಯಕ್ಷ ವಿಜಯೇಂದ್ರ ರಾಜೀನಾಮೆ ನೀಡೋದಿಲ್ಲ: ಎಂ.ಪಿ.ರೇಣುಕಾಚಾರ್ಯ

yathnal

BJP Politics: ರಾಜ್ಯಾಧ್ಯಕ್ಷ ವಿಜಯೇಂದ್ರ ಬದಲಾವಣೆಗೆ ಪಟ್ಟು ಹಿಡಿದಿಲ್ಲ: ಶಾಸಕ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.