ಮೀನು ಮಾರುಕಟ್ಟೆ ಪ್ರಾರಂಭಕ್ಕೆ ಅಡಿಪಾಯ ಹಾಕಿದ್ದು : ಸಿಂಗ್‌ ಸರಕಾರ

Team Udayavani, Mar 10, 2017, 2:43 PM IST

10-KARKALA-3.jpg

ತೆಕ್ಕಟ್ಟೆ: ಹಿಂದಿನ ಕೇಂದ್ರದ ಯುಪಿಎ ಡಾ| ಮನಮೋಹನ್‌ ಸಿಂಗ್‌ ಸರಕಾರ ಇಡೀ ದೇಶದಲ್ಲಿಯೇ  ಉತ್ತಮವಾದ  ಮೀನು ಮಾರುಕಟ್ಟೆ ನಿರ್ಮಾಣ ಮಾಡಬೇಕು ಎನ್ನು ವ ದೃಷ್ಟಿಯಿಂದ  ಎಷ್ಟೇ ಕೋಟಿ ರೂಪಾಯಿ ವೆಚ್ಚದ  ಮೀನು ಮಾರುಕಟ್ಟೆಯಾಗಿದ್ದರು  ಕೂಡಾ  ಶೇ.90 ರಷ್ಟು ಭಾಗ ಕೇಂದ್ರ ಸರಕಾರ ಕೊಡುತ್ತೇವೆ ಎನ್ನುವ ಯೋಜನೆಯನ್ನು ತಂದು ಇಂದು ದೇಶದ ಬೇರೆ ಬೇರೆ ಕಡೆಗಳಲ್ಲಿ ಮೀನು ಮಾರುಕಟ್ಟೆಯನ್ನು ಪ್ರಾರಂಭ ಮಾಡಲಿಕ್ಕೆ ಅಡಿಪಾಯವನ್ನು  ಹಾಕಿದವರು  ಮಾಜಿ ಪ್ರಧಾನಿ ಡಾ| ಮನಮೋಹನ್‌ ಸಿಂಗ್‌ ಸರಕಾರ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು.

ಅವರು ಮಾ. 9ರ‌ಂದು  ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ (ನಿ.) ಮಂಗಳೂರು, ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿ (ಎನ್‌ಎಫ್‌ಡಿಬಿ) ಹೈದರಾಬಾದ್‌ ಮತ್ತು ಮೀನುಗಾರಿಕೆ ಇಲಾಖೆ ನೀಡಿದ ಅನುದಾನದಲ್ಲಿ  ತೆಕ್ಕಟ್ಟೆ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ನಿರ್ಮಿಸಿದ ಸುಮಾರು ರೂ. 43 ಲಕ್ಷ ವೆಚ್ಚದ ನೂತನ ಸುಸಜ್ಜಿತ ಮೀನು ಮಾರುಕಟ್ಟೆಯನ್ನು ಉದ್ಘಾಟಿಸಿ ಮಾತನಾಡಿದರು.

ಈಗಾಗಲೇ ಉಡುಪಿಯಲ್ಲಿ  ಸುಮಾರು 2 ಕೋಟಿ  55 ಲಕ್ಷ ರೂ. ವೆಚ್ಚದ  ಮಹಿಳಾ ಮೀನು ಮಾರುಕಟ್ಟೆಯನ್ನು ಉದ್ಘಾಟನೆ ಮಾಡಿದ್ದೇನೆ ಇದು ಇಡೀ ದೇಶದಲ್ಲಿಯೇ ಅತೀ ದೊಡ್ಡ ಮೀನು ಮಾರುಕಟ್ಟೆ ಎನ್ನುವ ಹೆಮ್ಮೆ ನಮಗಿದೆ. ಆದರೆ ಈಗ ಬಂದ ಕೇಂದ್ರ ಮೋದಿ ಸರಕಾರ ಶೇ.90 ರಷ್ಟು ಭಾಗವನ್ನು ತೆಗೆದು ಶೇ.50 ಕ್ಕೆ ಇಳಿಸಿದ್ದು  ಇನ್ನು ಮುಂದೆ ಕೇಂದ್ರ ಮತ್ತು ರಾಜ್ಯ ಸರಕಾರಗಳು ಸೇರಿ ಮೀನು ಮಾರುಕಟ್ಟೆಯನ್ನು ನಿರ್ಮಿಸಲು ಸಾಧ್ಯವಾಗದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ  ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರನ್ನು  ಸಮ್ಮಾನಿಸಲಾಯಿತು.
ತೆಕ್ಕಟ್ಟೆ ಗ್ರಾ.ಪಂ. ಅಧ್ಯಕ್ಷ  ಶೇಖರ ಕಾಂಚನ್‌ ಕೊಮೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿ ತಾಲೂಕು ಪಂಚಾಯತ್‌ ಸದಸ್ಯೆ  ಜ್ಯೋತಿ ಪುತ್ರನ್‌, ತೆಕ್ಕಟ್ಟೆ ಗ್ರಾಮ ಪಂಚಾಯತ್‌ ಉಪಾಧ್ಯಕ್ಷೆ  ಜಯಾ, ತೆಕ್ಕಟ್ಟೆ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಮಲ್ಯಾಡಿ ಶಿವರಾಮ ಶೆಟ್ಟಿ, ಹಿರಿಯಣ್ಣ, ವಿಕಾಸ ಹೆಗ್ಡೆ, ರಮೇಶ್‌ ಕುಮಾರ್‌,   ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ (ನಿ.) ಮಂಗಳೂರು ಇದರ ಅಧ್ಯಕ್ಷ ರಾಜೇಂದ್ರ ವಿ.ನಾಯ್ಕ,  ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ (ನಿ.) ಮಂಗಳೂರು ಇದರ  ವ್ಯವಸ್ಥಾಪಕ ನಿರ್ದೇಶಕ ವಿ.ಕೆ. ಶೆಟ್ಟಿ, ಗುತ್ತಿಗೆದಾರ ಎಚ್‌.ಗೋಪಾಲ್‌ ಶೆಟ್ಟಿ  ಹೊಸಮಠ ಕೊರ್ಗಿತೆಕ್ಕಟ್ಟೆ ಗ್ರಾಮ ಪಂಚಾಯತ್‌ ಸರ್ವ ಸದಸ್ಯರು  ಉಪಸ್ಥಿತರಿದ್ದರು.

ತೆಕ್ಕಟ್ಟೆ ಗ್ರಾಮ ಪಂಚಾಯತ್‌ ಅಧ್ಯಕ್ಷ  ಶೇಖರ ಕಾಂಚನ್‌ ಕೊಮೆ ಸ್ವಾಗತಿಸಿ, ಕರ್ನಾಟಕ ಮೀನುಗಾರಿಕಾ ಅಭಿವೃದ್ಧಿ ನಿಗಮ (ನಿ.) ಮಂಗಳೂರು ಇದರ ಅಧ್ಯಕ್ಷ ರಾಜೇಂದ್ರ ವಿ.ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ,  ದೈಹಿಕ ಶಿಕ್ಷಣ ಶಿಕ್ಷಕ ಗೋಪಾಲ್‌ ಶೆಟ್ಟಿ  ನಿರೂಪಿಸಿ, ವಂದಿಸಿದರು.

ಮಲ್ಲಿಗೆಯ ಹಾರವನ್ನು ಮಹಿಳಾ ಮೀನುಗಾರರಿಗೆ ನೀಡಿದ ಸಚಿವರು
ತೆಕ್ಕಟ್ಟೆಯಲ್ಲಿ ನೂತನ ಸುಸಜ್ಜಿತ ಮೀನು ಮಾರುಕಟ್ಟೆಯ ಉದ್ಘಾಟನೆಗಾಗಿ ಆಗಮಿಸಿದ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರಿಗೆ  ಸಭೆಯ ಶಿಷ್ಟಾಚಾರದಂತೆ ಸ್ವಾಗತಿಸಿ ಮಲ್ಲಿಗೆ ಹೂವಿನ ಹಾರ ಹಾಕಿದಾಗ ಸಚಿವರು ತನಗೆ ಹಾಕಿರುವ ಮಲ್ಲಿಗೆ ಹೂವಿನ ಹಾರವನ್ನು  ಸಭೆಯಿಂದ ಇಳಿದು ಬಂದು ಕಾರ್ಯಕ್ರಮದ ಮುಂದಿನ ಸಾಲಿನಲ್ಲಿ ಕುಳಿತಿದ್ದ  ಮಹಿಳಾ ಮೀನುಗಾರರಿಗೆ  ನೀಡುವ ಮೂಲಕ   ನೆರೆದವರ ಗಮನ ಸೆಳೆದರು.

ಟಾಪ್ ನ್ಯೂಸ್

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts-s

Udupi: ವಿಮಾನಯಾನ ವಿಳಂಬದ ವಿರುದ್ಧ ನ್ಯಾಯಾಲಯದಲ್ಲಿ ಜಯ

Suicide 3

Karkala:ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿ ಕುಗ್ಗಿದ್ದ ಯುವಕ ಆತ್ಮಹ*ತ್ಯೆ

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

court

Manipal: ಲಂಚ ಸ್ವೀಕಾರ ಆರೋಪದಲ್ಲಿ ಬಂಧಿತರಿಗೆ ಜಾಮೀನು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

8

Mohini Dey: ಎಆರ್ ರೆಹಮಾನ್ ಜತೆ ಸಂಬಂಧ.. ಅವರು ನನಗೆ ತಂದೆ ಸಮಾನ ಎಂದ ಮೋಹಿನಿ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Tiger: ಬೆಂಗಳೂರಿನಿಂದ ತಿರುಪತಿ ಮೃಗಾಲಯಕ್ಕೆ ತಂದಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.