ರದ್ದು ನೋಟಿನಿಂದ ಸಣ್ಣ ಉದ್ಯಮಕ್ಕೆ ಸಾಲ
Team Udayavani, Mar 10, 2017, 2:49 PM IST
ಕಲಬುರಗಿ: ದೇಶದಲ್ಲಿ ದೊಡ್ಡ ಮಟ್ಟದಲ್ಲಿ ರದ್ದು ಮಾಡಲಾಗಿರುವ ನೋಟುಗಳು ಬ್ಯಾಂಕುಗಳಿಗೆ ಬಂದು ಜಮೆಯಾಗಿದೆ. ಜಮೆ ಆಗಿರುವ ಆ ನೋಟುಗಳಿಂದ ಗೃಹ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗೆ ಸಾಲ ನೀಡುವ ಮೂಲಕ ಬ್ಯಾಂಕುಗಳ ಆದಾಯವನ್ನುಹೆಚ್ಚಳ ಮಾಡಿಕೊಳ್ಳಬಹುದಾಗಿದೆ ಎಂದು ಕೆನರಾ ಬ್ಯಾಂಕ್ ಕಾರ್ಯನಿರ್ವಾಹಕ ನಿರ್ದೇಶಕಿ ಪಿ.ವಿ.ಭಾರತಿ ಅಭಿಪ್ರಾಯ ವ್ಯಕ್ತಪಡಿಸಿದರು.
ರಾಜಾಪುರದಲ್ಲಿರುವ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕಿನ ಮುಖ್ಯ ಕಚೇರಿಯಲ್ಲಿ ನೂತನವಾಗಿ ಆಗಮಿಸಿದ್ದ ಸಿಬ್ಬಂದಿಗಳಿಗೆ ತರಬೇತಿ ನೀಡಲು ಆರಂಭಿಸಲಾಗಿರುವ ತರಬೇತಿ ಕೇಂದ್ರ ಉದ್ಘಾಟಿಸಿ ಅವರು ಮಾತನಾಡಿದರು. ಅಮಾನ್ಯಿàಕರಣದಿಂದಾಗಿ ಬ್ಯಾಂಕುಗಳಿಗೆ ಬಂದಿರುವ ಅಪಾರ ಹಣವನ್ನು ಬ್ಯಾಂಕುಗಳ ಸರ್ವಾಂಗೀಣ ಬೆಳವಣಿಗೆಗೆ ಬಳಕೆ ಮಾಡಲು ಯೋಜಿಸಲಾಗಿದೆ.
ಪಿಕೆಜಿಬಿ ಎನ್‌ಪಿಎ ಶೇಕಡಾ 4.5ರಷ್ಟು ಇದ್ದು, ಇದನ್ನು ಶೇಕಡಾ 2.5ಕ್ಕೆ ಇಳಿಸುವ ನಿಟ್ಟಿನಲ್ಲಿ ಬ್ಯಾಂಕ್ ಪ್ರಯತ್ನಪಡಬೇಕು ಎಂದು ಸಲಹೆ ಮಾಡಿದರು.ಬ್ಯಾಂಕಿಂಗ್ ವಲಯದಲ್ಲಿ ಉತ್ತಮ ಸಾಧನೆ ಮಾಡುವುದರ ಮೂಲಕ ಹಾಗೂ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳುವುದರ ಮೂಲಕ ಪ್ರಗತಿ ಕೃಷ್ಣಾ ಗ್ರಾಮೀಣ ಬ್ಯಾಂಕ್ ಕೆನರಾ ಬ್ಯಾಂಕಿನ ಗೌರವ ಹೆಚ್ಚಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕೆನರಾ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕರವೀಂದ್ರ ಬಂಡಾರಿ ಅಧ್ಯಕ್ಷತೆ ವಹಿಸಿದ್ದರು. ಜ್ಯೋತಿ ಪ್ರಾರ್ಥನಾ ಗೀತೆ ಹಾಡಿದರು. ರವಿ ಸುಧಾಕರ್ ಸ್ವಾಗತಿಸಿದರು. ಪಿಕೆಜಿಬಿ ಅಧ್ಯಕ್ಷ ಆರ್. ರವಿಕುಮಾರ ಪ್ರಾಸ್ತಾವಿಕವಾಗಿ ಮಾತನಾಡಿದರು. ಬ್ಯಾಂಕಿನ ಹಿರಿಯ ಸಿಬ್ಬಂದಿಹಾಗೂ ಹೊಸದಾಗಿ ನೇಮಕಗೊಂಡಿರುವ ಸಿಬ್ಬಂದಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಪುನರ್ ವಿಂಗಡನೆ ಮೂಲಕ ರಾಜ್ಯಕ್ಕೆ ಅನ್ಯಾಯ ಮಾಡುವ ಸಂಚು: ಪ್ರಿಯಾಂಕ್ ಖರ್ಗೆ
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
MUST WATCH
ಹೊಸ ಸೇರ್ಪಡೆ
1st ODI: ಇಂಗ್ಲೆಂಡ್ ವಿರುದ್ಧ ವಿಂಡೀಸ್‌ಗೆ 8 ವಿಕೆಟ್ ಜಯ
Congress ಬಣ್ಣ ಕೆಟ್ಟದಾಗಿ ಬಹಿರಂಗವಾಗಿದೆ: ಖರ್ಗೆ ಹೇಳಿಕೆ ಕುರಿತು ಪ್ರಧಾನಿ ಮೋದಿ ಲೇವಡಿ
Mudigere: ಬೀದಿನಾಯಿ ಅಡ್ಡಬಂದು ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Delhi pollution; ಹಾಳಾದ ರಸ್ತೆಗಳನ್ನು ಸರಿಪಡಿಸುವಲ್ಲಿ ಆಪ್ ವಿಫಲ: ಬಿಜೆಪಿ ವಾಗ್ದಾಳಿ
Deepawali; ಸರಣಿ ರಜೆ :ಹಂಪಿಯಲ್ಲಿ ಪ್ರವಾಸಿಗರ ದಂಡು, ಪರದಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.