ಗಣಪತಿ ಆತ್ಮಹತ್ಯೆ ಪ್ರಕರಣ; ಎ. 3ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್‌


Team Udayavani, Mar 10, 2017, 3:09 PM IST

10MADIKERI-3.jpg

ಮಡಿಕೇರಿ: ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ನಡೆದಿದ್ದ ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ತಂದೆ, ತಾಯಿ,  ಸಹೋದರ ಮತ್ತು ಸಹೋದರಿಯನ್ನು ಫಿರ್ಯಾದಿ ದಾರರನ್ನಾಗಿ ಪರಿಗಣಿಸಬೇಕೆಂದು ನಗರದ ಪ್ರಿನ್ಸಿಪಲ್‌ ಸಿವಿಲ್‌ ಜಡ್ಜ್ (ಜೂನಿಯರ್‌ ಡಿವಿಜನ್‌) ಮತ್ತು ಜೆಎಂಎಫ್ಸಿ ನ್ಯಾಯಾಲಯದ‌ಲ್ಲಿ ವಾದ ಮಂಡನೆಯಾಗಿದೆ. ಈ ಸಂಬಂಧದ ಆದೇಶವನ್ನು ಎ. 3ಕ್ಕೆ ಕಾಯ್ದಿರಿಸಲಾಗಿದೆ.

ಡಿವೈಎಸ್‌ಪಿ ಗಣಪತಿ ಅವರ ತಂದೆ ಕುಶಾಲಪ್ಪ, ತಾಯಿ ಪೆ‌ೂನ್ನಮ್ಮ, ಸಹೋದರ ಮಾಚಯ್ಯ ಮತ್ತು ಸಹೋದರಿ ಸಬಿತಾ ಅವರ ಪರವಾಗಿ ರಾಜ್ಯ ಉಚ್ಚ ನ್ಯಾಯಾಲಯದ ನ್ಯಾಯವಾದಿಗಳಾದ ಎಚ್‌. ಪವನ್‌ಚಂದ್ರ ಶೆಟ್ಟಿ ಅವರು ಅಗತ್ಯ ದಾಖಲೆಗಳ ಸಹಿತ ತಮ್ಮ ವಾದವನ್ನು ಮಂಡಿಸಿದರು. ಇದನ್ನು ಆಲಿಸಿದ ನ್ಯಾಯಾಧೀಶರಾದ ಅನ್ನಪೂರ್ಣೇಶ್ವರಿ ಅವರು, ಈ ಸಂಬಂಧದ ತಮ್ಮ ಆದೇಶ ನೀಡಲು ಮುಂದಿನ ಎ. 3ನ್ನು ನಿಗದಿಪಡಿಸಿದರು.

ವಾದಮಂಡನೆಗೆ ಸಂಬಂಧಿಸಿದಂತೆ ವಕೀಲ ಪವನ್‌ಚಂದ್ರ ಶೆಟ್ಟಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕಳೆದ ಸಾಲಿನ ಜು. 7ರಂದು ಡಿವೈಎಸ್‌ಪಿ ಗಣಪತಿ ಅವರು ಕೆಲವರ ವಿರುದ್ಧ ಆರೋಪಗಳನ್ನು ಮಾಡಿ ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ನ್ಯಾಯಾಲಯದ ಸೂಚನೆ ಮೇರೆ ಪ್ರಕರಣ ದಾಖಲಾಗುವುದರೊಂದಿಗೆ,  ಸಿಐಡಿ ತನಿಖೆಯೂ ನಡೆದಿತ್ತು.

ತನಿಖೆೆ ನಡೆಸಿದ ಸಿಐಡಿ ಬಿ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಈ ಸಂದರ್ಭ ಡಿವೈಎಸ್‌ಪಿ ಗಣಪತಿ ಅವರ ಪುತ್ರ ನೇಹಾಲ್‌ ಗಣಪತಿ ಅವರು, ತಮ್ಮ ಶಿಕ್ಷಣಕ್ಕೆ ತೊಂದರೆಯಾಗುವ ವಿಚಾರವನ್ನು ತಿಳಿಸಿ ಪ್ರಕರಣದಿಂದ ಹಿಂದಕ್ಕೆ ಸರಿದಿದ್ದರು. 
ಆದರೆ ಪ್ರಕರಣದಲ್ಲಿ ಮುಂದುವರಿಯಲು ಅವಕಾಶ ನೀಡುವಂತೆ ಡಿವೈಎಸ್‌ಪಿ ಗಣಪತಿ ಅವರ ತಂದೆ, ತಾಯಿ, ಸಹೋದರ ಮತ್ತು ಸಹೋದರಿ ನ್ಯಾಯಾಲಯಕ್ಕೆ ಮನವಿ ಮಾಡಿಕೊಂಡಿದ್ದನ್ನು ಅವರು ಉಲ್ಲೇಖೀಸಿದರು.

ಸುಪ್ರೀಂ ಅಂಗಳದಲ್ಲಿದೆ ಪ್ರಕರಣ
 ಇದರೊಂದಿಗೆ ಡಿವೈಎಸ್‌ಪಿ ಗಣಪತಿ ಅವರ ತಂದೆ ಕುಶಾಲಪ್ಪ  ಸರ್ವೋಚ್ಚ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿದ ಹಿನ್ನೆಲೆಯಲ್ಲಿ ಸರ್ವೋಚ್ಚ ನ್ಯಾಯಾಲ ಯವು, ಒಟ್ಟು ಪ್ರಕರಣವನ್ನು ಸಿಬಿಐಗೆ ವಹಿಸಿ ಕೊಡುವುದಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ವರದಿ ಸಲ್ಲಿಸುವಂತೆ ತಿಳಿಸಿದೆ. ಈ ಹಿನ್ನೆಲೆಯಲ್ಲಿ ಡಿವೈಎಸ್‌ಪಿ ಗಣಪತಿ ಅವರ ತಂದೆ, ತಾಯಿ, ಸಹೋದರ  ಸಹೋದರಿ ಅವರಿಗೆ ಪ್ರಕರಣವನ್ನು ಮುಂದುವರಿಸಲು ಅವಕಾಶ ನೀಡುವಂತೆ ಕೋರಿಕೊಳ್ಳುತ್ತಿರುವುದಾಗಿ ವಕೀಲ ಪವನ್‌ ಚಂದ್ರ ಶೆಟ್ಟಿ ತಿಳಿಸಿದರು.

 ಸರ್ವೋಚ್ಚ ನ್ಯಾಯಾಲಯವು 2016ರ  ದಾರಿವಾಲ್‌ ಇಂಡಸ್ಟ್ರೀಸ್‌ ಮತ್ತು ಕಿಶೋರ್‌ ವಾದ್‌ ವಾಲ್‌ ಪ್ರಕರಣದ ತೀರ್ಪಿನಲ್ಲಿ, ನೊಂದ ಮಂದಿಗೆ ಪ್ರಕರಣವನ್ನು ನಡೆಸಲು ಅವಕಾಶ ನೀಡಬೇಕೆಂದು ಸ್ಪಷ್ಟವಾಗಿ ತಿಳಿಸಿದೆ. ಉಳ್ಳವರಿಂದ ಯಾವುದೇ ಕಾರಣಕ್ಕೂ ಸಾಮಾನ್ಯ ಜನರಿಗೆ ತೊಂದರೆ ಉಂಟಾಗದಂತೆ ಸಂವಿಧಾನದಲ್ಲಿ ಅವಕಾಶವನ್ನು ನೀಡಿದ್ದು, ಅದನ್ನು ನ್ಯಾಯಾಲಯ ಪರಿಗಣಿಸಿದೆ. ಇದೇ ಪ್ರಕಾರವಾಗಿ ಗಣಪತಿ ಅವರ ಪ್ರಕರಣವನ್ನು ಕೂಡ ಪರಿಗಣಿಸಬೇಕೆಂದು ನ್ಯಾಯಾಲಯದ ಮುಂದೆ ಮನವಿ ಮಾಡಿರುವುದಾಗಿ ವಕೀಲ ಪವನ್‌ ಚಂದ್ರ ಶೆಟ್ಟಿ ಹೇಳಿದರು.

ಪ್ರಕರಣದ ವಾದಮಂಡನೆಯ ಸಂದರ್ಭ ಡಿವೈಎಸ್‌ಪಿ ಗಣಪತಿ ಅವರ ತಂದೆ ಕುಶಾಲಪ್ಪ, ಸಹೋದರ ಮಾಚಯ್ಯ ಅವರುಗಳಿದ್ದರು.
ಮಾಚಯ್ಯ ಅವರು ಮಾತನಾಡಿ, ಪ್ರಕರಣದಲ್ಲಿ ತಮ್ಮನ್ನು ಅರ್ಜಿದಾರರನ್ನಾಗಿ  ನ್ಯಾಯಾಲಯ ಪರಿಗಣಿಸುವ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಲ್ಕರ್ ಹತ್ಯೆ ಆರೋಪಿ: ಮೂಲಗಳು

Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod ಅಪರಾಧ ಸುದ್ದಿಗಳು

Untitled-5

Kasaragod: ಮಾನ್ಯ ಅಯ್ಯಪ್ಪ ಭಜನ ಮಂದಿರದಿಂದ ಕಳವು; ಓರ್ವನ ಬಂಧನ

Arrest

Kasaragodu: ಆಸ್ತಿ ವಿವಾದ: ಅಣ್ಣನ ಕೊಲೆ, ಇಬ್ಬರಿಗೆ ಇರಿತ; ತಮ್ಮನ ಸೆರೆ

ACT

Manjeshwar: ಬಂಧಿತರ ಪೈಕಿ ಓರ್ವ 15 ಪ್ರಕರಣಗಳಲ್ಲಿ ಆರೋಪಿ

POlice

Kumbla: ಪ್ರಾಣ ಲೆಕ್ಕಿಸದೆ ಹೊಳೆಗೆ ಹಾರಿ ಆರೋಪಿಯನ್ನು ಬಂಧಿಸಿದ ಪೊಲೀಸರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

9

Anandapura: ಸಾಲ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.