ಸುದಿನ ಸಂದರ್ಶನ: ‘ಅಭಿವೃದ್ಧಿ- ಆದಾಯ ಸಂಗ್ರಹ’ಕ್ಕೆ ವಿಶೇಷ ಒತ್ತು 


Team Udayavani, Mar 10, 2017, 5:46 PM IST

Mayor-Interview-600.jpg

ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷರಾಗಿ ಕೆಲವು ನಿರ್ದಿಷ್ಟ ಕ್ರಮಗಳನ್ನು ಕೈಗೊಳ್ಳಲು ಬಯಸಿದ್ದ ಕವಿತಾ ಸನಿಲ್‌ರಿಗೆ ಈಗ ನಗರದ ಪ್ರಥಮ ಪ್ರಜೆಯ ಅಧಿಕಾರದ ದಂಡ ದೊರಕಿದೆ.ಈ ಸಂದರ್ಭದಲ್ಲಿ  ನಾಗರಿಕರು ಹತ್ತು ಹಲವು ನಿರೀಕ್ಷೆಗಳನ್ನು ಸಹಜವಾಗಿಯೇ ಇಟ್ಟುಕೊಂಡಿದ್ದಾರೆ. ಈ ಕುರಿತು ಇಲ್ಲಿ ಹಂಚಿಕೊಂಡಿದ್ದಾರೆ.

ನಗರದ ಸಮಗ್ರ ಅಭಿವೃದ್ಧಿಗೆ ನಿಮ್ಮ ಅವಧಿಯಲ್ಲಿ ಏನು ಮಾಡುತ್ತೀರಿ? 
ಈ ಬಗ್ಗೆ ಇನ್ನಷ್ಟೇ ಯೋಚಿಸಬೇಕಿದೆ. ಆದರೂ, 60 ವಾರ್ಡ್‌ಗಳನ್ನು ಒಂದೇ ದೃಷ್ಟಿಯಿಂದ ಪರಿಗಣಿಸಿ, ಮೂಲ ಸೌಕರ್ಯ ಕಲ್ಪಿಸಲು ಪ್ರಥಮ ಆದ್ಯತೆ ನೀಡಲಾಗುವುದು. ಕುಡಿಯುವ ನೀರಿನ ಸಮಸ್ಯೆ ಯಾವುದೇ ರೀತಿಯಲ್ಲಿ ಬಾಧಿಸದ ಹಾಗೆ ಮುನ್ನೆಚ್ಚರಿಕೆ ವಹಿಸಲಾಗುವುದು. ನಗರದ ಆಯ್ದ ಭಾಗದಲ್ಲಿ ಬಸ್‌ ನಿಲ್ದಾಣ ಹಾಗೂ ಅಗತ್ಯವಿರುವಲ್ಲಿ ಫುಟ್‌ಪಾತ್‌ ನಿರ್ಮಾಣ ಹಾಗೂ ಪ್ರೀಮಿಯಂ ಎಫ್‌.ಎ.ಆರ್‌.ನಲ್ಲಿ ಬಾಕಿ ಉಳಿದ ಕಾಮಗಾರಿಗಳನ್ನು ಮುಗಿಸಲಾಗುವುದು. ವಿಶೇಷವಾಗಿ ದೊಡ್ಡ ರಸ್ತೆಗಳನ್ನು ಆದ್ಯತೆಯ ಮೇರೆಗೆ ಈ ಅನುದಾನದಲ್ಲಿ ಕೈಗೊಳ್ಳಲಾಗುವುದು. ಸಂಪೂರ್ಣವಾಗಿ ಮಂಗಳೂರು ಪ್ಲಾಸ್ಟಿಕ್‌ ಮುಕ್ತ ಮಾಡಲು ಪಣ ತೊಡಲಾಗುವುದು.

ಸ್ಮಾರ್ಟ್‌ಸಿಟಿ ಅನುಷ್ಠಾನ ಪ್ರಕ್ರಿಯೆ ಸದ್ಯ ನಡೆಯುತ್ತಿರುವ ಹಿನ್ನೆಲೆಯಲ್ಲಿ ಹೊಸ ಆಲೋಚನೆ ಏನಾದರೂ ಇದೆಯೇ?
ಸ್ಮಾರ್ಟ್‌ಸಿಟಿಗೆ ಆಯ್ಕೆಯಾಗಲು ಕಳುಹಿಸಿದ ಪ್ರಸ್ತಾಪವನ್ನು ಜಾರಿಗೆ ತರಲು ಉನ್ನತ ಮಟ್ಟದ ಸಮಿತಿ, ಅಧಿಕಾರಿಗಳ ನೇತೃತ್ವದಲ್ಲಿ ಕೆಲಸ ಮಾಡಲಾಗುವುದು. ಪ್ರಸ್ತಾಪವನ್ನು ಹೊರತುಪಡಿಸಿ ಸದ್ಯಕ್ಕೆ ಹೊಸದೇನೂ ಇಲ್ಲ.

ನಗರಕ್ಕೆ ಕುಡಿಯುವ ನೀರು ಸದ್ಯಕ್ಕೆ ಇದ್ದರೂ, ಭವಿಷ್ಯದಲ್ಲಿ ಸಮಸ್ಯೆಯಾಗದಂತೆ ಏನು ಮಾಡುತ್ತೀರಿ?
ಮೊದಲಿಗೆ ತುಂಬೆ ಡ್ಯಾಂನ ನೀರಿನ ಇರುವಿಕೆಯ ಬಗ್ಗೆ ಅಧಿಕಾರಿಗಳಿಂದ ಸ್ಥಳ ಸಮೀಕ್ಷೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಸದ್ಯಕ್ಕೆ ಪ್ರತಿ ದಿನ ನೀರು ಕೊಡಲಾಗುತ್ತಿದೆ. ಒಂದು ವೇಳೆ ಸಮಸ್ಯೆ ಎದುರಾದರೆ ಎರಡು ದಿನಕ್ಕೊಮ್ಮೆ ನೀರು ಪೂರೈಸಲು ಯೋಚಿಸಲಾಗುವುದು. ಅಂತೂ ಜನರಿಗೆ ಈ ಬಾರಿ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಲಾಗುವುದು. ಮಳೆಕೊಯ್ಲು, ಕೆರೆಗಳ ಅಭಿವೃದ್ಧಿಗೆ ಗಮನ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು.

ತ್ಯಾಜ್ಯ ನಿರ್ವಹಣೆ ಸರಿಯಾಗಿ ಆಗುತ್ತಿಲ್ಲ ಎಂಬ ಆರೋಪವಿದೆ. ಇದಕ್ಕೇನು ಮಾಡುತ್ತೀರಿ? 
ಹೌದು. ಇದನ್ನು ಬಗೆಹರಿಸಲು ಕೋಳಿ ತ್ಯಾಜ್ಯ ಹಾಗೂ ಸೀಯಾಳ ತ್ಯಾಜ್ಯವನ್ನು ಬೇರೆ ಬೇರೆಯಾಗಿ ವಿಂಗಡಿಸಿ ನಿರ್ವಹಿಸಲಾಗುವುದು. ಆರೋಗ್ಯ ಸ್ಥಾಯೀ ಸಮಿತಿಯ ಅಧ್ಯಕ್ಷಳಾಗಿ ಕಾರ್ಯ ನಿರ್ವಹಿಸಿದ ಅನುಭವದಲ್ಲಿ ತ್ಯಾಜ್ಯ ನಿರ್ವಹಣೆಗೆ ವಿಶೇಷ ಗಮನ ನೀಡಲಾ ಗುವುದು. ಪ್ರತಿ ದಿನ ಮನೆ ಮನೆಯಿಂದ ಕಸ ಸಂಗ್ರಹಕ್ಕೆ ಗಮನ ಕೊಡಲಾಗುವುದು.

ಈಗಿನ ತ್ಯಾಜ್ಯ ನಿರ್ವಹಣೆಯ ಮಾದರಿಯನ್ನು ಕೈಬಿಟ್ಟು, ಹಿಂದಿನ ರೀತಿಯಲ್ಲಿ ಕಸ ಸಂಗ್ರಹ ಮಾಡಲಾಗುವುದೆಂಬ ಮಾತು ಕೇಳಿಬರುತ್ತಿದೆಯಲ್ಲ?
ಈ ಬಗ್ಗೆ ನಮ್ಮ ಶಾಸಕರು, ಕಾರ್ಪೊರೇಟರ್‌ಗಳ ಜತೆಗೆ ಮಾತನಾಡಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು.

ಬಹುನಿರೀಕ್ಷಿತ ಪಂಪ್‌ವೆಲ್‌ ಬಸ್‌ನಿಲ್ದಾಣ ಕನಸು ಈ ಬಾರಿಯಾದರೂ ನನಸಾಗುವುದೇ?
ಬಸ್‌ ನಿಲ್ದಾಣಕ್ಕೆ ಜಾಗ ಕೊಡುವುದಾ? ಅಥವಾ ಬೇಡವಾ? ಎಂಬುದು ಸ್ಪಷ್ಟವಾಗಬೇಕಿದೆ. ಯಾಕೆಂದರೆ ಎರಡು ವರ್ಷದಿಂದ ಜಾಗ ಖರೀದಿ ಮಾಡುವುದೇ ಬೇಡವೇ ಎಂಬುದಕ್ಕೆ ಸ್ಪಷ್ಟತೆಯೇ ದೊರಕುತ್ತಿಲ್ಲ. ಹೀಗಾಗಿ ಶಾಸಕರು, ಕಾರ್ಪೊರೇಟರ್‌ಗಳ ಉಪಸ್ಥಿತಿಯಲ್ಲಿ ಸ್ಪಷ್ಟ ನಿರ್ಧಾರ ಕೈಗೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು.

ನಗರದ ಮುಖ್ಯ ಸಮಸ್ಯೆ ವಾಹನ ದಟ್ಟಣೆ. ಈ ಒತ್ತಡ ಕಡಿಮೆ ಮಾಡಲು ನಿಮ್ಮ ಆಲೋಚನೆ?
ನಿಜಕ್ಕೂ ಇದು ನಗರದ ಬಹುದೊಡ್ಡ ಸಮಸ್ಯೆ. ಇದಕ್ಕಾಗಿ ಶೀಘ್ರವೇ ಟ್ರಾಫಿಕ್‌ ಪೊಲೀಸರ ನೇತೃತ್ವದಲ್ಲಿ ಸಭೆ ನಡೆಸಿ ಚರ್ಚಿಸಿ ಮಾರ್ಗೋಪಾಯ ಹುಡುಕಲಾಗುವುದು.

ಫುಟ್‌ಪಾತ್‌ ಸಮಸ್ಯೆಯನ್ನು ಹೇಗೆ ಬಗೆಹರಿಸುತ್ತೀರಿ?
ನಗರದ ಹಲವೆಡೆ ರಸ್ತೆಯಲ್ಲೇ ನಡೆದು ಹೋಗುವ ಪರಿಸ್ಥಿತಿ ಇದೆ. ಜನರಿಗೆ ಬಹುಮುಖ್ಯವಾಗಿ ಬೇಕಾಗಿರುವ ಫುಟ್‌ಪಾತ್‌ ನಿರ್ಮಾಣಕ್ಕೆ ಆದ್ಯತೆ ಕೊಡಲಾಗುವುದು.

ಪುರಭವನದ ಬಾಡಿಗೆ ಹೆಚ್ಚಾಗಿದೆ ಎಂಬ ಕಲಾವಿದರ ನೋವಿಗೆ ಸ್ಪಂದಿಸುತ್ತೀರಾ?
ಇದರ ಬಗ್ಗೆ ಪರಿಶೀಲಿಸಲಾಗುವುದು. ಬಾಡಿಗೆ ಕಡಿಮೆ ಮಾಡಲು ಸಾಧ್ಯವಿದ್ದರೆ ಕ್ರಮ ಕೈಗೊಳ್ಳಲಾಗುವುದು. ನನ್ನ ಅವಧಿಯಲ್ಲಿ ಯಾರಿಗೂ ಅನ್ಯಾಯ ಆಗದಂತೆ ಎಚ್ಚರ ವಹಿಸುವೆ.

ಆದಾಯ ಸಂಗ್ರಹಕ್ಕೆ ಪಾಲಿಕೆ ಒತ್ತು ನೀಡಿದರೂ, ನಿರೀಕ್ಷಿತ ಮಟ್ಟದಲ್ಲಿ ಸಂಗ್ರಹ ಆಗುತ್ತಿಲ್ಲ ಎಂಬ ಅಪವಾದವಿದೆ. ಯಾವ ಕ್ರಮ ಜರಗಿಸುತ್ತೀರಿ?
ಆದಾಯ ಸಂಗ್ರಹಕ್ಕೆ ವಿಶೇಷ ಒತ್ತು ನೀಡಬೇಕಿದೆ. ಪಾಲಿಕೆ ಆದಾಯದಲ್ಲಿ ಯಾವುದೇ ಸೋರಿಕೆ ಆಗದಂತೆ ನೋಡಿಕೊಳ್ಳಬೇಕಿದೆ. ಟ್ರೇಡ್‌ ಲೈಸೆನ್ಸ್‌ ನವೀಕರಣ ಸಹಿತ ಆದಾಯ ಸಂಗ್ರಹಕ್ಕೆ ನಾನು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆಯಾಗಿದ್ದಾಗ ಅಂಗಡಿಗಳಿಗೆ ದಾಳಿ ಮಾಡಲಾಗುತ್ತಿತ್ತು. ಇದನ್ನು ಮುಂದುವರಿಸಲಾಗುವುದು. ತೆರಿಗೆ ಪಾವತಿಸದವರ ವಿರುದ್ದ ಕಠಿನ ಕಾನೂನು ಕ್ರಮ ಜರಗಿಸಲಾಗುವುದು.

ವಿರೋಧ ರಾಜಕೀಯದಲ್ಲಿ ಸಹಜ. ಎಲ್ಲ ಪಕ್ಷದಲ್ಲೂ ಇದ್ದದ್ದೇ. ಹಾಗೆಯೇ ಆಕಾಂಕ್ಷಿಗಳ ಪಟ್ಟಿಯೂ ಸಹಜ. ಆದರೆ ಪಕ್ಷದ ನಿಯಮದಂತೆ ಹಿರಿಯ ನಾಯಕರ ಮತ್ತು ಕಾರ್ಪೊರೇಟರ್‌ಗಳ ನೇತೃತ್ವದಲ್ಲಿ ನಡೆದ ಆಂತರಿಕ ಮತದಾನದಲ್ಲಿ ನಾನು ಆಯ್ಕೆಯಾಗಿದ್ದೇನೆ.

ಸುರತ್ಕಲ್‌ನಲ್ಲೊಂದು ‘ಪುರಭವನ’ 
ಸುರತ್ಕಲ್‌ನಲ್ಲಿ ಸೂಕ್ತ ಸ್ಥಳವೊಂದು ಯಾವುದೇ ತಕರಾರು ಇಲ್ಲದೆ ದೊರೆತರೆ, ಪುರಭವನ ನಿರ್ಮಿಸುವ ಯೋಚನೆ ಇದೆ. ಮಂಗಳೂರು ಪುರಭವನದ ಹಾಗೆ ಆ ವ್ಯಾಪ್ತಿಯವರಿಗೆ ಕಾರ್ಯಚಟುವಟಿಕೆ ನಡೆಸಲು ಅನುಕೂಲವಾಗಲಿದೆ. ಅದೇ ರೀತಿ ಪಾಲಿಕೆ ವ್ಯಾಪ್ತಿಯ ನಿರ್ದಿಷ್ಟ ಸ್ಥಳಗಳನ್ನು ಸ್ಪಷ್ಟವಾಗಿ ಗುರುತಿಸುವಂತಹ ಹಾಗೂ ಜನರಿಗೆ ಸುಲಭವಾಗುವ ನೆಲೆಯಲ್ಲಿ ನಾಮಫಲಕಗಳನ್ನು ಅಳವಡಿಸಲು ಗಮನನೀಡಲಾಗುವುದು.

ಸಮಗ್ರ ಅಭಿವೃದ್ಧಿಗೆ ಆದ್ಯತೆ
ಆಂತರಿಕ ಮತದಾನದ ಮೂಲಕ ನಾನೇ ಗೆದ್ದಿದ್ದೇನೆ. ಹೀಗಾಗಿ ವಿರೋಧದ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ. ಇವತ್ತಿಗೆ ಅದೆಲ್ಲ ಮುಗಿದ ಅಧ್ಯಾಯ. ಇನ್ನೇನಿದ್ದರೂ ಮಂಗಳೂರಿನ ಸಮಗ್ರ ಅಭಿವೃದ್ಧಿ ಮಾತ್ರ ನನ್ನ ಮಾನದಂಡ. ನನ್ನನ್ನು ವಿರೋಧಿಸಿದವರೂ ಸಹಿತ ಎಲ್ಲ ಪಕ್ಷಗಳ ಸದಸ್ಯರನ್ನು ಒಂದೇ ರೀತಿಯಲ್ಲಿ ಪರಿಗಣಿಸಿ ನಗರದ ಅಭಿವೃದ್ಧಿಗೆ ಶ್ರಮಿಸಲಾಗುವುದು.

– ದಿನೇಶ್‌ ಇರಾ
– ಚಿತ್ರ- ಸತೀಶ್‌ ಇರಾ

ಟಾಪ್ ನ್ಯೂಸ್

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

IPL 2024: Pant has the ambition to become India’s cricket captain: Parth Jindal

IPL 2025: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.