3 ಟಿಎಂಸಿ ನೀರು ಬಿಡುವಂತೆ ತಮಿಳುನಾಡು ಮತ್ತೆ ಕ್ಯಾತೆ
Team Udayavani, Mar 11, 2017, 3:45 AM IST
ಬೆಂಗಳೂರು:ರಾಜ್ಯದಲ್ಲಿ ತೀವ್ರ ಬರಗಾಲದಿಂದ ಜನ ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೇ ಪರದಾಡುತ್ತಿರುವಾಗ ತಮಿಳು ಸರ್ಕಾರ ಮತ್ತೆ ಕಾವೇರಿ ನೀರಿಗಾಗಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ.
ಕೃಷ್ಣರಾಜ ಅಣೆಕಟ್ಟೆಯಿಂದ ಕುಡಿಯುವ ನೀರಿಗೆ 3 ಟಿಎಂಸಿ ನೀರು ಬಿಡುವಂತೆ ತಮಿಳುನಾಡು ಮುಖ್ಯ ಕಾರ್ಯದರ್ಶಿ ಗಿರಿಜಾ ವೈದ್ಯನಾಥನ್ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸುಭಾಸ್‌ಚಂದ್ರ ಕುಂಟಿಯಾ ಅವರಿಗೆ ಪತ್ರ ಬರೆದಿದ್ದಾರೆ.ಮಾರ್ಚ್ 9 ರಂದು ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿರುವ ತಮಿಳುನಾಡು ಮುಖ್ಯ ಕಾರ್ಯದರ್ಶಿ, ತಮಿಳುನಾಡಿನಲ್ಲಿ ಈ ವರ್ಷ ಮಳೆಯ ಅಭಾವದಿಂದ ಜನರಿಗೆ ಕುಡಿಯುವ ನೀರಿನ ತೀವ್ರ ಸಮಸ್ಯೆ ಉಂಟಾಗಿದ್ದು, ಕಾವೇರಿ ನದಿಯಿಂದ ಕುಡಿಯುವ ನೀರಿಗಾಗಿ 3 ಟಿಎಂಸಿ ನೀರನ್ನು ತಕ್ಷಣವೇ ಬಿಡುಗಡೆ ಮಾಡಬೇಕು. ಕಾವೇರಿ ನ್ಯಾಯಮಂಡಳಿಯ ತೀರ್ಪಿನಂತೆ ಕರ್ನಾಟಕ ಸರ್ಕಾರ ಪ್ರತಿ ದಿನ 2000 ಕ್ಯೂಸೆಕ್ ನೀರು ಬಿಡಬೇಕಿದೆ. ಸಧ್ಯದ ಪರಿಸ್ಥಿತಿಯಲ್ಲಿ ತಮಿಳು ನಾಡಿನಲ್ಲಿ ಕುಡಿಯುವ ನೀರಿಗೂ ಹಾಹಾಕಾರ ಉಂಟಾಗಿದ್ದು, ಈ ಬಗ್ಗೆ ವಿಳಂಬ ಮಾಡದೇ ಮೆಟ್ಟೂರು ಜಲಾಶಯಕ್ಕೆ ನೀರು ಬಿಡುವಂತೆ ಅವರು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.
ತಮಗೆ ಬಂದಿರುವ ಪತ್ರವನ್ನು ಮುಖ್ಯ ಕಾರ್ಯದರ್ಶಿ ಸುಭಾಸ್ ಚಂದ್ರ ಕುಂಟಿಯಾ ಅವರು, ಜಲ ಸಂಪನ್ಮೂಲ ಇಲಾಖೆಗೆ ರಾಜ್ಯದ ಕೆಆರ್‌ಎಸ್ ಹಾಗೂ ಇತರ ಜಲಾಶಯಗಳ ನೀರಿನ ವಾಸ್ತವ ಪರಿಸ್ಥಿತಿ ಹಾಗೂ ಕಾವೇರಿ ಕೊಳ್ಳದ ಭಾಗದಲ್ಲಿ ಈ ವರ್ಷ ಉಂಟಾಗಿರುವ ಬರಗಾಲದ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡುವಂತೆ ಕೋರಿದ್ದು, ಅವರ ಪತ್ರದನ್ವಯ ರಾಜ್ಯದ ಕಾವೇರಿ ಕೊಳ್ಳದ ಪ್ರದೇಶದಲ್ಲಿ ಈ ವರ್ಷ ತೀವ್ರ ಬರ ಇರುವುದರಿಂದ ರಾಜ್ಯದಲ್ಲಿಯೂ ಕುಡಿಯುವ ನೀರಿಗೆ ಪರದಾಡುವಂತಾಗಿದೆ. ನಮ್ಮ ರಾಜ್ಯದ ಜನರಿಗೂ ಕುಡಿಯುವ ನೀರಿಗೂ ಬಳಸಿಕೊಳ್ಳಲು ಜಲಾಶಯಗಳಲ್ಲಿ ನೀರಿಲ್ಲ ಎಂಬ ಅಭಿಪ್ರಾಯ ವ್ಯಕ್ತಪಡಿಸಿ, ಮುಖ್ಯಕಾರ್ಯದರ್ಶಿಗೆ ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳು ವರದಿ ನೀಡಿದ್ದಾರೆ ಎಂದು ತಿಳಿದು ಬಂದಿದೆ.
ಆ ವರದಿ ಆಧರಿಸಿ ಮುಖ್ಯಕಾರ್ಯದರ್ಶಿ ಸುಭಾಸ್‌ಚಂದ್ರ ಕುಂಟಿಯಾ ಸೋಮವಾರ ತಮಿಳುನಾಡಿಗೆ ರಾಜ್ಯದ ವಾಸ್ತವ ಮನವರಿಕೆ ಮಾಡಿ ಕೊಟ್ಟು ಪತ್ರ ಬರೆಯುವ ಸಾಧ್ಯತೆ ಇದೆ ಎಂದು ಜಲ ಸಂಪನ್ಮೂಲ ಇಲಾಖೆ ಮೂಲಗಳು ತಿಳಿಸಿವೆ.
ರಾಜ್ಯದಲ್ಲಿ ಈ ವರ್ಷ ತೀವ್ರ ಬರ ಎದುರಿಸುತ್ತಿರೋದ್ರಿಂದ ನಮಗೇ ಕುಡಿಯಲು ನೀರಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಕಾವೇರಿ ಕೊಳ್ಳದಲ್ಲಿ ಜನ, ಜಾನುವಾರುಗಳಿಗೆ ಕುಡಿಯಲು ನೀರಿಲ್ಲದೇ ಹಾಹಾಕಾರ ಉಂಟಾಗಿದೆ. ತಮಿಳುನಾಡಿನ ಬೇಡಿಕೆಗೆ ಈ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ನೀರು ಬಿಡುವ ಪ್ರಶ್ನೆಯೇ ಇಲ್ಲ.
-ಎಂ.ಬಿ.ಪಾಟೀಲ್, ಜಲ ಸಂಪನ್ಮೂಲ ಸಚಿವ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Hubli: ಪ್ರಿಯಾಂಕ್ ಖರ್ಗೆಗೆ ಎಫ್‌ಐಆರ್ ಹಾಕಿಸುವುದೇ ಕೆಲಸ: ತೇಜಸ್ವಿ ಸೂರ್ಯ
Bellary; ವಕ್ಫ್ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
MUST WATCH
ಹೊಸ ಸೇರ್ಪಡೆ
Tragedy: ಭೀಕರ ಬೈಕ್ ಅಪಘಾತ… ಕಾಲೇಜಿಗೆ ಹೊರಟಿದ್ದ ಇಬ್ಬರು ಯುವಕರು ಸ್ಥಳದಲ್ಲೇ ಮೃತ್ಯು
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Bengaluru: ದಾನದಲ್ಲಿ ಬೆಂಗಳೂರು ದೇಶದಲ್ಲೇ ನಂ.3
Wandse, ಚಿತ್ತೂರು, ಇಡೂರು: ಹೊಂಡಗಳಿಗೆ ಮುಕ್ತಿ ಕೊಡಿ
Bellary; ಜನಾರ್ದನ ರೆಡ್ಡಿ ಪಟಾಲಂ ರಾಜಕೀಯವಾಗಿ ಮತ್ತೆ ಬೆಳೆಯದಂತೆ ಮಾಡಬೇಕು: ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.