ಕೊಹ್ಲಿ-ಸ್ಮಿತ್ ನಡುವೆ ಸಂಧಾನ ಸಭೆ!
Team Udayavani, Mar 11, 2017, 9:51 AM IST
ಹೊಸದಿಲ್ಲಿ: ಭಾರತ-ಆಸ್ಟ್ರೇಲಿಯ ನಡುವಿನ ಬೆಂಗಳೂರು ಟೆಸ್ಟ್ ಪಂದ್ಯದ “ಡಿಆರ್ಎಸ್ ಪ್ರಕರಣ’ಕ್ಕೆ ಶೀಘ್ರವೇ ತೆರೆ ಬೀಳುವ ಸಮಯ ಸನ್ನಿಹಿತವಾದಂತಿದೆ. ರಾಂಚಿ ಟೆಸ್ಟ್ ಪಂದ್ಯಕ್ಕೂ ಮುನ್ನ ಇತ್ತಂಡಗಳ ನಾಯಕರಾದ ವಿರಾಟ್ ಕೊಹ್ಲಿ ಮತ್ತು ಸ್ಟೀವನ್ ಸ್ಮಿತ್ ಅವರನ್ನು ಒಟ್ಟಿಗೆ ಕೂರಿಸಿ ಕೊಂಡು ಸಂಧಾನ ಸಭೆಯೊಂದನ್ನು ನಡೆಸಲು ಬಿಸಿಸಿಐ ತೀರ್ಮಾನಿಸಿದೆ.
ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ಆಸೀಸ್ ನಾಯಕ ಸ್ಟೀವನ್ ಸ್ಮಿತ್ ಡಿಆರ್ಎಸ್ ತೆಗೆದುಕೊಳ್ಳುವ ವಿಷಯದಲ್ಲಿ ಎಡವಟ್ಟು ಮಾಡಿ ಕೊಂಡಿ ದ್ದರು. ಈ ವಿಷಯಕ್ಕೆ ಸಂಬಂಧ ಪಟ್ಟಂತೆ ಕ್ರೀಡಾಂಗಣದಲ್ಲೇ ಕೊಹ್ಲಿ ಜತೆಗೆ ತಿಕ್ಕಾಟವೂ ನಡೆದಿತ್ತು. ಸ್ಮಿತ್ ಮತ್ತು ಸಹ ಬ್ಯಾಟ್ಸ್ ಮನ್ ಹ್ಯಾಂಡ್ಸ್ಕಾಂಬ್ ಐಸಿಸಿ ನಿಯಮ ಉಲ್ಲಂ ಸಿ ಡ್ರೆಸ್ಸಿಂಗ್ ರೂಮ್ನತ್ತ ಸಂಕೇತ ರವಾನಿಸಿ ಮಾಹಿತಿ ಕೇಳಿದ್ದರು. ಇದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಆಸೀಸ್ ನಾಯಕ ಸ್ಮಿತ್, ಬ್ಯಾಟ್ಸ್ಮನ್ ಹ್ಯಾಂಡ್ಸ್ ಕಾಂಬ್ ವಿರುದ್ಧ ಐಸಿಸಿಗೆ ದೂರು ಸಲ್ಲಿಸಿತ್ತು. ಬಳಿಕ ಕೆಲವೇ ಗಂಟೆಗಳಲ್ಲಿ ಬಿಸಿಸಿಐ ಈ ದೂರನ್ನು ಹಿಂದಕ್ಕೆ ಪಡೆದಿದೆ.
ಇದೀಗ ವಿವಾದ ಸ್ವಲ್ಪ ಮಟ್ಟಿಗೆ ತಣ್ಣ ಗಾದರೂ ಬೂದಿ ಮುಚ್ಚಿದ ಕೆಂಡದಂತಿದೆ. ಇದನ್ನು ಪೂರ್ತಿ ತಣಿಸುವ ಪ್ರಯತ್ನ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ. ಮೂಲಗಳ ಪ್ರಕಾರ ವಿವಾದದ ಕೇಂದ್ರಬಿಂದುಗಳಾದ ಸ್ಮಿತ್ ಮತ್ತು ಕೊಹ್ಲಿ ಅವರನ್ನು ಒಟ್ಟಿಗೇ ಕೂರಿಸಿ, ಸಂಧಾನವೊಂದನ್ನು ನಡೆಸಿ ಪ್ರಕರಣಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಲಾಗುವುದು. ರಾಂಚಿಯಲ್ಲಿ ಮಾ. 16ರಿಂದ ಆರಂಭವಾಗುವ 3ನೇ ಟೆಸ್ಟ್ ಪಂದ್ಯಕ್ಕೂ ಮೊದಲು ಇವರಿಬ್ಬರು ಪರಸ್ಪರ ಮುಖಾಮುಖೀಯಾಗಿ ಮಾತನಾಡಿ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chess player; ಕುಟುಂಬ ಸಮೇತ ಮೋದಿ ಭೇಟಿಯಾದ ಕೊನೆರು ಹಂಪಿ
Vijay Hazare; ವಾಸುಕಿ,ಗೋಪಾಲ್ ಬೊಂಬಾಟ್ ಬೌಲಿಂಗ್; ಸೌರಾಷ್ಟ್ರ ವಿರುದ್ದ ಗೆದ್ದ ಕರ್ನಾಟಕ
Test Cricket; ರೋಹಿತ್ ಆಯ್ತು, ಈಗ ವಿರಾಟ್..: ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?
Sydney Test; ಬದಲಾದ ನಾಯಕ; ಮುಂದುವರಿದ ಬ್ಯಾಟಿಂಗ್ ಪರದಾಟ
Test; ಸಿಡ್ನಿ ಸಂಘರ್ಷಕ್ಕೆ ಭಾರತ ಸಿದ್ಧ :ರೋಹಿತ್-ಗಂಭೀರ್ ಮನಸ್ತಾಪ ತೀವ್ರ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.