ನನ್ನ- ಸಿದ್ದರಾಮಯ್ಯನವರ ನಡುವಿನ “ಚುನಾವಣೆ’


Team Udayavani, Mar 11, 2017, 12:30 PM IST

mys1.jpg

ಗುಂಡ್ಲುಪೇಟೆ: ನಂಜನಗೂಡು ಉಪಚುನಾವಣೆ ಕಾಂಗ್ರೆಸ್‌ ಮತ್ತು ಬಿಜೆಪಿ ನಡುವಿನ ಚುನಾವಣೆಯಲ್ಲ, ಇದು ನನ್ನ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಚುನಾವಣೆ ಎಂದು ಮಾಜಿ ಸಚಿವ ವಿ.ಶ್ರೀನಿವಾಸಪ್ರಸಾದ್‌ ಬಣ್ಣಿಸಿದರು. ಪಟ್ಟಣದ ನೆಹರೂ ಪಾರ್ಕ್‌ನಲ್ಲಿ ಬಿಜೆಪಿ ಕಾರ್ಯಕರ್ತರ ಸ್ವಾಭಿಮಾನಿ ಸಮಾವೇಶ ಉದ್ಘಾಟಿಸಿ ಮಾತನಾಡಿದರು.

ನಂಜನಗೂಡು ಉಪ ಚುನಾವಣೆಯು ಕೇವಲ ಪಕ್ಷಗಳ ಚುನಾವಣೆಯಲ್ಲ. ಬದಲಾಗಿ ನನ್ನ ಸ್ವಾಭಿಮಾನ ಮತ್ತು ಸಿಎಂ ಸಿದ್ದರಾಮಯ್ಯನವರ ದುರಾಡಳಿತದ ನಡುವೆ ನಡೆಯುತ್ತಿರುವ ಚುನಾವಣೆ. ಈ ಚುನಾವಣೆಯಲ್ಲಿ ನಾನು ಸೋತರೆ ರಾಜಕೀಯ ನಿವೃತ್ತಿಯನ್ನು ಹೊಂದುತ್ತೇನೆ.

ಕಾಂಗ್ರೆಸ್‌ ಸೋತರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆಯೇ ಎಂದು ಸವಾಲು ಹಾಕಿದರು. ನಂಜನಗೂಡು ಮತ್ತು ಗುಂಡ್ಲುಪೇಟೆಯಲ್ಲಿನ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಶತಃಸಿದ್ಧ. ಇದು ರಾಜ್ಯ ರಾಜಕಾರಣದ ದಿಕ್ಸೂಚಿಯನ್ನು ತೋರಿಸಲಿದ್ದು, ಇದರಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ಮುಖಭಂಗವಾಗುವುದು ಗ್ಯಾರೆಂಟಿ ಎಂದರು.  

ತಾವು ಕಂದಾಯ ಸಚಿವನಾಗಿದ್ದಾಗ ಪೋಡಿ ಮುಕ್ತ ರಾಜ್ಯವನ್ನಾಗಿ ಮಾಡಲು ಪ್ರಯತ್ನಿಸಿದೆ. 1768 ಸರ್ವೆಯರ್‌ಗಳನ್ನು ಹೊಸದಾಗಿ ನೇಮಕ ಮಾಡಿ ಕಂದಾಯ ಇಲಾಖೆಯಲ್ಲಿ ಕ್ರಾಂತಿಯನ್ನು ಮೂಡಿಸಿದೆ. ಯಾವುದೇ ಮುನ್ಸೂಚನೆ ನೀಡದೆ ತಮ್ಮನ್ನು ಮಂತ್ರಿಸ್ಥಾನದಿಂದ ಕೈಬಿಟ್ಟಿದ್ದರಿಂದ ನನ್ನ ಸ್ವಾಭಿಮಾನಕ್ಕೆ ಭಾರೀ ಧಕ್ಕೆಯಾಯಿತು.

ಅದಕ್ಕೆ ತಮ್ಮ ಶಾಸಕ ಸ್ಥಾನಕ್ಕೆ ಹಾಗೂ ಕಾಂಗ್ರೆಸ್‌ ಪಕ್ಷಕ್ಕೆ ರಾಜೀನಾಮೆ ನೀಡಿದೆ ಎಂದರು. ಸಿದ್ದರಾಮಯ್ಯ ರಾಜ್ಯ ಕಂಡ ಅನಾಗರಿಕ ಮುಖ್ಯಮಂತ್ರಿ. ಸತತ 40 ವರ್ಷಗಳ ಕಾಲ ಪರಿಶುದ್ಧ ರಾಜಕೀಯ ಮಾಡಿಕೊಂಡು ಬಂದ ತಮ್ಮನ್ನು ಸಂಪುಟದಿಂದ ಕೈಬಿಟ್ಟು ನನ್ನ ಮಗನ ವಯಸ್ಸಿನ ಪ್ರಿಯಾಂಕ ಖರ್ಗೆಯನ್ನು ಮಂತ್ರಿ ಮಾಡಿ ದಲಿತರನ್ನು ಹೊಡೆದ ಮೊದಲ ಮುಖ್ಯಮಂತ್ರಿ ಎಂಬ ಅಪಖ್ಯಾತಿ ಪಡೆದುಕೊಂಡಿರುವಿರಿ.

ಇದಕ್ಕೆ ಈ ಚುನಾವಣೆಯಲ್ಲಿ ತಕ್ಕ ಪಾಠ ನೀಡುತ್ತೇನೆ ಎಂದು ಸವಾಲು ಹಾಕಿದರು.  ಜಿಲ್ಲಾ ಬಿಜೆಪಿ ಅಧ್ಯಕ್ಷ ಪ್ರೊ. ಕೆ.ಆರ್‌.ಮಲ್ಲಿಕಾರ್ಜುನಪ್ಪ, ಉಪಾಧ್ಯಕ್ಷ ಸಿ.ಎಸ್‌.ನಿರಂಜನಕುಮಾರ್‌, ಮುಖಂಡರಾದ ಫ‌ಣೀಶ್‌, ಬಸವೇಗೌಡ, ಮಂಡಲ ಅಧ್ಯಕ್ಷ ಎಲ್‌.ಸುರೇಶ್‌, ಜಿಪಂ ಸದಸ್ಯೆ ರತ್ನಮ್ಮಶ್ರೀಕಂಠಪ್ಪ, ಪುರಸಭೆ ಸದಸ್ಯ ಎಸ್‌.ಗೋವಿಂದರಾಜನ್‌ ಇದ್ದರು.

ಟಾಪ್ ನ್ಯೂಸ್

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

Electric

Belagavi: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ, ಮಗ ಸೇರಿ ಮೂವರು ದುರ್ಮರಣ

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

BBK-11: ಬಿಗ್ ಬಾಸ್‌ ಮನೆಗೆ ಬಂದ್ರು ಖಡಕ್ ‘ವಕೀಲ್ ಸಾಬ್’

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…

BBK-11: ಆರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ರು ಖ್ಯಾತ ನಟನ ಪುತ್ರ

BBK-11: ಆರನೇ ಸ್ಪರ್ಧಿಯಾಗಿ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ರು ಖ್ಯಾತ ನಟನ ಪುತ್ರ

police crime

Bidar; ಮಹಿಳಾ ಪಿಎಸ್‌ಐ ಮೇಲೆ ಹಲ್ಲೆ ಮಾಡಿದ ಪೇದೆ ಅಮಾನತು

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bahga

K.S.Bhagawan ವಿವಾದ;ಮಾನ ಮರ್ಯಾದೆ ಇದ್ದರೆ ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು…

Yadhu

Udupi: ಚಾಮುಂಡಿ ಬೆಟ್ಟದ ಮೇಲೆ ಮಹಿಷ ದಸರಾ ಸರಿಯಲ್ಲ: ಸಂಸದ ಯದುವೀರ್‌

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

CM-Mysore1

MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

cow

Kundapura: ರಿಕ್ಷಾದಲ್ಲಿ ಬಂದು ಗೋ ಕಳ್ಳತನ

Untitled-1

Kundapura: ಹೈದರಾಬಾದ್‌ನಲ್ಲಿ ನಾಪತ್ತೆ; ಪ್ರಕರಣ ದಾಖಲು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

BBK-11: ಬಿಗ್ ಬಾಸ್ ಮನೆಯೊಳಗೆ ಜತೆಯಾಗಿ ಹೋದ ಕಿರುತೆರೆ ಸ್ನೇಹಿತರು

death

Udupi: ಸ್ಕೂಟರ್‌ ಮೇಲೆ ವಿದ್ಯುತ್‌ ತಂತಿ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಸಾವು

1-wqewqe

Malayalam ಚಿತ್ರರಂಗ; ಆ ದೃಶ್ಯಗಳನ್ನು ನೋಡುವಂತೆ ಬಲವಂತ: ನಟಿಯ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.