ಬಿಸಿಯೂಟ-ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳಕ್ಕೆ ಆಗ್ರಹ


Team Udayavani, Mar 11, 2017, 1:03 PM IST

dvg5.jpg

ದಾವಣಗೆರೆ: ರೈತರ ಸಾಲ ಮನ್ನಾ, ಬೆಳೆ ನಷ್ಟ ಪರಿಹಾರ ನೀಡಲು ಕ್ರಮ, ಬಜೆಟ್‌ನಲ್ಲಿ ವೇತನ ಹೆಚ್ಚಳ ಒಳಗೊಂಡಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಿಪಿಐ, ಎಐಟಿಯುಸಿ ಪದಾಧಿಕಾರಿಗಳು, ಬಿಸಿಯೂಟ, ಆಶಾ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟಿಸಿದ್ದಾರೆ. 

ಶ್ರೀ ಜಯದೇವ ವೃತ್ತದಿಂದ ಮೆರವಣಿಗೆ ಮೂಲಕ ಉಪ ವಿಭಾಗಾಧಿಕಾರಿ ಕಚೇರಿ ತಲುಪಿದ ಪ್ರತಿಭಟನಾಕಾರರು, ಪ್ರಧಾನಿ ನರೇಂದ್ರಮೋದಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಳುಹಿಸಲು ಮನವಿ ಸಲ್ಲಿಸಿದರು.  ಹಿಂದೆಂದೂ ಕಾಣದ ಬರಗಾಲಕ್ಕೆ ತುತ್ತಾಗಿ ರಾಜ್ಯದ 176 ತಾಲೂಕುಗಳ ಪೈಕಿ 160 ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ 17,500 ಕೋಟಿ, ಹಿಂಗಾರು ಮಳೆ ಕೈಕೊಟ್ಟು 7,160 ಕೋಟಿ ರೂ. ಬೆಳೆ, 45 ಲಕ್ಷ ಟನ್‌ ಆಹಾರಧಾನ್ಯ ನಷ್ಟವಾಗಿದೆ ಎಂದು ಸರ್ಕಾರವೇ ಅಂದಾಜಿಸಿದೆ.

ಕೇಂದ್ರ, ರಾಜ್ಯ ಸರ್ಕಾರ ಕೂಡಲೇ ರೈತರ ಎಲ್ಲಾ ಸಾಲ ಮನ್ನಾ ಮಾಡಬೇಕು. ವಿವಿಧ ಕಾರಣದಿಂದ ಬ್ಯಾಂಕ್‌, ಸಹಕಾರ ಸಂಘದಲ್ಲಿ ಸಾಲ ಪಡೆಯದೆ ಬೆಳೆ ನಷ್ಟಕ್ಕೆ ತುತ್ತಾಗಿರುವ ರೈತರಿಗೆ 25 ಸಾವಿರ ರೂ. ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಜನ, ಜಾನುವಾರುಗಳಿಗೆ ಕುಡಿಯುವ ನೀರು, ಉದ್ಯೋಗ ಒದಗಿಸುವ ಮೂಲಕ ಜನರನೆರವಾಗುವ ನಿಟ್ಟಿನಲ್ಲಿ ಗ್ರಾಮ ಪಂಚಾಯತಿ, ಹೋಬಳಿ ಮಟ್ಟದಲ್ಲಿ ಚುನಾಯಿತ ಪ್ರತಿನಿಧಿಗಳು, ರೈತ, ಕೃಷಿ, ಕಾರ್ಮಿಕ, ಯುವಕ ಸಂಘದ ಪ್ರತಿನಿಧಿಗಳನ್ನೊಳಗೊಂಡ ಬರಗಾಲ ಕುಂದು ಕೊರತೆ ಉಸ್ತುವಾರಿ ಸಮಿತಿ ರಚಿಸಿಬೇಕು.

ಶಾಶ್ವತ ಬರಗಾಲ ಪೀಡಿತ ಪ್ರದೇಶಗಳಾದ ಚಿತ್ರದುರ್ಗ, ಕೋಲಾರ, ಹೈದರಾಬಾದ್‌ ಕರ್ನಾಟಕ ಪ್ರದೇಶದಲ್ಲಿ ಖಾತರಿ ಯೋಜನೆಯ ಮೂಲಕ 365 ದಿನ ಉದ್ಯೋಗ ಕೊಡುವಂತಾಗಬೇಕು ಎಂದು ಒತ್ತಾಯಿಸಿದರು. ರಾಜ್ಯ ಸರ್ಕಾರ 2017-18ನೇ ಸಾಲಿನ ಬಜೆಟ್‌ನಲ್ಲಿ ಬಿಸಿಯೂಟ ತಯಾರಕರು ಹಾಗೂ ಆಶಾ ಕಾರ್ಯಕರ್ತರ ವೇತನ ಹೆಚ್ಚಳದ ಘೋಷಣೆ, ಬಿಸಿಯೂಟ ಕಾರ್ಯಕರ್ತರಿಗೆ ಇಂದಿನ ಅಗತ್ಯಕ್ಕೆ ಅನುಗುಣವಾಗಿ ಮಾಸಿಕ 18 ಸಾವಿರ ವೇತನ ನಿಗದಿ, ಬಿಸಿಯೂಟ ಯೋಜನಾ ನಿಗಮವನ್ನಾಗಿ ಪರಿವರ್ತಿಸುವ ಮೂಲಕ ನಿಜ ಅರ್ಥದಲ್ಲಿ ಮಹಿಳಾ ಸಬಲೀಕರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. 

2010 ರಲ್ಲಿ ರಾಜ್ಯ ಸರ್ಕಾರ ಪ್ರಾರಂಭಿಸಿರುವ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಮಿಷನ್‌ ಕಾರ್ಯಕ್ರಮದಡಿ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರು ಕನಿಷ್ಠ ಮಟ್ಟದ ಜೀವನ ಸಾಗಿಸಲಾಗದ ವೇತನ ಪಡೆಯುತ್ತಿದ್ದಾರೆ. ಎಲ್ಲದಕ್ಕಿಂತಲೂ ಮುಖ್ಯವಾಗಿ ಉದ್ಯೋಗದ  ಭದ್ರತೆಯೇ ಇಲ್ಲ. ಆಶಾ ಕಾರ್ಯಕರ್ತೆಯರನ್ನು ಮೇಲ್ವಿಚಾರಕರಾಗಿ ನೇಮಿಸಿ, 5 ಸಾವಿರ ವೇತನ ನಿಗದಿಪಡಿಸಿರುವುದು ಒಳ್ಳೆಯ ಉದ್ದೇಶ.  ಆದರೆ, ಅದರಲ್ಲಿ ತಾರತಮ್ಯ ಮಾಡುತ್ತಿರುವುದು ಸರಿಯಲ್ಲ.

ಎಲ್ಲರನ್ನೂ ಪೂರ್ಣ ಕಾಲದ ಸಿ ಗ್ರೂಪ್‌ ನೌಕರರೆಂದು ಪರಿಗಣಿಸಿ, 18 ಸಾವಿರ ವೇತನ, ಆರೋಗ್ಯ ವಿಮೆ, ಭವಿಷ್ಯ ನಿಧಿ, ಗ್ರಾಚ್ಯುಯಿಟಿ ಇತರೆ ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿದರು. ಹಿರಿಯ ಕಾರ್ಮಿಕ ಮುಖಂಡ ಎಚ್‌. ಕೆ. ರಾಮಚಂದ್ರಪ್ಪ, ಆನಂದರಾಜ್‌, ಐರಣಿ ಚಂದ್ರು, ಆವರಗೆರೆ ಉಮೇಶ್‌, ಆವರಗೆರೆ ವಾಸು, ಪಾಲವನಹಳ್ಳಿ ಪ್ರಸನ್ನಕುಮಾರ್‌, ಗುಡಿಹಳ್ಳಿ ಹಾಲೇಶ್‌, ಸುನೀತಾ, ಶಕೀಲಾಬಾನು, ಕವಿತಾ, ರುದ್ರಮ್ಮ ಬೆಳಲಗೆರೆ, ಜ್ಯೋತಿಲಕ್ಷ್ಮಿ, ಸರೋಜಾ, ಪ್ರಮೀಳಾ, ಮಹಮ್ಮದ್‌ ಬಾಷಾ, ಟಿ.ಎಸ್‌. ನಾಗರಾಜ್‌, ಲಲಿತಾ ಇತರರು ಇದ್ದರು. 

ಟಾಪ್ ನ್ಯೂಸ್

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

Udupi: ಜಾತಿ ವ್ಯವಸ್ಥೆ ಒಳ್ಳೆಯದು, ನಾನು ಯಾವ ಜಾತಿ ಎಂಬುದೇ ಗೊತ್ತಿರಲಿಲ್ಲ: ಯದುವೀರ್

15-bng

Bengaluru: ತನ್ನ ಖಾಸಗಿ ಕ್ಷಣಗಳಿದ್ದ ಮೊಬೈಲ್‌ ಕದಿಯಲು ಸುಪಾರಿ!

pejavar

Pejawar Swamiji; ಸರಕಾರದ ನಿಯಂತ್ರಣದಿಂದ ದೇವಸ್ಥಾನಗಳು ಮುಕ್ತವಾಗಲಿ

IPL: Foreign players can no longer get crores; This is the new rule

IPL: ವಿದೇಶಿ ಆಟಗಾರರಿಗೆ ಇನ್ನು ಕೋಟಿ ಕೋಟಿ ಹಣ ಪಡೆಯಲು ಸಾಧ್ಯವಿಲ್ಲ; ಹೀಗಿದೆ ಹೊಸ ನಿಯಮ

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

SLvsNZ: ಲಂಕಾ ಸ್ಪಿನ್‌ ಹೊಡೆತಕ್ಕೆ ಗಾಲೆಯಲ್ಲಿ ಮುಳುಗಿದ‌ ಕಿವೀಸ್ ಗೆ ಸರಣಿ ಸೋಲು

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere; Conspiracy to stop Ganeshotsava is going on: Yatnal

Davanagere; ಗಣೇಶೋತ್ಸವ ನಿಲ್ಲಿಸುವ ಷಡ್ಯಂತ್ರ, ಪಿತೂರಿ ನಡೆಯುತ್ತಿದೆ: ಯತ್ನಾಳ್‌ ಆರೋಪ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

ಸಿಎಂ ರಾಜೀನಾಮೆ ಕೊಡಲ್ಲ, ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್. ಮಲ್ಲಿಕಾರ್ಜುನ್

Davanagere; ಸಿಎಂ ರಾಜೀನಾಮೆ ಕೊಡಲ್ಲ,ಕಾನೂನು ಹೋರಾಟ ಮಾಡುತ್ತಾರೆ: ಎಸ್.ಎಸ್.ಮಲ್ಲಿಕಾರ್ಜುನ್

Davanagere City Corporation: new Mayor-Deputy Mayor elected

Davanagere City Corporation: ನೂತನ ಮೇಯರ್-ಉಪ ಮೇಯರ್‌ ಆಯ್ಕೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mysore

Mysuru ಸಾಂಸ್ಕೃತಿಕ ನಗರಿಯಲ್ಲಿ ರೇವ್‌ ಪಾರ್ಟಿ: ಪೊಲೀಸ್‌ ದಾಳಿ, 50ಕ್ಕೂ ಹೆಚ್ಚು ಮಂದಿ ಬಂಧನ

4

Kundapura: ಚರಂಡಿ ದುರಸ್ತಿಗಾಗಿ ಕಿತ್ತ ಸ್ಲ್ಯಾಬ್‌ಗಳೂ ಅಳವಡಿಕೆಯಾಗಿಲ್ಲ

Shooting-Film

Coastal Wood; 3 ತಿಂಗಳಲ್ಲಿ 8 ಶೂಟಿಂಗ್‌: ತುಳು ಸಿನೆಮಾರಂಗದಲ್ಲಿ ಕಮಾಲ್‌!

3

Kinnigoli: ಅಂಗಡಿಗಳಿಂದ ಆದಾಯ ಬಂದರೂ ದುರಸ್ತಿ ಇಲ್ಲ

2(1)

Mudbidri: ಚರಂಡಿ ವ್ಯವಸ್ಥೆ ಇಲ್ಲದೆ ಕುಸಿದ ಆವರಣ ಗೋಡೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.