ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಮನವಿ
Team Udayavani, Mar 11, 2017, 1:30 PM IST
ಹುಬ್ಬಳ್ಳಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷದಿಂದ ಶುಕ್ರವಾರ ಪ್ರತಿಭಟನೆ ನಡೆಸಿ ತಹಶೀಲ್ದಾರಗೆ ಮನವಿ ಸಲ್ಲಿಸಲಾಯಿತು. ಕಳೆದ ನಾಲ್ಕು ವರ್ಷಗಳಿಂದ ರಾಜ್ಯದಲ್ಲಿ ಭೀಕರ ಬರಗಾಲ ಆವರಿಸಿದ್ದು, ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ.
ಇದಲ್ಲದೇ ಹಲವಾರು ಸಮಸ್ಯೆಗಳನ್ನು ಅನುಭವಿಸುತ್ತಿದ್ದು 2017-18ನೇ ಸಾಲಿನ ರಾಜ್ಯದ ಮುಂಗಡ ಪತ್ರದಲ್ಲಿ ರೈತರ ಸಾಲಮನ್ನಾ ಮಾಡಬೇಕು, ಅಸಂಘಟಿತ ಕಾರ್ಮಿಕರಿಗೆ ಅಂಗನವಾಡಿ, ಬಿಸಿಯೂಟ ತಯಾರಿಕರು, ಆಶಾ ಕಾರ್ಯಕರ್ತೆಯರು ಇನ್ನಿತರರ ಕ್ಷೇತ್ರಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕನಿಷ್ಠ ವೇತನ 18 ಸಾವಿರ ನಿಗದಿಪಡಿಸಬೇಕು, ಡಾ| ಸರೋಜಿನಿ ಮಹಿಷಿ ವರದಿ ಜಾರಿಯಾಗಬೇಕು.
ಪ್ರೊ| ಎಸ್.ಜಿ. ಸಿದ್ದರಾಮಯ್ಯ ಸಮಿತಿ ವರದಿ ಜಾರಿಯಾಗಬೇಕು, ಕಳಸಾ-ಬಂಡೂರಿ ಸಮಸ್ಯೆ ಪರಿಹಾರಕ್ಕೆ ಮುಂದಾಗಬೇಕು ಎಂಬ ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು.ಬಿ.ಎ. ಮುಧೋಳ, ಎನ್.ಎ. ಖಾಜಿ, ಎ.ಎಸ್. ಪೀರಜಾಧೆ,ರಮೇಶ ಭೋಸಲೆ, ಖಾಸೀಂಸಾಬ ಗೋಡೇನವರ, ಬಷೀರ ಅತ್ತಾರ, ಸಾಜಿದ ಹಾಲಭಾವಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ
Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್ ಲಾಡ್
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Puttur: ಸಜ್ಜಾಗುತ್ತಿದೆ ಆನೆಮಜಲು ಕೋರ್ಟ್ ಸಂಕೀರ್ಣ
Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ
Development: ಭಾರತದ ಅಭಿವೃದ್ಧಿಯಲ್ಲಿ ಯುವ ಶಕ್ತಿಯ ಪ್ರಾಮುಖ್ಯತೆ
Actor Arrested: ಸ್ಯಾಂಡಲ್‌ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ
ಹರಗಾಪುರ ಕೇಸ್ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.