ಪಂಚಪೀಠಗಳಿಂದ ಮಾನವ ಧರ್ಮ ಉದ್ಧಾರ


Team Udayavani, Mar 11, 2017, 2:53 PM IST

gul2.jpg

ಕಲಬುರಗಿ: ದೇಶದಲ್ಲಿ ಸ್ಥಾಪಿತಗೊಂಡಿರುವ ಪಂಚಪೀಠಗಳು ಮಾನವ ಧರ್ಮ ಕಲ್ಯಾಣಕ್ಕಾಗಿಯೇ ಇದ್ದು, ಅವುಗಳಿಂದ ಧರ್ಮ ಹಾಗೂ ಜೀವನ ಶುದ್ಧಿ ಕಾರ್ಯ ನಿರಂತರವಾಗಿ ನಡೆಯುತ್ತಿದೆ ಎಂದು ಉಜ್ಜಯಿನಿ ಪೀಠದ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯರು ಆಶೀರ್ವಚನ ನೀಡಿದರು. 

ಶುಕ್ರವಾರ ಚಿತ್ತಾಪುರ ತಾಲೂಕಿನ ರೇವಗ್ಗಿ ಗ್ರಾಮದ ರೇವಣಸಿದ್ದೇಶ್ವರ ಗುಡ್ಡದ ದೇಗುಲದಲ್ಲಿ ಹಮ್ಮಿಕೊಂಡಿದ್ದ ವಿವಿಧ ಧಾರ್ಮಿಕ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡುತ್ತಿದ್ದರು. ಪಂಚಪೀಠಗಳು ಯಾವುದೇ ಜಾತಿ ಮತ್ತು ಧರ್ಮಕ್ಕೆ ಸೀಮಿತವಾಗಿಲ್ಲ. ಜಗತ್ತಿನ ಮಾನವ ಧರ್ಮ ಉದ್ಧಾರಕ್ಕಾಗಿ ಅವು ಶ್ರಮಿಸುತ್ತಿವೆ.

ಇದನ್ನು ಭಕ್ತರು ತಿಳಿದು ನಡೆಯುವಂತಾಗಬೇಕು ಎಂದರು. ಜಗತ್ತಿನ ದೃಷ್ಟಿಯಲ್ಲಿ ಭಾರತ ತುಂಬಾ ಧಾರ್ಮಿಕವಾಗಿ ಶ್ರದ್ಧೆಯಿಂದ ಇದೆ. ಇಲ್ಲಿ ಸಾವಿರಾರು ದೇವಾಲಯಗಳಿವೆ. ಸಣ್ಣ ಸಣ್ಣ ಗ್ರಾಮದಲ್ಲೂ ದೇಗುಲಗಳಿವೆ. ಪಾಶ್ಚಿಮಾತ್ಯ ದೇಶಗಳಲ್ಲಿ ಜನರು ದೇವರಿಗಿಂತ ಹೆಚ್ಚಾಗಿ ದೇಹವನ್ನು ಪ್ರೀತಿಸುತ್ತಾರೆ.

ಆದರೆ ನಮ್ಮ ಜನರು ದೇಹವನ್ನು ದಂಡಿಸಿ ದೇವರನ್ನು ಭಕ್ತಿಯಿಂದ ಪೂಜಿಸುತ್ತಾರೆ. ದೈವ ಮತ್ತು ಭಕ್ತಿ ಪ್ರಧಾನವಾದ ದೇಶ ನಮ್ಮದಾಗಿದೆ ಎಂದರು. ಜಗತ್ತಿನ ಎಲ್ಲಾ ದೇಶದ ದೇವರುಗಳನ್ನು ಒಂದು ತಕ್ಕಡಿಯಲ್ಲಿ ಹಾಗೂ ಭಾರತ ದೇಶದ ದೇವರನ್ನು ಒಂದು ತಕ್ಕಡಿಯಲ್ಲಿ ತೂಗಿದರೆ ಭಾರತದ ದೇವರುಗಳದ್ದೇ ಮೇಲುಗೈ ಆಗುತ್ತದೆ.

ಇಂತಹ ಧಾರ್ಮಿಕ ಮತ್ತು ಸಾಂಸ್ಕೃತಿಕ ಕೇಂದ್ರ ನಮ್ಮ ಭಾರತ ಎಂದರು. ಎಲ್ಲಿಯವರೆಗೆ ಜನ ಹೆತ್ತ ತಂದೆ- ತಾಯಿ, ನೆಲ-ಜಲ, ಭಾಷೆ-ಧರ್ಮಗಳನ್ನು ಪೂಜಿಸುತ್ತಾರೆಯೋ ಅಲ್ಲಿಯವರೆಗೆ ನಮ್ಮ ದೇಶ ಅಜರಾಮರವಾಗಿರುತ್ತದೆ ಎಂದು ಹೇಳಿದರು. ಚಿಂಚೋಳಿ ಶಾಸಕ ಡಾ| ಉಮೇಶ ಜಾಧವ್‌ ಮಾತನಾಡಿದರು. 

ಸೇಡಂ ಸಹಾಯಕ ಆಯುಕ್ತ ಭೀಮಾಶಂಕರ ತೆಗ್ಗಳ್ಳಿ ದಂಪತಿ ಮತ್ತು ತಾಯಿ ಮಕ್ಕಳನ್ನು ಉಜ್ಜಯನಿ ಶ್ರೀಗಳು ಸನ್ಮಾನಿಸಿದರು. ಇದೇ ವೇಳೆ ಭೀಮಾಶಂಕರ ಅವರಿಗೆ ಕಾಯಕಯೋಗಿ, ರೇವಣಸಿದ್ದ ಸಿರಿ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು.

ಸಚಿವರಾದ ರುದ್ರಪ್ಪ ಲಮಾಣಿ, ಡಾ| ಶರಣಪ್ರಕಾಶ ಪಾಟೀಲ ಹಾಗೂ ಜಿಲ್ಲೆಯ ಎಲ್ಲಾ ಹರ ಗುರು ಚರ ಮೂರ್ತಿಗಳು, ತೊಗರಿ ಮಂಡಳಿ ಅಧ್ಯಕ್ಷ ಭಾಗಣ್ಣಗೌಡ ಸಂಕನೂರು, ತಿಪ್ಪಣ್ಣಪ್ಪ ಕಮಕನೂರು, ಜಗದೇವ ಗುತ್ತೇದಾರ, ರೇವಣಸಿದ್ದಪ್ಪ ಮಾಸ್ಟರ್‌, ರೇವಣಸಿದ್ದಪ್ಪ ಸಾತನೂರು, ಸಿದ್ದು ಬಾನರ್‌ ಹಾಗೂ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

5-ullala

Kinya: ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿ ಬಂಧನ

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

3-raj-b-shetty

Kannada: ಬೆಳೆ ಕನ್ನಡ : ಸರಣಿ-1 ಕನ್ನಡ ಚಿತ್ರರಂಗ; ಬದಲಾದ ಬದುಕೇ ಸಿನೆಮಾ ಭಾಷೆಗೂ ಕುತ್ತು

9

Kannada Rajyotsava: ಮುಖ್ಯಮಂತ್ರಿಗಳು ಇವ ನಮ್ಮವ ಎಂದಿದ್ದರು!

Kharge–Siddu

Unity lesson: ರಾಜ್ಯ ಸರ್ಕಾರ ಫೇಲಾಗ್ಬಾರ್ದು, ಒಗ್ಗಟ್ಟಾಗಿರಿ: ಎಐಸಿಸಿ ಅಧ್ಯಕ್ಷ ಖರ್ಗೆ ಪಾಠ

Waqf

Waqf Property: ಉತ್ತರ ಕರ್ನಾಟಕದ ಆರು ಜಿಲ್ಲೆಗಳ ಮುಸ್ಲಿಮರಿಗೂ ವಕ್ಫ್ ನೋಟಿಸ್‌ ಬಿಸಿ!

Katapady-kambala

New Policy: ಜಾನಪದ ಕ್ರೀಡೆ ಕಂಬಳಕ್ಕೆ ಅಂತಿಮ ನಿಯಮಾವಳಿ ಸಿದ್ಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Priyank–Kharge

Waqf Notice Issue: ಬಿಜೆಪಿ- ಕಾಂಗ್ರೆಸ್‌ ನಾಯಕರಿಂದ ರಾಜಕೀಯ ವಾಕ್ಸಮರ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ

3

Chittapur: ತಾಯಿಯನ್ನೇ ಕೊ*ಲೆಗೈದ ಮಗ: ಆರೋಪಿಯ ಬಂಧನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

5-ullala

Kinya: ಬಾಡಿಗೆ ಮನೆಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಜೋಡಿ ಬಂಧನ

4-editorial

Editorial: ಸುವರ್ಣ ಕರ್ನಾಟಕ: ವಿಕಾಸಕ್ಕೆ ಕಾರ್ಯಸೂಚಿ ಅಗತ್ಯ

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

3-raj-b-shetty

Kannada: ಬೆಳೆ ಕನ್ನಡ : ಸರಣಿ-1 ಕನ್ನಡ ಚಿತ್ರರಂಗ; ಬದಲಾದ ಬದುಕೇ ಸಿನೆಮಾ ಭಾಷೆಗೂ ಕುತ್ತು

9

New Delhi: ಹುಸಿ ಬಾಂಬ್‌ ಕರೆ ಪತ್ತೆಗೆ ಇಂಟರ್‌ಪೋಲ್‌ ಮೊರೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.