ಭಾವನ ಕೊಂದಿದ್ದ ಭಾವಮೈದುನ ಸೆರೆ
Team Udayavani, Mar 12, 2017, 11:34 AM IST
ಬೆಂಗಳೂರು: ನಗರದಲ್ಲಿ ಇತ್ತೀಚೆಗಷ್ಟೇ ಭಾವನನ್ನೇ ಕೊಂದಿದ್ದ ಆರೋಪಿ ಚಿಕ್ಕದೇವಸಂದ್ರದ ನಿವಾಸಿ ರಾಜಕುಮಾರ್ (35) ಎಂಬಾತನನ್ನು ಕೆ.ಆರ್ ಪುರಂ ಠಾಣೆ ಪೊಲೀಸರು ಬಂಧಿಸಿದ್ದಾರೆ. ತನ್ನ ಅಕ್ಕನ ಸಾವಿಗೆ ಭಾವ ಚೆಲುವರಾಯನೇ ಕಾರಣ ಎಂದು ರಾಜಕುಮಾರ್ ಹಗೆ ಸಾಧಿಸುತ್ತಿದ್ದ.
ಮಾರ್ಚ್ 7ರಂದು ಮಾತನಾಡುವ ಸಲುವಾಗಿ ತನ್ನ ಭಾವನನ್ನು ಮನೆಗೆ ಕರೆಸಿಕೊಂಡಿದ್ದ ರಾಜಕುಮಾರ್, ಚಾಕುವಿನಿಂದ ಇರಿದು ಕೊಲೆ ಮಾಡಿದ್ದ. ಬಳಿಕ ಕೋಲಾರದ ಸ್ನೇಹಿತರೊಬ್ಬರ ಮನೆಯಲ್ಲಿ ತಲೆ ಮರೆಸಿಕೊಂಡಿದ್ದ. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ರಾಜಕುಮಾರ್‌ನನ್ನು ಬಂಧಿಸಿದ್ದಾರೆ. ಆರೋಪಿ ತನ್ನ ಕೃತ್ಯದ ಬಗ್ಗೆ ತಪ್ಪೊಪ್ಪಿಕೊಂಡಿದ್ದು, ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.
ಕೊಲೆಯಾದ ಚೆಲುವರಾಯ ಕಳೆದ 10 ವರ್ಷಗಳ ಹಿಂದೆ ರಾಜ್‌ಕುಮಾರ್ ಅಕ್ಕ ಮಂಜುಳಾ ಎಂಬಾಕೆಯನ್ನು ವಿವಾಹವಾಗಿದ್ದ. ಮದುವೆಯಾದ ಕೆಲವು ವರ್ಷದ ಬಳಿಕ ಕೌಟುಂಬಿಕ ಕಲಹದಿಂದ ಬೇಸತ್ತು ಮಂಜುಳಾ ಆತ್ಮಹತ್ಯೆ ಮಾಡಿಕೊಂಡಿದ್ದಳು. ಆದರೆ, ಚೆಲುವರಾಯನೇ ತನ್ನ ಸಹೋದರಿ ಯನ್ನು ಕೊಲೆ ಮಾಡಿದ್ದಾನೆ ಎಂದು ರಾಜಕುಮಾರ್ ಭಾವಿಸಿದ್ದ. ಅಲ್ಲದೇ, ಆಕೆಯ ಪೋಷಕರು ಪೊಲೀಸರಿಗೆ ಈ ಬಗ್ಗೆ ದೂರು ನೀಡಿದ್ದರು.
ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಚೆಲುವರಾಯ ಎರಡು ವರ್ಷ ಜೈಲು ಶಿಕ್ಷೆ ಅನುಭವಿಸಿ ಬಿಡುಗಡೆಯಾಗಿದ್ದ. ಬಳಿಕ ಬೇರೊಂದು ಮದುವೆ ಮಾಡಿಕೊಂಡಿದ್ದ. ಇದೇ ವಿಚಾರಕ್ಕೆ ರಾಜ್‌ಕುಮಾರ್ ಚೆಲುವರಾಯ ಜತೆ ಹಲವು ಬಾರಿ ಜಗಳವಾಡಿದ್ದ. ಮಾರ್ಚ್ 7ರಂದು ಮಾತುಕತೆಗಾಗಿ ಚಿಕ್ಕದೇವಸಂದ್ರದ ಮನೆಗೆ ಕರೆಸಿಕೊಂಡಿದ್ದ. ಆಗ ಇಬ್ಬರ ಮಧ್ಯೆ ಜಗಳವಾಗಿ ಅದು ವಿಕೋಪಕ್ಕೆ ಹೋಗಿ ರಾಜ್‌ಕುಮಾರ್, ಚೆಲುವರಾಯನನ್ನು ಚಾಕುವಿನಿಂದ ಇರಿದು ಕೊಲೆಗೈದು ಪರಾರಿಯಾಗಿದ್ದ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Desi Swara: ಮುದ್ದಣ್ಣನ ಶ್ರೀ ರಾಮಾಶ್ವಮೇಧಂ ಪುಸ್ತಕ ಸಮರ್ಪಣೆ
ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
Bengaluru: ಕಬ್ಬನ್ ಪಾರ್ಕ್ನಲ್ಲಿ ಪುಷ್ಪ ಪ್ರದರ್ಶನ
S.Africa: ಫಿಕ್ಸಿಂಗ್ ಕೇಸ್ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್ 1 ಬೌಲರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.