ನೀರು ಹುಡುಕಿಕೊಂಡು ಬಂದ ಜಿಂಕೆ ವಾಹನ ಹಾಯ್ದು ಸಾವು
Team Udayavani, Mar 12, 2017, 1:05 PM IST
ಕಲಘಟಗಿ: ದಾಹ ತೀರಿಸಿಕೊಳ್ಳಲೆಂದು ನೀರು ಹುಡುಕಿಕೊಂಡು ಬಂದ ಜಿಂಕೆಯೊಂದು ರಸ್ತೆ ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಫಲಿಸದೇ ಮೃತಪಟ್ಟ ಘಟನೆ ಶನಿವಾರ ಜರುಗಿದೆ. ಸಮೀಪದ ಮಂಗೇಶ ಕೆರೆಯಹತ್ತಿರ ರಸ್ತೆ ದಾಟುತ್ತಿದ್ದಾಗ ಜಿಂಕೆಗೆ ಅಪರಿಚಿತ ವಾಹನ ಹಾಯ್ದು ಸ್ಥಳದಲ್ಲೇ ಬಿದ್ದಿತ್ತು.
ಜಿಂಕೆಯ ಎರಡೂ ಕಾಲುಗಳಿಗೆ ಬಲವಾದ ಪೆಟ್ಟು ಬಿದ್ದು ತೀವ್ರ ರಕ್ತಸ್ರಾವವಾಗುತ್ತಿತ್ತು. ರಾತ್ರಿ ಕೆಲಸ ಮುಗಿಸಿ ಹೋಗುತ್ತಿದ್ದ ಅರಣ್ಯರಕ್ಷಕರು ಜಿಂಕೆಯನ್ನು ಕಂಡು ತಕ್ಷಣ ಟಾಟಾ ಏಸ್ ವಾಹನದಲ್ಲಿ ಪಟ್ಟಣದ ವಲಯ ಅರಣ್ಯಾಧಿಕಾರಿಗಳ ಕಾರ್ಯಾಲಯಕ್ಕೆ ಸಾಗಿಸಿದರು. ಪಶು ವೈದ್ಯಾಧಿಕಾರಿಗಳು ಮತ್ತುಸಿಬ್ಬಂದಿ ಆರೈಕೆ ಮಾಡಿದರೂ ಚಿಕಿತ್ಸೆ ಫಲಿಸದೇ ಜಿಂಕೆ ಮೃತಪಟ್ಟಿತು. ನಂತರ ಅರಣ್ಯ ಇಲಾಖೆ ಸಿಬ್ಬಂದಿ ಮಂಗೇಶ ಕೆರೆಯ ಸನಿಹದಲ್ಲಿ ಕೊಂಡೊಯ್ದು ಅಂತ್ಯಕ್ರಿಯೆ ನಡೆಸಿದರು.
*
ಈಗಾಗಲೇ ಕಾಡಿನಲ್ಲಿ ನೀರಿಲ್ಲದಿರುವುದನ್ನು ಮನಗಂಡ ಅರಣ್ಯ ಇಲಾಖೆ ಸಿಬ್ಬಂದಿ ಹಸರಂಬಿ ಶಾಖೆಯ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಅರಣ್ಯ ವನಪಾಲಕ ಶಶಿಧರ ತಡಕೋಡ ಮುಂದಾಳತ್ವದಲ್ಲಿ 3-4 ಕಡೆ ನೀರಿನ ಹೊಂಡಗಳನ್ನು ನಿರ್ಮಿಸಲಾಗಿದೆ.
ಅಂತೆಯೇ ಉಪವಲಯ ಅರಣ್ಯಾಧಿಕಾರಿ ಮುರಗೆಪ್ಪ ಇಲಾಲ ಮಾರ್ಗದರ್ಶನದಲ್ಲಿ ತುಮ್ರಿಕೊಪ್ಪ ಅರಣ್ಯ ಪ್ರದೇಶದಲ್ಲೂ ಹೊಂಡಗಳನ್ನು ನಿರ್ಮಿಸಲಾಗಿದೆ. ಈಹೊಂಡಗಳಿಗೆ ಟ್ಯಾಂಕರ್ ಮೂಲಕ ನೀರು ತುಂಬಿಸಲಾಗುತ್ತಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹೊಂಡಗಳನ್ನು ತಮ್ಮ ಸ್ವಂತ ಖರ್ಚಿನಲ್ಲೇ ಮಾಡಿರುವುದು ಶ್ಲಾಘನೀಯ. ಹೀಗಿದ್ದಾಗ್ಯೂ ಅನೇಕ ಭಾಗಗಳಲ್ಲಿ ನೀರಿಲ್ಲದ ಕಾರಣ ಕಾಡು ಪ್ರಾಣಿಗಳು ನಾಡಿನತ್ತ ಮುಖ ಮಾಡಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Hubli: ತೀವ್ರತೆ ಪಡೆದ ಬಂದ್; ಬಸ್-ಆಟೋ ಇಲ್ಲದೆ ಪರದಾಡಿದ ಜನತೆ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
MUST WATCH
ಹೊಸ ಸೇರ್ಪಡೆ
Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ
Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
Uppinangady: ನೇಜಿಕಾರ್ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.