ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿ ಕಲಿಸುವ ಶಿಕ್ಷಣ ಅಗತ್ಯ
Team Udayavani, Mar 13, 2017, 12:41 PM IST
ಕುಂದಾಪುರ: ಮಕ್ಕಳಲ್ಲಿ ಉತ್ತಮ ಸಂಸ್ಕಾರ ಸಂಸ್ಕೃತಿ ಬೆಳೆಯಬೇಕಾದರೆ ಮನೆ ಹಾಗೂ ಶಾಲೆಗಳಲ್ಲಿ ಹಿಂದೂ ಸಂಸ್ಕೃತಿಯ ಶಿಕ್ಷಣ ನೀಡಬೇಕು. ಸಂಸ್ಕಾರ ಸಂಸ್ಕೃತಿ ನೀಡುವ ಭಾಷೆಯನ್ನು ಬಾಲ್ಯದಲ್ಲಿ ಮಕ್ಕಳಿಗೆ ನೀಡಬೇಕು. ಮಕ್ಕಳನ್ನು ಸತøಜೆಗಳನ್ನಾಗಿ ರೂಪಿಸುವ ಮಹತ್ತರವಾದ ಜವಾಬ್ದಾರಿ ಮಕ್ಕಳ ಪೋಷಕರ ಮೇಲಿದೆ ಎಂದು ಉಡುಪಿಯ ಶ್ರೀ ಅದಮಾರು ಮಠದ ಶ್ರೀ ವಿಶ್ವಪ್ರಿಯ ಸ್ವಾಮೀಜಿ ನುಡಿದರು.
ಅವರು ಗಂಗೊಳ್ಳಿಯ ಶ್ರೀ ವಿಟuಲ ರಖುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದ ಶ್ರೀ ಸುಧೀಂದ್ರ ಕೃಪಾ ಸದನದಲ್ಲಿ ಜರಗಿದ ಗಂಗೊಳ್ಳಿಯ ಸೇವಾ ಸಂಗಮ ನಿವೇದಿತಾ ಶಿಶು ಮಂದಿರದ 30ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.
ಗಂಗೊಳ್ಳಿಯಲ್ಲಿ ಕಳೆದ 30 ವರ್ಷಗಳಿಂದ ಪುಟ್ಟ ಮಕ್ಕಳಿಗೆ ಭಾರತೀಯ ಸಂಸ್ಕೃತಿಯ ಶಿಕ್ಷಣ ನೀಡುತ್ತಿರುವ ಸೇವಾ ಸಂಗಮ ನಿವೇದಿತಾ ಶಿಶು ಮಂದಿರ ಸಮಾಜದ ಅಭಿವೃದ್ಧಿಗೆ ಶ್ರಮಿಸುತ್ತಿರುವುದು ಅಭಿನಂದನೀಯ. ಶಿಶು ಮಂದಿರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕಿಯರ ಪಾತ್ರ ಶ್ಲಾಘನೀಯ ಎಂದರು.
ಎಂ.ಐ.ಟಿ. ಮಣಿಪಾಲದ ಡೀನ್ ಜಿ.ಕೆ. ಪ್ರಭು ಅಧ್ಯಕ್ಷತೆ ವಹಿಸಿದ್ದರು. ಗಂಗೊಳ್ಳಿಯ ಹಿರಿಯ ಉದ್ಯಮಿ ಎಚ್. ಗಣೇಶ್ ಕಾಮತ್ ಶುಭಾಶಂಸನೆ ಮಾಡಿದರು.
ವೇ|ಮೂ| ಜಿ. ನಾರಾಯಣ ಆಚಾರ್ಯ, ಹಿರಿಯ ಉದ್ಯಮಿ ದತ್ತಾನಂದ ಗಂಗೊಳ್ಳಿ, ಎಂ.ಡಿ. ಡೆವಲಪರ್ನ ದಯಾನಂದ ರಾಮ ಪೂಜಾರಿ, ಹಿಂದೂ ಜಾಗರಣ ವೇದಿಕೆಯ ಗಂಗೊಳ್ಳಿ ಘಟಕದ ಅಧ್ಯಕ್ಷ ಜಿ. ಗೋವಿಂದ್ರಾಯ ಶೇರುಗಾರ, ಮತ್ಸೋÂದ್ಯಮಿ ಕಾಂತು ಬಾಬು ಖಾರ್ವಿ, ಡಾ| ಎಸ್.ಎನ್. ಪಡಿಯಾರ್, ಶಿಶು ಮಂದಿರದ ಅಧ್ಯಕ್ಷ ಶ್ರೀನಿವಾಸ ಎಂ. ಮತ್ತಿತರರು ಉಪಸ್ಥಿತರಿದ್ದರು.ಸೇವಾ ಸಂಗಮ ಟ್ರಸ್ಟ್‌ನ ವಿಶ್ವಸ್ತ ಕೇಶವರಾಯ ಪ್ರಭು ಸ್ವಾಗತಿಸಿದರು. ಶಿಶು ಮಂದಿರದ ಸಂಚಾಲಕ ಡಾ| ಕಾಶೀನಾಥ ಪೈ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಿ. ರಾಘವೇಂದ್ರ ಪೈ ಅತಿಥಿಗಳನ್ನು ಪರಿಚಯಿಸಿದರು. ನಾಗರತ್ನಾ ಯು. ಶೇಟ್ ದಾನಿಗಳ ಪಟ್ಟಿ ಮತ್ತು ಉಷಾ ಪಿ. ಮಡಿವಾಳ ಬಹುಮಾನ ವಿಜೇತ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. ಸಾಹಿತಿ ಕೋ. ಶಿವಾನಂದ ಕಾರಂತ ಕಾರ್ಯಕ್ರಮ ನಿರೂಪಿಸಿದರು. ಶಿಶು ಮಂದಿರದ ಕಾರ್ಯದರ್ಶಿ ಸವಿತಾ ಯು. ದೇವಾಡಿಗ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.