ಮೂಲ ಸೌಕರ್ಯಕ್ಕೆ ಸರಕಾರದ ಆದ್ಯತೆ: ಸಚಿವ ಪ್ರಮೋದ್‌


Team Udayavani, Mar 13, 2017, 1:02 PM IST

1103KAR1.jpg

ಕಾರ್ಕಳ: ಅಭಿವೃದ್ದಿ ಕಾರ್ಯದಲ್ಲಿ ರಾಜ್ಯ ಸರಕಾರ ಯಾವುದೇ ತಾರತಮ್ಯ ಮಾಡುತ್ತಿಲ್ಲ ಆರೋಗ್ಯ, ಶಿಕ್ಷಣ, ಕ್ರೀಡೆ ಸಹಿತ ಮೂಲ ಸೌಕರ್ಯಕ್ಕೆ ರಾಜ್ಯ ಸರಕಾರವು ಹೆಚ್ಚಿನ ರೀತಿಯಲ್ಲಿ ಆದ್ಯತೆ ನೀಡುತ್ತಿದೆ. ರಾಜ್ಯದ ಎಲ್ಲ ವಿಧಾನಸಭಾ ಕ್ಷೇತ್ರಗಳನ್ನು ಒಂದೇ ರೀತಿಯಲ್ಲಿ ಗಣನೆಗೆ ತೆಗೆದುಕೊಂಡು ಅನುದಾನ ಬಿಡುಗಡೆಗೊಳಿಸಿ  ಅಭಿ ವೃದ್ಧಿಗೆ ಮುನ್ನುಡಿ ಬರೆಯಬೇಕು ಎನ್ನುವುದು ಸರಕಾರದ ಧ್ಯೇಯ  ಎಂದು ಮೀನುಗಾರಿಕೆ, ಯುವಜನ ಸಶಕ್ತೀಕರಣ ಹಾಗೂ ಕ್ರೀಡಾ ಸಚಿವ ಮತ್ತು ಉಡುಪಿ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರು ಹೇಳಿದ್ದಾರೆ.

ಅವರು ಶನಿವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ಆರೋಗ್ಯ ಪದ್ಧತಿ ಅಭಿವೃದ್ಧಿ ಹಾಗೂ ಸುಧಾರಣಾ ಯೋಜನೆ, ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆ ಆಯೋಜಿಸಿದ 100 ಹಾಸಿಗೆಗಳ ನೂತನ ಕಟ್ಟಡ ಕಾಮಗಾರಿಗಳ ಶಂಕು ಸ್ಥಾಪನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ತಾಲೂಕಿನಲ್ಲಿ ಮಾತ್ರವಲ್ಲದೇ ರಾಜ್ಯದ ಎಲ್ಲೆಡೆ  ಅಭಿವೃದ್ಧಿ ಮಂತ್ರ  ಪಠಿಸಲು  ಸರಕಾರ ಸನ್ನದ್ಧವಾಗಿದೆ. ಮುಖ್ಯ ಮಂತ್ರಿಗಳೂ ಕೂಡ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತಿದ್ದಾರೆ.ಇದೀಗ ಸರಕಾರವು 6 ಕೋಟಿ ರೂ. ಅನುದಾನ ಬಿಡುಗಡೆಗೊಳಿಸಿ ನೂತನ ಆಸ್ಪತ್ರೆಯ ನಿರ್ಮಾಣಕ್ಕೆ ಇದೀಗ ಬದ್ಧವಾಗಿದೆ. ರಾಜಕೀಯ ರಹಿತವಾದ ಅಭಿವೃದ್ಧಿ ಕಾರ್ಯಗಳು ತಾಲೂಕಿನಲ್ಲಿ ನಡೆಯಲಿ. ನಾಗರಿಕನೂ ಕೂಡ ಅದನ್ನೇ ಬಯಸುತ್ತಾನೆ  ಎಂದವರು ಹೇಳಿದರು.

ಕಾರ್ಕಳ ಶಾಸಕ ಸುನಿಲ್‌ ಕುಮಾರ್‌ ಅಧ್ಯಕ್ಷತೆ ವಹಿಸಿ ನಿರ್ಮಾಣಗೊಳ್ಳಲಿರುವ ನೂತನ ಕಟ್ಟಡಕ್ಕೆ ಶುಭ ಹಾರೈಸಿದರು.ಉಡುಪಿ ಜಿ.ಪಂ. ಆರೋಗ್ಯ ಮತ್ತು ಶಿಕ್ಷಣ ಸ್ಥಾಯೀ ಸಮಿತಿ ಅಧ್ಯಕ್ಷ ಉದಯ ಎಸ್‌. ಕೋಟ್ಯಾನ್‌, ತಾ.ಪಂ. ಅಧ್ಯಕ್ಷೆ ಮಾಲಿನಿ ಜೆ. ಶೆಟ್ಟಿ, ಪುರಸಭಾ ಅಧ್ಯಕ್ಷೆ ಅನಿತಾ ಅಂಚನ್‌, ಪುರಸಭಾ ಸ್ಥಾಯೀ ಸಮಿತಿ ಅಧ್ಯಕ್ಷ ಅಕ್ಷಯ್‌ ರಾವ್‌, ಸದಸ್ಯ ಶುಭದ ರಾವ್‌, ಜಿಲ್ಲಾ ಆರೋಗ್ಯಾಧಿ ಕಾರಿ ಡಾ| ರೋಹಿಣಿ, ತಾಲೂಕು ಆರೋಗ್ಯಾಧಿಕಾರಿ ಡಾ| ಕೃಷ್ಣಾನಂದ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.ಡಾ|  ಮಾಲಿನಿ ಬಂಗೇರ ಸ್ವಾಗತಿಸಿ, ಕೃಷ್ಣ ಹೊಸ್ಮಾರು ನಿರೂಪಿಸಿದರು. ಡಾ| ಸಫಾ ವಂದಿಸಿದರು.

ಶಂಕುಸ್ಥಾಪನೆಯ ಮೊದಲೇ 
ಕಟ್ಟಡ ಕಾಮಗಾರಿ: ಆರೋಪ

ಶನಿವಾರ 100 ಹಾಸಿಗೆಗಳ ನೂತನ ಕಟ್ಟಡ ಕಾಮಗಾರಿಗಳ ಶಂಕುಸ್ಥಾಪನ ಸಮಾರಂಭ ಆಯೋಜಿಸಿದ್ದರೂ ಕಟ್ಟಡಗಳ ಪಿಲ್ಲರ್‌ಗಳು ಶಂಕುಸ್ಥಾಪನೆಯ ಮೊದಲೇ ಎದ್ದಿದೆ. ನೆಪ ಮಾತ್ರಕ್ಕೆ ಶಂಕುಸ್ಥಾಪನೆ ಕಾರ್ಯಕ್ರಮವನ್ನು ಹಮ್ಮಿ ಕೊಳ್ಳಲಾಗಿದೆ ಎನ್ನುವ ಆರೋಪ ಕೇಳಿಬರುತ್ತಿದೆ. ಶಂಕುಸ್ಥಾಪನೆ ನಡೆಯುವ ಮೊದಲೇ ಕಟ್ಟಡ ಕಾಮಗಾರಿ ನಡೆಸುವ ಮೂಲಕ ಅಸಾಂಪ್ರಾದಾಯಿಕ ಪದ್ಧತಿಗೆ ಇಲ್ಲಿ ನಾಂದಿ ಹಾಡಲಾಗಿದೆ ಎನ್ನುವುದು ಸ್ಥಳೀಯರ ಆರೋಪ.

ಟಾಪ್ ನ್ಯೂಸ್

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.