ಬಣ್ಣದೋಕುಳಿ ಸಂಭ್ರಮದಲ್ಲಿ ಕೊಲೆ
Team Udayavani, Mar 14, 2017, 12:07 PM IST
ಬೆಂಗಳೂರು: ಹೋಳಿ ಸಂಭ್ರಮದಲ್ಲಿದ್ದ ಸ್ನೇಹಿತರ ನಡುವೆ ನೀರಿನ ವಿಚಾರಕ್ಕೆ ಉಂಟಾದ ಜಗಳ ಕೊನೆಗೆ ಒಬ್ಬನ ಕೊಲೆಯಲ್ಲಿ ಅಂತ್ಯವಾಗಿದೆ. ಘಟನೆ ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಧ್ಯಾನ್‌ಜಿತ್ ಸಿಂಗ್ (23) ಕೊಲೆಯಾದ ದುರ್ದೈವಿ.
ಕೊಲೆಯಾದ ಧ್ಯಾನ್‌ಜಿತ್ ಹಾಗೂ ಆತನ ಸ್ನೇಹಿತರು ಕೋಣನಕುಂಟೆ ಕ್ರಾಸ್ ಸಮೀಪದ ಖಾಲಿ ಜಾಗದಲ್ಲಿ ಶೆಡ್‌ನಲ್ಲಿ ವಾಸಿಸುತ್ತಿದ್ದರು. ಭಾನುವಾರ ಹೋಳಿ ಹಬ್ಬದ ಪ್ರಯುಕ್ತ ಸಂಜೆ 4 ಗಂಟೆ ಸುಮಾರಿಗೆ ಸಾಮೂಹಿಕವಾಗಿ ಬಣ್ಣ ಎರಚಿಕೊಂಡು ಆಟವಾಡಿದ್ದಾರೆ.ಬಳಿಕ ಧ್ಯಾನ್‌ಜಿತ್ ಶೆಡ್‌ಗೆ ತೆರಳಿ ಸ್ನಾನ ಮಾಡುತ್ತಿದ್ದಾಗ ಅನಗತ್ಯವಾಗಿ ನೀರು ಪೋಲು ಮಾಡಿದ್ದಾನೆ.
ಇದನ್ನು ಕಂಡ ಸ್ನೇಹಿತರಾದ ದೀಪಕ್ ಮಹಾಪಾತ್ರ ಮತ್ತು ಸಮರ್ ಎಂಬುವವರು, ನೀರು ಪೋಲು ಮಾಡದಂತೆ ಸೂಚಿಸಿದ್ದಾರೆ. ಇದೇ ವಿಚಾರವಾಗಿ ಮೂವರ ಮಧ್ಯೆ ಜಗಳ ನಡೆದಿದೆ. ಜಗಳ ವಿಕೋಪಕ್ಕೆ ಹೋಗಿ ಅಲ್ಲಿಯೇ ಇದ್ದ ಕಟ್ಟಿಗೆ ತೆಗೆದುಕೊಂಡ ಇಬ್ಬರು , ಧ್ಯಾನ್‌ಜಿತ್‌ಗೆ ಮೇಲೆ ಹಲ್ಲೆ ನಡೆಸಿದ್ದಾರೆ.
ಪರಿಣಾಮ ಧ್ಯಾನ್‌ಜಿತ್‌ತಲೆಗೆ ಪೆಟ್ಟಾಗಿ ಕುಸಿದು ಬಿದ್ದಿದ್ದಾನೆ. ಕೂಡಲೇ ಸ್ಥಳೀಯರು ಆತನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಈ ಸಂಬಂಧ ಇಬ್ಬರು ಆರೋಪಿಗಳು ಹಾಗೂ ಕೆಲ ಯುವಕರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.