ಈ ಬಾರಿಯಾದರೂ ಈಡೇರಿತೇ ನಿರೀಕ್ಷೆ?

Team Udayavani, Mar 14, 2017, 1:30 PM IST

dvg4.jpg

ದಾವಣಗೆರೆ: ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ 2016ರ ಮಾರ್ಚ್‌ 18ರಂದು ಮಂಡಿಸಿದ ಕಳೆದ ಸಾಲಿನ ಬಜೆಟ್‌ನಲ್ಲಿ ದಾವಣಗೆರೆ ಜಿಲ್ಲೆಗೆ ಘೋಷಿಸಿದ್ದ ನಾಲ್ಕು ಯೋಜನೆಯಲ್ಲಿ ಕೆಲವು ಮುಗಿಯುವ ಹಂತಕ್ಕೆ ಬಂದಿದ್ದರೆ, ಇನ್ನು ಕೆಲವು ಅರೆಬರೆ ಸ್ಥಿತಿಯಲ್ಲಿವೆ. ಕೆಲವಕ್ಕಂತೂ ಇನ್ನೂ ಚಾಲನೆಯೇ ದೊರೆತಿಲ್ಲ.  

ಕಳೆದ ಬಜೆಟ್‌ನಲ್ಲಿ ದಾವಣಗೆರೆಯಲ್ಲಿ 30 ಕೋಟಿ ಅನುದಾನದಲ್ಲಿ 50 ಹಾಸಿಗೆ ಸಾಮರ್ಥ್ಯದ ಸಂಯುಕ್ತ ಆಯುಷ್‌ ಆಸ್ಪತ್ರೆ (ಆಯುಷ್‌ ಇಂಟಗ್ರೇಟೆಡ್‌ ಆಸ್ಪತ್ರೆ), ಐಟಿ ಪಾರ್ಕ್‌ ಸ್ಥಾಪನೆ, ತ್ಯಾಜ್ಯ ನೀರು ಸಂಸ್ಕರಣ ಘಟಕ, ಹರಪನಹಳ್ಳಿ ಹಾಗೂ ಹೊನ್ನಾಳಿಯಲ್ಲಿ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯಿಂದ ಕುಡಿಯುವ ನೀರು ಸರಬರಾಜು, ಒಳ ಚರಂಡಿ ಸೌಲಭ್ಯ, ಕೆಆರ್‌ಡಿಸಿಎಲ್‌ನಿಂದ 130 ಕೋಟಿ ಅನುದಾನದ ಹೊನ್ನಾಳಿ- ಸವಳಂಗ ರಸ್ತೆ ಅಭಿವೃದ್ಧಿ ಯೋಜನೆ ಘೋಷಿಸಲಾಗಿತ್ತು. 

ಆಯುಷ್‌ ಇಂಟಗ್ರೇಟೆಡ್‌ ಆಸ್ಪತ್ರೆ (ಸಂಯುಕ್ತ ಆಯುಷ್‌ ಆಸ್ಪತ್ರೆ)ಗೆ ದಾವಣಗೆರೆ ಹೊರ ವಲಯದ ನಾಗನೂರು ಗ್ರಾಮದ ಸರ್ವೇ ನಂಬರ್‌ 117ರಲ್ಲಿ ಒಟ್ಟಾರೆ 1 ಎಕರೆ 38 ಗುಂಟೆ ಜಮೀನು ಮಂಜೂರಾಗಿದೆ. ಕೆಎಸ್‌ಎಸ್‌ಆರ್‌ಡಿಪಿ ನೀಲನಕ್ಷೆ ಸಿದ್ಧಪಡಿಸುತ್ತಿದೆ. ನೀಲನಕ್ಷೆ ಆಯುಷ್‌ ಇಲಾಖೆ ನಿರ್ದೇಶಕರ ಕಚೇರಿಗೆ ಸಲ್ಲಿಸಿದ ನಂತರ ಆಸ್ಪತ್ರೆ ನಿರ್ಮಾಣದ ಪ್ರಕ್ರಿಯೆ ಪ್ರಾರಂಭವಾಗಲಿದೆ ಎನ್ನುತ್ತವೆ ಜಿಲ್ಲಾ ಆಯುಷ್‌ ಇಲಾಖೆ ಮೂಲಗಳು. 

ಆ್ಯಕ್ಸ್‌ಫರ್ಡ್‌ ಸಿಟಿ ಎಂದೇ ಗುರುತಿಸಲ್ಪಡುತ್ತಿರುವ ದಾವಣಗೆರೆಯಲ್ಲಿ ಒಂದು ಸರ್ಕಾರಿ ಒಳಗೊಂಡಂತೆ ಒಟ್ಟಾರೆ 4 ಇಂಜಿನಿಯರಿಂಗ್‌, ಎರಡು ವೈದ್ಯಕೀಯ ಹಾಗೂ ಎರಡು ದಂತ ವೈದ್ಯಕೀಯ ಕಾಲೇಜುಗಳಿವೆ. ದಾವಣಗೆರೆ ಕರ್ನಾಟಕದ ಮಧ್ಯದಲ್ಲಿರುವುದರಿಂದ ಇತರೆ ಜಿಲ್ಲೆಯ ವಿದ್ಯಾರ್ಥಿಗಳಿಗೆ ಪ್ರಮುಖ ಸಂಪರ್ಕ ಕೇಂದ್ರವೂ ಹೌದು.

ಕಳೆದ ಸಾಲಿನ ಬಜೆಟ್‌ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ದಾವಣಗೆರೆಯಲ್ಲಿ ಐಟಿ ಪಾರ್ಕ್‌ ಸ್ಥಾಪನೆ ಬಗ್ಗೆ ಘೋಷಣೆ ಮಾಡಿದಾಗ ಸಹಜವಾಗಿಯೇ ಎಲ್ಲರಲ್ಲೂ ಭಾರೀ ನಿರೀಕ್ಷೆ ಇತ್ತು. ಆದರೆ, ಈವರೆಗೆ ಐಟಿ ಪಾರ್ಕ್‌ ಪ್ರಾರಂಭದ ಲಕ್ಷಣವೇ ಕಾಣುತ್ತಿಲ್ಲ. ಬಜೆಟ್‌ನಲ್ಲಿ ಘೋಷಣೆಯಾಗಿ ಒಂದು ವರ್ಷ ಕಳೆದರೂ ಐಟಿ ಪಾರ್ಕ್‌ ಬಗ್ಗೆ ಸಂಬಂಧಿತ ಎಸ್‌ಟಿಪಿ ಸಂಸ್ಥೆಯ ಜೊತೆಗೆ ಇನ್ನೂ ಮಾತುಕತೆ ನಡೆಯುತ್ತಿದೆ.

ದಾವಣಗೆರೆಯ ಶಿವನಗರದ ಬಳಿ 32 ಕೋಟಿ ವೆಚ್ಚದ ತ್ಯಾಜ್ಯ ನೀರು ಸಂಸ್ಕರಣ ಘಟಕದ ಕಾರ್ಯ ಪ್ರಗತಿಯಲ್ಲಿದೆ. ತ್ಯಾಜ್ಯ ನೀರು ಸಂಸ್ಕರಣ ಘಟಕ ಮುಂದುವರೆದ ಕಾಮಗಾರಿ ರೂಪದಲ್ಲಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಬಹುತೇಕ ಅಂತಿಮ ಹಂತದಲ್ಲಿದೆ.

ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯಿಂದ ಹರಪನಹಳ್ಳಿ ಹಾಗೂ ಹೊನ್ನಾಳಿಯಲ್ಲಿ ಪ್ರಾರಂಭಿಸಿರುವ ಒಳ ಚರಂಡಿ ಕಾಮಗಾರಿ ಅರೆಬರೆಯಾಗಿದೆ. ಹೊನ್ನಾಳಿ ಪಟ್ಟಣದಲ್ಲಿ ಪ್ರಾರಂಭಿಕ ಹಂತದಲ್ಲಿ ಬಿರುಸಿನಿಂದ ನಡೆದ ಕಾಮಗಾರಿ ಬಹುತೇಕ ಸ್ಥಗಿತಗೊಂಡು ತಿಂಗಳುಗಳೇ ಉರುಳಿವೆ. ಕಾಮಗಾರಿ ಮುಂದುವರೆಯುವ ಲಕ್ಷಣಗಳೇ ಇಲ್ಲ. 

ಟಾಪ್ ನ್ಯೂಸ್

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್‌ ಅಮಾನತು

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ

Jasprit-Bumra

ICC World Rankings: ಟೆಸ್ಟ್‌ ಬೌಲಿಂಗ್‌ ರ್‍ಯಾಂಕಿಂಗ್‌ ಬುಮ್ರಾ ಮರಳಿ ನಂ.1

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

Davanagere: ಗೆಳೆಯನನ್ನೇ ಕೊಲೆ ಮಾಡಿದ ಪ್ರಕರಣ… ಆರೋಪಿಗೆ ಜೀವಾವಧಿ ಶಿಕ್ಷೆ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಮೀಸಲಾತಿಗೆ ಒತ್ತಾಯಿಸಿ ಡಿ.10ರಂದು ಸುವರ್ಣ ಸೌಧಕ್ಕೆ ಮುತ್ತಿಗೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Ranchi

Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

ICC Champions Trophy to be completely moved from Pakistan?: Decision will be taken at ICC meeting

ICC ಚಾಂಪಿಯನ್ಸ್‌ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ

2-bus

ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.