ಫಿಕ್ಸಿಂಗ್: ಇರ್ಫಾನ್ ಅಮಾನತು
Team Udayavani, Mar 15, 2017, 10:44 AM IST
ಕರಾಚಿ: ಇತ್ತೀಚೆಗೆ ಪಾಕಿಸ್ಥಾನದಲ್ಲಿ ಮುಕ್ತಾಯಗೊಂಡ ಪಿಎಸ್ಎಲ್ (ಪಾಕಿಸ್ಥಾನ್ ಸೂಪರ್ ಲೀಗ್) ಟಿ-20 ಕೂಟದ ವೇಳೆ ಸ್ಪಾಟ್ ಫಿಕ್ಸಿಂಗ್ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೂಬ್ಬ ಕ್ರಿಕೆಟಿಗ, ವೇಗಿ ಮೊಹಮ್ಮದ್ ಇರ್ಫಾನ್ ಅಮಾನತುಗೊಂಡಿದ್ದಾರೆ. ಆರೋಪ ಸಾಬೀತಾದರೆ ಅವರು ಆಜೀವ ನಿಷೇಧಕ್ಕೆ ಒಳಗಾಗುವ ಭೀತಿಗೆ ಸಿಲುಕಿದ್ದಾರೆ. ಈ ವಿಷಯವನ್ನು ಪಿಸಿಬಿ ಸ್ಪಷ್ಟಪಡಿಸಿದೆ.
ಇದರೊಂದಿಗೆ ಈ ವರ್ಷದ ಪಿಎಸ್ಎಲ್ನಲ್ಲಿ ಸ್ಪಾಟ್ ಫಿಕ್ಸಿಂಗಿಗೆ ಸಂಬಂಧಪಟ್ಟಂತೆ ಪಾಕಿಸ್ಥಾನದ 3ನೇ ಕ್ರಿಕೆಟಿಗ ಅಮಾನತುಗೊಂಡಂತಾಗಿದೆ.
ಬುಕ್ಕಿಯೊಂದಿಗೆ ಸಂಪರ್ಕ
ಪಿಎಸ್ಎಲ್ ವೇಳೆ ಇರ್ಫಾನ್ ಬುಕ್ಕಿಯೊಂದಿಗೆ ಸಂಪರ್ಕ ನಡೆಸಿದ್ದ ಸುಳಿಗೆ ಸಿಲುಕಿದ್ದಾರೆ. ಬುಕ್ಕಿಯೊಬ್ಬನಿಂದ ಇವರಿಗೆ ಆಮಿಷವಿತ್ತು. ಪಂದ್ಯವನ್ನು ಫಿಕ್ಸ್ ಮಾಡುವಂತೆ ಆತ ಸೂಚಿಸಿದ್ದ. ಈ ವಿಷಯ ಗೊತ್ತಿದ್ದರೂ ಇರ್ಫಾನ್ ಪಿಸಿಬಿ ಗಮನಕ್ಕೆ ತಂದಿರಲಿಲ್ಲ. ಇದರಿಂದ ಅಮಾನತಿಗೆ ಒಳಗಾಗಿದ್ದಾರೆ ಎನ್ನಲಾಗಿದೆ.
ಈಗಾಗಲೇ ಇದೇ ಕೂಟದ ಸ್ಪಾಟ್ ಫಿಕ್ಸಿಂಗ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಾಕ್ ಕ್ರಿಕೆಟಿಗರಾದ ಶಾರ್ಜೀಲ್ ಖಾನ್, ಖಲೀದ್ ಲತೀಫ್ ಅವರನ್ನು ಪಿಸಿಬಿ ಅಮಾನತು ಮಾಡಿತ್ತು. ಸದ್ಯ ಆಟಗಾರರು ತಪ್ಪೊಪ್ಪಿಕೊಂಡಿಲ್ಲ, ಒಂದು ವೇಳೆ ಆರೋಪಿಗಳು ಎನ್ನುವುದು ತನಿಖೆಯಿಂದ ರುಜುವಾತುಗೊಂಡರೆ ಆಜೀವ ಕ್ರಿಕೆಟ್ ನಿಷೇಧಕ್ಕೆ ಒಳಗಾಗಲಿದ್ದಾರೆ ಎಂದು ಪಿಸಿಬಿ ಮುಖ್ಯಸ್ಥ ಶಹರ್ಯಾರ್ ಖಾನ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.