ಮೋದಿ, ಯಡಿಯೂರಪ್ಪ ಮುಕ್ತ ಭಾರತ ಗುರಿ
Team Udayavani, Mar 15, 2017, 4:53 PM IST
ಸುರತ್ಕಲ್: ನರೇಂದ್ರ ಮೋದಿ, ಅಮಿತ್ ಶಾ ಅವರಂತಹ ಸಾವಿರ ಮಂದಿ ಬಂದರೂ ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣ ಸಾಧ್ಯವಿಲ್ಲ. ನಾವು ನಿಮ್ಮೊಂದಿಗಿದ್ದೇವೆ ಎಂಬುದನ್ನು ಮತದಾರರು ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ತೋರಿಸಿದ್ದಾರೆ. ಮುಂದಿನ ದಿನಗಳಲ್ಲಿ ಮೋದಿ ಹಾಗೂ ಯಡಿಯೂರಪ್ಪ ಮುಕ್ತ ಆಡಳಿತ ಹೊಂದುವುದು ಕಾಂಗ್ರೆಸ್‌ನ ಗುರಿಯಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ವಿ.ಎಸ್. ಉಗ್ರಪ್ಪ ಹೇಳಿದರು.
ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರ, ಸುರತ್ಕಲ್ ಹಾಗೂ ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಸುರತ್ಕಲ್‌ನಲ್ಲಿ ಮಂಗಳವಾರ ಆಯೋಜಿಸಲಾದ ಕಾಂಗ್ರೆಸ್ ನಡಿಗೆ ಸುರಾಜ್ಯದ ಕಡೆಗೆ ಹಾಗೂ ಜನವೇದನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ತಾರತಮ್ಯ ನೀತಿ
ರಾಜ್ಯದ 160 ತಾಲೂಕುಗಳಲ್ಲಿ ಬರದ ಛಾಯೆ ಆವರಿಸಿದೆ. ಬಿಹಾರಕ್ಕೆ ಲಕ್ಷ ಕೋಟಿ ರೂ. ಘೋಷಿಸಿದ ಮೋದಿ ಅವರು ರಾಜ್ಯಕ್ಕೆ ಕೇವಲ 1,500 ಕೋ.ರೂ. ನೀಡಿ ತಾರತಮ್ಯ ನೀತಿಯನ್ನು ಬಹಿರಂಗಗೊಳಿಸಿದ್ದಾರೆ. ಆದರೂ ರಾಜ್ಯ ಸರಕಾರ ತನ್ನ ಸ್ವ ಸಾಮರ್ಥ್ಯದಿಂದ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಯಶಸ್ವಿಯಾಗಿದೆ ಎಂದರು.
ಕನಸು ನನಸಾಗದು
ರಾಜ್ಯದಲ್ಲಿ ಭ್ರಷ್ಟಾಚಾರದ ಆರೋಪಧಿದಲ್ಲಿ ಜೈಲು ಸೇರಿ ಬಂದ ಬಿ.ಎಸ್. ಯಡಿಯೂರಪ್ಪ ಅವರು ಮತ್ತೆ ಮುಖ್ಯಮಂತ್ರಿ ಆಗುವ ಕನಸು ಕಾಣುತ್ತಿದ್ದಾರೆ. ಜನಪರ ಕಾಳಜಿಯುಳ್ಳ ಸಿದ್ದರಾಮಯ್ಯ ಸರಕಾರದ ವಿರುದ್ಧ ದಾಖಲೆರಹಿತ ಆರೋಪ ಮಾಡುತ್ತಿದ್ದಾರೆ. ಯಡಿಯೂರಪ್ಪ ಕೇವಲ ಒಂದೆರಡು ಕೇಸುಗಳಲ್ಲಿ ಖುಲಾಸೆಗೊಂಡರೂ ಇನ್ನೂ ಹತ್ತಿಪ್ಪತ್ತು ಕೇಸುಗಳು ತನಿಖಾ ಹಂತದಲ್ಲಿವೆ. ಹೀಗಾಗಿ ಯಡಿಯೂರಪ್ಪ ಆಡಳಿತದ ಕನಸು ನನಸಾಗದು. ಸಿದ್ದರಾಮಯ್ಯ ನೇತೃತ್ವದ ಸರಕಾರ ಮತ್ತೆ ಆಡಳಿತಕ್ಕೆ ಬರುವುದು ನಿಶ್ಚಿತ ಎಂದು ಹೇಳಿದರು.
ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅತ್ಯುತ್ತಮ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಶಾಲಾ ಮಕ್ಕಳಿಂದ ಹಿಡಿದು ಹಿರಿಯರ ವರೆಗೆ ಯೋಜನೆ ಜಾರಿಗೊಳಿಸುತ್ತಿದೆ. ರಾಜ್ಯದಲ್ಲಿ ಸೌಹಾರ್ದ ಕಾಪಾಡುವಲ್ಲಿ ಶ್ರಮ ವಹಿಸಿದೆ. ಭ್ರಷ್ಟಾಚಾರ ರಹಿತ ಆಡಳಿತ ನೀಡಿ ಜನರ ವಿಶ್ವಾಸವನ್ನು ಗಳಿಸಿದೆ. ಕಾರ್ಯಕರ್ತರು ಸರಕಾರದ ಸಾಧನೆಯನ್ನು ಜನತೆಗೆ ಪರಿಣಾಮಕಾರಿಯಾಗಿ ಮುಟ್ಟಿಸಿದಾಗ ನಮ್ಮ ಶ್ರಮ ಸಾರ್ಥಕವಾಗುವುದರಲ್ಲಿ ಸಂಶಯವಿಲ್ಲ ಎಂದರು.
ನೈತಿಕ ಬಲ ವೃದ್ಧಿ
ಅಧ್ಯಕ್ಷತೆ ವಹಿಸಿದ್ದ ಶಾಸಕ ಮೊದಿನ್ ಬಾವಾ ಪ್ರಸ್ತಾವನೆಗೈದು, ಪಕ್ಷದ ಬಲವರ್ಧನೆಗೆ ಹಾಗೂ ಕೇಂದ್ರ ಸರಕಾರದ ಜನವಿರೋಧಿ ಕಾರ್ಯಕ್ರಮಗಳನ್ನು ಜನತೆಗೆ ತಲುಪಿಸಲು ಪಕ್ಷ ಈ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ಹಮ್ಮಿಕೊಳ್ಳಲಾಗಿದೆ. ಪಕ್ಷದ ಕಾರ್ಯಕರ್ತರಿಗೆ ಈ ಸಮಾವೇಶದಿಂದ ನೈತಿಕ ಬಲ ಹೆಚ್ಚಲಿದ್ದು ಮುಂದಿನ ಚುನಾವಣೆಗೆ ಪರಿಣಾಮಕಾರಿಯಾಗಿ ನಾವು ತಯಾರಾಗಲಿದ್ದೇವೆ ಎಂದರು.
ಅನಿವಾಸಿ ಭಾರತೀಯ ಸಮಿತಿಯ ಡಾ| ಆರತಿಕೃಷ್ಣ, ಮಹಿಳಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷೆ ಡಾ| ನಾಗಲಕ್ಷ್ಮೀ ಅವರು ವಿಶೇಷ ಉಪನ್ಯಾಸ ನೀಡಿದರು.
ಸಚಿವ ಯು.ಟಿ. ಖಾದರ್, ಮುಖ್ಯ ಸಚೇತಕ ಐವನ್ ಡಿ’ಸೋಜಾ, ಶಾಸಕರಾದ ಅಭಯಚಂದ್ರ ಜೈನ್, ಜೆ.ಆರ್. ಲೋಬೋ, ಮೇಯರ್ ಕವಿತಾ ಸನಿಲ್, ಉಪ ಮೇಯರ್ ರಜನೀಶ್, ಮುಡಾ ಅಧ್ಯಕ್ಷ ಸುರೇಶ್ ಬಲ್ಲಾಳ್, ಗೇರು ಅಭಿವೃದ್ಧಿ ನಿಗಮದ ಖಾದರ್, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಾಜಿ ಶಾಸಕ ವಿಜಯಕುಮಾರ್ ಶೆಟ್ಟಿ , ಅಲ್ಪಸಂಖ್ಯಾಕ ವಿಭಾಗದ ಮುಖಂಡ ಯು.ಕೆ. ಮೋನು, ಉಸ್ತುವಾರಿ ಅಧ್ಯಕ್ಷ ಪುರುಷೋತ್ತಮ ಚಿತ್ರಾಪುರ, ಪೃಥ್ವಿರಾಜ್ ಕೆ., ಜಿಲ್ಲಾ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಶಾಲೆಟ್ ಪಿಂಟೋ, ಮಾಜಿ ಮೇಯರ್ ಹರಿನಾಥ್, ಶಶಿಧರ ಹೆಗ್ಡೆ ಎಂ., ಮುಡಾ ಸದಸ್ಯ ಕೇಶವ ಸನಿಲ್, ಕೋಡಿಜಾಲ್ ಇಬ್ರಾಹಿಂ, ಮಿಥುನ್ ರೈ, ಮಹಮ್ಮದ್ ಆಲಿ, ಮುಖಂಡರಾದ ಸಾಹುಲ್, ಸೀಮಾ ಡಿ’ಸೋಜಾ, ಶಕುಂತಳಾ ಕಾಮತ್, ಗಿರೀಶ್ ಆಳ್ವ, ಗಣೇಶ್ ಪೂಜಾರಿ, ಉತ್ತಮ್ ಆಳ್ವ, ಮಹಮ್ಮದ್ ಅಲಿ ಮತ್ತಿತರರು ವೇದಿಕೆಯಲ್ಲಿದ್ದರು.
ಹುಸೈನ್ ಕಾಟಿಪಳ್ಳ ಮತ್ತು ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಪುರುಷೋತ್ತಮ ಚಿತ್ರಾಪುರ ವಂದಿಸಿದರು.
ನೋಟು ಅಪಮೌಲ್ಯ: ವಿಪಕ್ಷಗಳಿಗೆ ಸಮಸ್ಯೆ
ಪ್ರಧಾನಿ ನರೇಂದ್ರ ಮೋದಿ ಅವರು ಫ್ಯಾಸಿಸ್ಟ್ ಮಾದರಿಯ ಆಡಳಿತ ನಡೆಸುತ್ತಿದ್ದು ಇದು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿದೆ. ಬಿಜೆಪಿ ಸಮಯ ಸಾಧಕತನ ತೋರುತ್ತಿದೆ. ಜನಪರ ಯೋಜನೆ ಜಾರಿ ಮಾಡುತ್ತೇವೆ, ಭ್ರಷ್ಟಾಚಾರದ ಹಣ ಹಿಂದೆ ತರುತ್ತೇವೆ ಎಂದೆಲ್ಲ ವಾಗ್ಧಾನ ಮಾಡಿದ್ದ ಮೋದಿ ಇಂದು ಆಡಿದ ಮಾತನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ. ಪಂಚ ರಾಜ್ಯ ಚುನಾವಣೆಯಲ್ಲಿ ಇತರ ಪಕ್ಷಗಳಿಗೆ ಚುನಾವಣೆ ಎದುರಿಸಲು ಅಸಾಧ್ಯವಾಗುವಂತೆ ಮಾಡಲು ನೋಟು ಅಪಮೌಲ್ಯಗೊಳಿಸಿದ್ದಾರೆ ಎಂದು ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
Winter session: ರಾಜ್ಯದ ಕರಾವಳಿಯ 73.4 ಕಿ.ಮೀ. ಕಡಲ್ಕೊರೆತದಿಂದ ಹಾನಿ: ಸಚಿವ ಸಿಂಗ್
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.