ಅಕ್ರಮ ಮರಳುಗಾರಿಕೆ ಪ್ರದೇಶಕ್ಕೆ ಗಣಿ ಅಧಿಕಾರಿಗಳು ದಾಳಿ: ಮರಳು ವಶ
Team Udayavani, Mar 16, 2017, 2:06 PM IST
ಕುಂದಾಪುರ: ಹಳ್ನಾಡು ಸೇರಿದಂತೆ ತಾಲೂಕಿನ ವಿವಿಧಡೆ ಅಕ್ರಮ ಮರಳುಗಾರಿಕೆ ಪ್ರದೇಶಕ್ಕೆ ಪೊಲೀಸರ ಸಹಕಾರದೊಂದಿಗೆ ದಾಳಿ ನಡೆಸಿದ ಗಣಿ ಇಲಾಖೆಯ ಅಧಿಕಾರಿಗಳು, ಕುಂದಾಪುರ ತಹಶೀಲ್ದಾರರು ಈ ಪ್ರದೇಶಗಳಲ್ಲಿನ ಮರಳನ್ನು ವಶಪಡಿಸಿಕೊಂಡಿದ್ದಾರೆ.
ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿ ಡಾ| ಮಹದೇಶ್ವರ, ತಹಶೀಲ್ದಾರ್ ಜಿ.ಎಂ. ಬೋರ್ಕರ್ ಅವರು ಕುಂದಾಪುರ ಪೊಲೀಸರ ಸಹ ಕಾರದಲ್ಲಿ ದಾಳಿ ನಡೆಸಿ ಮರಳುಗಾರಿಕೆ ನಡೆಸುತ್ತಿದ್ದ ಪ್ರದೇಶದಲ್ಲಿ ಶೇಖರಿಸಿ ಇಟ್ಟ ಮರಳನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂದರ್ಭದಲ್ಲಿ ಮರಳುಗಾರಿಕೆ ನಡೆಸುತ್ತಿದ್ದವರಿಗೆ ಸೂಚನೆ ನೀಡಿದ ಅಧಿಕಾರಿಗಳು ಈ ಪ್ರದೇಶದಲ್ಲಿ ಅಧಿಕೃತವಾಗಿ ಮರಳುಗಾರಿಕೆ ನಡೆಸಲು ಟೆಂಡರ್ ಅಗಿದ್ದು ಅವರಿಗೆ ಅವಕಾಶ ಮಾಡಿಕೊಡಬೇಕು. ಇನ್ನು ಮುಂದೆ ಅಕ್ರಮವಾಗಿ ಮರಳುಗಾರಿಕೆ ನಡೆಸಿದಲ್ಲಿ ಶಿಸ್ತಿನ ಕ್ರಮ ತೆಗೆದುಕೊಳ್ಳಲಾಗುವುದು ಎನ್ನುವ ಎಚ್ಚರಿಕೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.