ಎಂ ಎಸ್ ಧೋನಿ ಹಸ್ತಾಕ್ಷರಕ್ಕಾಗಿ ಕ್ರೀಡಾಂಗಣಕ್ಕೇ ನುಗ್ಗಿದ ಅಭಿಮಾನಿ !
Team Udayavani, Mar 17, 2017, 10:25 AM IST
ಹೊಸದಿಲ್ಲಿ: ಭಾರತದಲ್ಲಿ ಕ್ರಿಕೆಟ್ ಆಟಗಾರರನ್ನು ಅಭಿಮಾನಿಗಳು ದೇವರಂತೆ ಆರಾಧಿಸುತ್ತಾರೆ. ಕ್ರಿಕೆಟ್ ಆಟಗಾರರು ಎಲ್ಲೇ ಹೋದರೂ ಹಸ್ತಾಕ್ಷರಕ್ಕೆ ಮುಗಿಬೀಳುತ್ತಾರೆ. ಇಲ್ಲೊಬ್ಬ ಅಭಿಮಾನಿ ವಿಜಯ್ ಹಜಾರೆ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯ ನಡೆಯು ತ್ತಿದ್ದಾಗಲೇ ಭದ್ರತಾ ಪಡೆಯ ಕಣ್ತಪ್ಪಿಸಿ ಕ್ರೀಡಾಂಗಣದೊಳಕ್ಕೆ ನುಗ್ಗಿದ್ದಾನೆ. ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಆಟೋಗ್ರಾಫ್ ಕೇಳಿ ಪಡೆದಿದ್ದಾನೆ. ಬಳಿಕ ಧೋನಿ ಕಾಲಿಗೆರಗಿದ್ದಾನೆ!
ಬುಧವಾರ ವಿಜಯ್ ಹಜಾರೆ ಟ್ರೋಫಿ ಕ್ವಾರ್ಟರ್ ಫೈನಲ್ ಪಂದ್ಯ ಝಾರ್ಖಂಡ್ ಮತ್ತು ವಿದರ್ಭ ನಡುವೆ ನಡೆಯುತ್ತಿತ್ತು. ಚೇಸಿಂಗ್ ವೇಳೆ ಧೋನಿ ಬ್ಯಾಟಿಂಗ್ ಮಾಡುತ್ತಿದ್ದರು. ಇಶಾಂಕ್ ಜಗ್ಗಿ ಸ್ಟ್ರೈಕ್ನಲ್ಲಿದ್ದರೆ, ಧೋನಿ ನಾನ್ ಸ್ಟ್ರೈಕ್ನಲ್ಲಿದ್ದರು. ಈ ಸಮಯದಲ್ಲಿ ಧೋನಿ ಅಭಿಮಾನಿಯೊಬ್ಬ ಅಂಗಳಕ್ಕೆ ಧುಮುಕಿ ಕ್ರೀಸ್ನತ್ತ ಓಡಿ ಬಂದಿದ್ದಾನೆ. ಬಂದವನೇ ಧೋನಿ ಬಳಿ ಹಸ್ತಾಕ್ಷರ ಪಡೆದಿದ್ದಾನೆ. ಅಭಿಮಾನಿ ನೀಡಿದ ಬಿಳಿ ಕಾಗದಕ್ಕೆ ಧೋನಿ ಸಮಾಧಾನದಿಂದಲೇ ಸಹಿ ಹಾಕಿದ್ದಾರೆ. ಬಳಿಕ ಧೋನಿ ಕಾಲಿಗೆ ಬಿದ್ದಿದ್ದಾನೆ!
ಈ ಹಿಂದೆ ಸಚಿನ್ ತೆಂಡುಲ್ಕರ್ 2013ರಲ್ಲಿ ರಣಜಿ ಪಂದ್ಯದಲ್ಲಿ ಸರ್ವಿಸಸ್ ವಿರುದ್ಧ ಆಡುತ್ತಿದ್ದಾಗ ಇಂಥದೇ ಘಟನೆ ನಡೆದಿತ್ತು. ಅಭಿಮಾನಿಯೊಬ್ಬ ಓಡಿ ಬಂದು ಸಚಿನ್ ಕಾಲಿಗೆರಗಿದ್ದನ್ನು ಇಲ್ಲಿ ಸ್ಮರಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pro Kabaddi: ಯೋಧಾಸ್ಗೆ ತಲೈವಾಸ್ ಆಘಾತ
Hockey: ಇಂದಿನಿಂದ ಜೂ. ಏಷ್ಯಾ ಕಪ್ ಹಾಕಿ; ಭಾರತಕ್ಕೆ ಥಾಯ್ಲೆಂಡ್ ಎದುರಾಳಿ
IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Mohammed Siraj: ಬಿಟೌನ್ನ ಈ ಹಾಟ್ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್ ಡೇಟಿಂಗ್?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Belagavi ಅಧಿವೇಶನದಲ್ಲಿ ಸರಕಾರದ ವಿರುದ್ಧ ಬಿಜೆಪಿ ಚಾರ್ಜ್ಶೀಟ್
Constitution Day: ಜನಾಶೀರ್ವಾದ ಇರುವ ತನಕ ನಾನು ಜಗ್ಗುವುದಿಲ್ಲ: ಸಿಎಂ ಸಿದ್ದರಾಮಯ್ಯ
Karnataka Govt.,: ಸಂಪುಟ ಸರ್ಜರಿ ಸನ್ನಿಹಿತ: ಡಿಸಿಎಂ ಡಿಕೆಶಿ ಸುಳಿವು!
ರಾಹುಲ್ ಬ್ರಿಟನ್ ಪೌರತ್ವದ ಬಗ್ಗೆ ಪರಿಶೀಲಿಸುತ್ತಿದ್ದೇವೆ: ಹೈಕೋರ್ಟ್ಗೆ ಸರ್ಕಾರ!
Hard Disk: ಬಿಟ್ಕಾಯಿನ್ ಇದ್ದ ಹಾಡ್ಡಿಸ್ಕ್ ಎಸೆದ ಪ್ರೇಯಸಿ, ಪರದಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.