ರಾಜ್ಯದ ಅನುಮೋದನೆ ದೊರೆತ ಕೂಡಲೇ ಕಾರ್ಯಾರಂಭ: ರಾಧಾಕೃಷ್ಣ
Team Udayavani, Mar 17, 2017, 12:35 PM IST
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್ವೇ ವಿಸ್ತರಣೆಗೆ ಸಂಬಂಧಿಸಿದ ಪ್ರಸ್ತಾವನೆಯನ್ನು ಜಿಲ್ಲಾಡಳಿತದ ಮೂಲಕ ಈಗಾಗಲೇ ಸರಕಾರಕ್ಕೆ ಕಳುಹಿಸಲಾಗಿದ್ದು, ರಾಜ್ಯ ಸರಕಾರದಿಂದ ಅನುಮೋದನೆ ದೊರೆತ ಕೂಡಲೇ ಅಭಿವೃದ್ಧಿ ಕಾರ್ಯಗಳು ನಡೆಯಲಿವೆ.
ವಿಮಾನ ನಿಲ್ದಾಣದಲ್ಲಿ ಪ್ರಥಮ ಹಂತ ಹಾಗೂ ದ್ವಿತೀಯ ಹಂತ ಸೇರಿ ಒಟ್ಟು 199 ಕೋ. ರೂ. ವೆಚ್ಚದಲ್ಲಿ 190 ಎಕರೆ ಜಾಗ ಅಗತ್ಯವಿರುವ ಕುರಿತ ಪ್ರಸ್ತಾವನೆಯನ್ನು ಜಿಲ್ಲಾಡಳಿತದ ಮೂಲಕ ಮಾ. 7ರಂದು ಸರಕಾರಕ್ಕೆ ಕಳುಹಿಸಲಾಗಿತ್ತು. ಇದಕ್ಕೆ ಸಂಬಂಧಿಸಿ ವಿಮಾನ ನಿಲ್ದಾಣದ ರನ್ವೇ ವಿಸ್ತರಣೆಗೆ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಜೆಟ್ ಮಂಡನೆ ವೇಳೆ ತಿಳಿಸಿದ್ದರು.
ವಿಮಾನ ನಿಲ್ದಾಣದ ರನ್ವೇ ವಿಸ್ತರಣೆಗೆ ಸಂಬಂಧ ಪಟ್ಟ ದಾಖಲೆಗಳನ್ನು ಕೂಡ ಸಲ್ಲಿಸಲಾಗಿದ್ದು, ವಿಮಾನ ನಿಲ್ದಾಣದ ಅಭಿವೃದ್ಧಿ ದೃಷ್ಟಿಯಿಂದ ರಾಜ್ಯ ಸರಕಾರ ಶೀಘ್ರದಲ್ಲಿ ಅನುಮೋದನೆ ನೀಡಬೇಕಿದೆ. ಭೂಸ್ವಾಧೀನ ಪ್ರಕ್ರಿಯೆ ನಡೆದ ಬಳಿಕ ರನ್ವೇ ವಿಸ್ತರಣೆಗೆ ಸಂಬಂಧಿಸಿ ಪೂರಕ ಪ್ರಕ್ರಿಯೆಗಳು ನಡೆಯಲಿವೆ.
ಬೃಹತ್ ವಿಮಾನಗಳ ಆಗಮನ ಸಾಧ್ಯ
ಪ್ರಸ್ತುತ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುಮಾರು 50 ವಿಮಾನಗಳ ಆಗಮನ- ನಿರ್ಗಮನ ನಡೆಯುತ್ತಿದೆ. ಇಲ್ಲಿನ ರನ್ವೇ ವಿಸ್ತರಣೆಗೊಂಡಲ್ಲಿ ವಿದೇಶೀಯರು ಹೆಚ್ಚು ಅವಲಂಬಿಧಿಸುವ ಬೃಹತ್ ವಿಮಾನಗಳಾದ ಬೋಯಿಂಗ್ 777, ಏರ್ಬಸ್ ಎ330 ಮುಂತಾದ ವಿಮಾನಗಳು ಕೂಡ ಇಲ್ಲಿ ಇಳಿಯಬಹುದು.
ಅಲ್ಲದೇ ನಿಲ್ದಾಣಕ್ಕೆ ಬರುವ ವಿಮಾನಗಳ ಸಂಖ್ಯೆಯೂ ಹೆಚ್ಚಾಗಲಿದೆ. ಕಾರ್ಗೋಗಳ ಆಮದು, ರಫ್ತು ಕೂಡ ಹೆಚ್ಚಾಗಧಿಲಿದೆ ಎಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ದೇಶಕ ಜೆ.ಟಿ. ರಾಧಾಕೃಷ್ಣ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್
540 ಅಡಿ ಆಳದ ಬೋರ್ವೆಲ್ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?
Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.