ಭಕ್ತ ಸಾಗರ ಮಧ್ಯೆ ಕಲಘಟಗಿ ಗ್ರಾಮದೇವಿ ಜಾತ್ರೆ ಸಂಪನ್ನ


Team Udayavani, Mar 17, 2017, 1:13 PM IST

hub4.jpg

ಕಲಘಟಗಿ: ಕಳೆದ ಒಂಬತ್ತು ದಿನದಿಂದ ಪಟ್ಟಣದಲ್ಲಿ ನಡೆದ ಗ್ರಾಮದೇವಿ ಜಾತ್ರಾ ಮಹೋತ್ಸವ ಗುರುವಾರ ಸಂಜೆ ಸಂಪನ್ನಗೊಂಡಿತು. ಪಟ್ಟಣದ ಚೌತಮನೆ ಕಟ್ಟೆಯಲ್ಲಿರುವ ಜಾತ್ರಾ ಮಂಟಪದಲ್ಲಿ ಪ್ರತಿಷ್ಠಾಪಿಸಲ್ಪಟ್ಟ ಗ್ರಾಮ ದೇವತೆಯರಿಗೆ ಲಕ್ಷಾಂತರ ಭಕ್ತರು ಉಡಿ ತುಂಬಿ, ತಮ್ಮ ಹರಿಕೆಗಳನ್ನು ತೀರಿಸಿ ಗ್ರಾಮದೇವಿ ಕೃಪೆಗೆ ಪಾತ್ರರಾದರು.

ಪಟ್ಟಣದ ಧಾರ್ಮಿಕ ವಿಧಿ-ವಿಧಾನಗಳನ್ನು ವೈದಿಕರಾದ ಕಿರಣ ಪೂಜಾರ, ಕಿಟ್ಟು ಭಟ್ಟ ಮತ್ತು ಮಧುಸೂಧನ ಉಪಾಧ್ಯ ಅವರು ಪ್ರತಿಷ್ಠಾಪನಾ ಹೋಮ ಹವನ, ಮಾಂಗಲ್ಯ ಧಾರಣೆಯನ್ನು ವಿಧಿವತ್ತಾಗಿ ನೆರವೇರಿಸಿದರು. ನಂತರ ಪ್ರತಿ ದಿನ ಪಂಚಾಮೃತ ಅಭಿಷೇಕ, ಸಹಸ್ರ ನಾಮ ಪುಷ್ಪಾರ್ಪರಣೆ, ಅಷ್ಠಾವಧಾನ ಕುಂಕುಮಾರ್ಚನೆ, ಮಂತ್ರ ಪುಷ್ಪ ಮಹಾ ಮಂಗಳಾರತಿ ನೆರವೇರಿಸಿದರು.

ಮಧ್ಯಾಹ್ನ 4ಕ್ಕೆ ಗ್ರಾಮದೇವಿ ಮೂರ್ತಿಗಳನ್ನು ಜಾತ್ರಾ ಮಂಟಪದಿಂದ ಹೊರತರುತ್ತಿದ್ದಂತೆಯೇ ನೆರೆದಿದ್ದ ಸಹಸ್ರಾರು ಭಕ್ತರ “ಉಧೋ.. ಉಧೋ.. ತಾಯಿ’ ಘೋಷಣೆ ಮುಗಿಲು ಮುಟ್ಟಿತು. ಜಾತ್ರಾ ಉತ್ಸವ ಮಂಟಪದಲ್ಲಿ 9 ದಿನಗಳ ಕಾಲ ರಾಣಿಗೇರರು ರಂಗ ಹೊಯ್ದುಕೊಂಡು ದೀಪ ಕಾದಿದ್ದು, ದೇವಿಯರ ಮೆರವಣಿಗೆ ಹೋಗುತ್ತಿದ್ದಂತೆ ಮುಂದೆ ಸಾಗಿದರು.

ಮಂಟಪದ ಪ್ರವೇಶ ದ್ವಾರದ ಎದುರಿಗೆ ಮಾತಂಗಿಯರು ಗುಡಿಸಲು (ಮಾತಂಗಿ ಝೋಪಡಿ)ನಲ್ಲಿ ಹಿಟ್ಟಿನಿಂದ ತಯಾರಿಸಿದ ಕೋಣದ ತಲೆಯ ಮೇಲೆ ದೀಪ ಮೆರವಣಿಗೆ ತೆರಳುತ್ತಿದ್ದಂತೆ ಮುಂದೆ ಸಾಗಿತು.ಮಂಟಪದ ಪ್ರವೇಶ ದ್ವಾರದ ಹೊರಗಡೆ ಗ್ರಾಮ ದೇವಿಯರ ಮೂರ್ತಿ ಬರುತ್ತಿದ್ದಂತೆ ಸಂಪ್ರದಾಯದಂತೆ ಝೋಪಡಿಗೆ ಅಗ್ನಿ ಸ್ಪರ್ಶ ಮಾಡಲಾಯಿತು.

ನಂತರ ದೇವಿಯರ ಮೂರ್ತಿವು ಪ್ರದಕ್ಷಣಾಕಾರವಾಗಿ ತಿರುಗಿ ಅಲ್ಲಿಂದ ಗ್ರಾಮ ದೇವಿ ದ್ಯಾಮವ್ವ ಮತ್ತು ದುರ್ಗವ್ವರ ಮೆರವಣಿಗೆ ಪಾದಗಟ್ಟೆ ತಲುಪಿತು. ಈ ಮೂಲಕ ಜಾತ್ರಾ ಮಹೋತ್ಸವ ಸಂಪನ್ನವಾಯಿತು. ಒಂಬತ್ತು ದಿನ ಜಾತ್ರಾ ಮಹೋತ್ಸವದಲ್ಲಿ ದೇವಸ್ಥಾನದ ಟ್ರಸ್ಟ್‌ ಕಮಿಟಿ ಮತ್ತು ಜಾತ್ರಾ ಉತ್ಸವ ಸಮಿತಿಯೊಂದಿಗೆ ಸ್ವಯಂ ಪ್ರೇರಿತರಾಗಿ ಸೇವೆ ಸಲ್ಲಿಸಿದ ಪಟ್ಟಣದ ಯುವಕರು ಮತ್ತು ಹಿರಿಯರನ್ನು ಸತ್ಕರಿಸಲಾಯಿತು.

ಜಾತ್ರಾ ಮಹೋತ್ಸವದುದ್ದಕ್ಕೂ ಲಕ್ಷಾಂತರ ಭಕ್ತಾಧಿಗಳಿಗೆ ಉತ್ತಮ ಆರೋಗ್ಯ ಸೇವೆ ನೀಡಿದ ಆರೋಗ್ಯ ಇಲಾಖೆ ಸಿಬ್ಬಂದಿ, ಕುಡಿವ ನೀರು ಹಾಗೂ ಸ್ವತ್ಛತೆಯ ಸೇವೆಗೈದ ಪಪಂ ಆಡಳಿತ ವರ್ಗ ಮತ್ತು ಸಿಬ್ಬಂದಿ, ಬಂದೋಬಸ್ತ್ ಒದಗಿಸಿದ ಪೊಲೀಸ್‌ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ಸತ್ಕರಿಸಲಾಯಿತು.  

ಟಾಪ್ ನ್ಯೂಸ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ

Maharashtra Election: Election officials checked Amit Shah’s bag

Maharashtra Election: ಅಮಿತ್‌ ಶಾ ಅವರ ಬ್ಯಾಗ್‌ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು

Anmol Buffalo: The price of this Buffalo weighing 1500 kg is Rs 23 crore!

Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!

13-BBK-11

BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!

Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್‌ ಗೆ 10 ಕೋಟಿ ರೂಪಾಯಿ ಪಂಗನಾಮ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

kmc

Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

10

Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು

11(1)

Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.