“ಸದಸ್ಯರ ಸಂಕಷ್ಟಕ್ಕೆ ಸ್ಪಂದಿಸುವ ಸಹಕಾರ ಸಂಘಗಳ ಅಭಿವೃದ್ಧಿ’


Team Udayavani, Mar 17, 2017, 2:44 PM IST

1603pkt1.jpg

ಪುಂಜಾಲಕಟ್ಟೆ : ಬಂಟ್ವಾಳ ತಾಲೂಕು ಪಿಲಾತಬೆಟ್ಟು ಗ್ರಾಮದ ಪುಂಜಾಲಕಟ್ಟೆಯಲ್ಲಿ ಕಾರ್ಯಾಚರಿಸುತ್ತಿರುವ ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರ ಸಂಘದ ನೂತನ ಕಚೇರಿ ಮತ್ತು ಗೋದಾಮು ಕಟ್ಟಡಕ್ಕೆ ಶಿಲಾನ್ಯಾಸ ಹಾಗೂ ಭೂಮಿಪೂಜೆ ಪುಂಜಾಲಕಟ್ಟೆಯಲ್ಲಿರುವ ಸ್ವಂತ ನಿವೇಶನದಲ್ಲಿ ಗುರುವಾರ ಜರಗಿತು.

ಬಳ್ಳಮಂಜ ಶ್ರೀ ಅನಂತೇಶ್ವರ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಡಾ| ಹರ್ಷ ಸಂಪಿಗೆತ್ತಾಯ ಅವರು ಶಿಲಾನ್ಯಾಸ ನೆರವೇರಿಸಿ ಮಾತನಾಡಿ ಸೇವಾ ಮನೋಭಾವದ ಅತ್ಯುತ್ತಮ ಸೇವೆಯಿಂದ ಗ್ರಾಹಕರಿಗೆ ಸಂತೃಪ್ತಿಯಾದಾಗ ಸಹಕಾರಿ ಸಂಘಗಳು ಅಭಿವೃದ್ಧಿಯಾಗುತ್ತವೆ. ಇಂತಹ ಉತ್ತಮ ಕಾರ್ಯದಿಂದ ಪಿಲಾತಬೆಟ್ಟು ಸೇವಾ ಸಹಕಾರ ಸಂಘ ಮಾದರಿಯಾಗಿದೆ. ಇದರ ನೂತನ ಕಟ್ಟಡ ನಿರ್ಮಾಣ ಕಾರ್ಯ ದೈವಾನುಗ್ರಹದಿಂದ ಸಾಂಘವಾಗಿ ನೆರವೇರಲಿ ಎಂದರು.

ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ನಿರ್ದೇಶಕ ಟಿ.ಜಿ.ರಾಜಾರಾಂ ಭಟ್‌ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಹಕಾರಿ ಸಂಘಗಳಲ್ಲಿ  ಕೇವಲ ಬ್ಯಾಂಕಿಂಗ್‌ ವ್ಯವಹಾರ ನಡೆಸುವುದು ಮಾತ್ರವಲ್ಲದೆ ಪಡಿತರ ವ್ಯವಸ್ಥೆಯ ಮೂಲಕ ಸದಸ್ಯರೊಂದಿಗೆ ನಿರಂತರ ಸಂಪರ್ಕ ಹೊಂದಿ ಅವರ ಕಷ್ಟ-ನಷ್ಟಗಳನ್ನು ಅರಿಯಬೇಕು. ಪಿಗ್ಮಿ, ಸ್ವಸಹಾಯ ಸಂಘ, ಗೊಬ್ಬರ ವಿತರಣೆ ಜತೆಗೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಬೆಳವಣಿಗೆ ಹೊಂದಬೇಕು ಎಂದರು.

ಸಂಘದ ಸದಸ್ಯರಿಗೆ ಸರ್ವ ರೀತಿಯ ಸವಲತ್ತುಗಳನ್ನು ಒದಗಿಸುವ ದಕ್ಷತೆ ಹೊಂದಿರುವ ಪಿಲಾತಬೆಟ್ಟು ವ್ಯವಸಾಯ ಸೇವಾ ಸಹಕಾರ ಸಂಘದ ಆಡಳಿತ ಮಂಡಳಿ ಅಭಿನಂದನಾರ್ಹವಾಗಿದೆ. ರೈತರ ಸಮಸ್ಯೆಗಳನ್ನು ಪರಿಹಾರ ಮಾಡುವುದಕ್ಕಾಗಿ ಅವರನ್ನು ಒಂದೆಡೆ ಸೇರಿಸಿ ಸ್ಪಂದಿಸಲು ನೂತನ ಕಟ್ಟಡದಲ್ಲಿ ಸಭಾಭವನ ನಿರ್ಮಾಣವಾಗಬೇಕು ಎಂದು ಹೇಳಿದರು.

ಜಿ.ಪಂ.ಸದಸ್ಯ ಎಂ.ತುಂಗಪ್ಪ ಬಂಗೇರ ಅವರು ಮುಖ್ಯ ಅತಿಥಿಯಾಗಿ ಮಾತನಾಡಿ, ರೈತರು ಸಾಲದ ಸಂಕಷ್ಟದಲ್ಲಿ ಸಿಲುಕಿದ್ದು ಪ್ರಸ್ತುತ ಬಜೆಟ್‌ನಲ್ಲಿ ಸರಕಾರ ರೈತರ ಸಾಲ ಮನ್ನಾ ಮಾಡುವ ನಿರೀಕ್ಷೆಯಲ್ಲಿದ್ದರು. ರೈತರ ಸಾಲ ಮನ್ನಾ ಮಾಡುವಲ್ಲಿ ಸರಕಾರ ಸ್ಪಂದಿಸಬೇಕು. ಒಗ್ಗಟ್ಟಿನಿಂದ ಸಹಕಾರ ಕ್ಷೇತ್ರದ ಅಭಿವೃದ್ಧಿ, ಸಹಕಾರ ಸಂಘದ ಮೂಲಕ ರೈತರ ಅಭಿವೃದ್ಧಿ ಆಗುತ್ತದೆ ಎಂದು ಅವರು ಹೇಳಿದರು.

ವೇ| ಮೂ| ಉದಯ ಪಾಂಗಣ್ಣಾಯ ಅವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು.ಪ್ರಗತಿಪರ ಕೃಷಿಕ ಉದಯ ಕುಮಾರ್‌ ಕಟ್ಟೆಮನೆ , ತಾ.ಪಂ.ಸದಸ್ಯ ರಮೇಶ್‌ ಕುಡೆ¾àರು, ಇರ್ವತ್ತೂರು ಗ್ರಾ.ಪಂ.ಅಧ್ಯಕ್ಷೆ ಸುಜಾತಾ, ಮಾಜಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಕೆ.ಬೂಬ,ಮಡಂತ್ಯಾರು ಡಿಸಿಸಿ ಬ್ಯಾಂಕ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧೀರ್‌, ಸಂಘದ ಅಧ್ಯಕ್ಷ ಸುಂದರ ನಾಯ್ಕ, ಉಪಾಧ್ಯಕ್ಷ ಸಂತೋಷ್‌ ಕುಮಾರ್‌ ಶೆಟ್ಟಿ,ನಿರ್ದೇಶಕರಾದ ಬೂಬ ಸಪಲ್ಯ, ರತ್ನವರ್ಮ ಹೆಗ್ಡೆ , ಸೀತಾರಾಮ ಶೆಟ್ಟಿ, ಉಮೇಶ್‌ ಪೂಜಾರಿ, ನಾರಾಯಣ ಪೂಜಾರಿ, ಚಂದ್ರಶೇಖರ ಹೆಗ್ಡೆ , ಹರ್ಷಿಣಿ, ವಾಯ್ಲೆಟ್‌ ಫೆರ್ನಾಂಡಿಸ್‌, ಬ್ಯಾಂಕ್‌ ಪ್ರತಿನಿಧಿ ಕೇಶವ ಕಿಣಿ, ಪ್ರಮುಖರಾದ ಸೀತಾರಾಮ ಹೆಗ್ಡೆ, ದೇವಪ್ಪ ಶೆಟ್ಟಿ, ಅಣ್ಣು ಪೂಜಾರಿ, ಸಿಪ್ರಿಯನ್‌ ರೊಡ್ರಿಗಸ್‌, ಪಿಲಾತಬೆಟ್ಟು ಗ್ರಾ.ಪಂ.ಉಪಾಧ್ಯಕ್ಷೆ ಲಕ್ಷ್ಮೀ ಜೆ.ಬಂಗೇರ, ಸಂಘದ ಮಾಜಿ ನಿರ್ದೇಶಕ ನಾರಾಯಣ ಶೆಟ್ಟಿ, ಮಾಜಿ ಅಧ್ಯಕ್ಷ ಚಂದ್ರಶೇಖರ ಭಟ್‌ ವಿ.ಯು.ಎಸ್‌., ಪಿಲಾತಬೆಟ್ಟು ಮತ್ತು ನಯನಾಡು ಶಾಖೆಯ ಸಿಬಂದಿ ವರ್ಗದವರು ಉಪಸ್ಥಿತರಿದ್ದರು.

ಮಾಜಿ ಅಧ್ಯಕ್ಷ,  ಹಾಲಿ ನಿರ್ದೇಶಕ ಲಕ್ಷ್ಮೀನಾರಾಯಣ ಉಡುಪ ಸ್ವಾಗತಿಸಿ ಪ್ರಸ್ತಾವಿಸಿದರು. ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಮಂಜಪ್ಪ ಮೂಲ್ಯ ವಂದಿಸಿದರು. ಭರತ್‌ರಾಜ್‌ ಜೈನ್‌ ಅವರು ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Pune: Batter collapses on the field!; Video goes viral

Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!;‌ ವಿಡಿಯೋ ವೈರಲ್

Photo of female commando with Modi goes viral: Was it real?

Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್:‌ ಏನಿದರ ಅಸಲೀಯತ್ತು?

mohammed shami

‌Team India: ವೇಗಿ ಮೊಹಮ್ಮದ್ ಶಮಿಗೆ ಕಟ್ಟುನಿಟ್ಟಿನ ಗಡುವು ನೀಡಿದ ಬಿಸಿಸಿಐ!

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Puttur: ಇದು ಅಜಿತರ ಸಾಹಸ : ರಬ್ಬರ್‌ ತೋಟದಲ್ಲಿ ಕಾಫಿ ಘಮ ಘಮ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

Court-1

Puttur: ಮಹಿಳೆಗೆ ಬೈಕ್‌ ಢಿಕ್ಕಿ; ಸವಾರನಿಗೆ ಶಿಕ್ಷೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

7-shahapur

Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು

6-dandeli

Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ

BGT 2024: Good news for Team India; A key player back in the team

BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…

5-gokarna

Gokarna ಬೀಚಲ್ಲಿ ಮುಳುಗಿ ಬೆಂಗಳೂರಿನ ಇಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.