ಉಪ್ಪಿನಂಗಡಿ ಜಾತ್ರೆ: ಅವಭೃಥ ಸ್ನಾನ, ರಂಗಪೂಜೆ
Team Udayavani, Mar 17, 2017, 3:33 PM IST
ಉಪ್ಪಿನಂಗಡಿ : ಇತಿಹಾಸ ಪ್ರಸಿದ್ಧ ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ವಾರ್ಷಿಕ ಉತ್ಸವದ ಅಂಗವಾಗಿ ನಡೆದ ದೇವರ ಪೇಟೆ ಸವಾರಿ, ಕಟ್ಟೆ ಪೂಜೆ, ಅವಭೃಥ ಸ್ನಾನ, ರಂಗಪೂಜೆ ಹಾಗೂ ಧ್ವಜಾವರೋಹಣ ಬುಧವಾರ ರಾತ್ರಿ ಭಕ್ತಿ, ಸಡಗರದೊಂದಿಗೆ ನಡೆಯಿತು.
ದೇವಸ್ಥಾನದಲ್ಲಿ ದೇವರ ಬಲಿ ಹೊರಟು ಉಪ್ಪಿನಂಗಡಿಯ ರಥ ಬೀದಿಯಾಗಿ ಹೊಸ ಬಸ್ ನಿಲ್ದಾಣದ ಅಬಳಿಯ ಅಶ್ವತ್ಥ ಕಟ್ಟೆಯಲ್ಲಿ ಕಟ್ಟೆ ಪೂಜೆ ನೆರವೇರಿಸಲಾಯಿತು. ಬಳಿಕ ಹಳೇ ಬಸ್ ನಿಲ್ದಾಣದ ಬಳಿಯ ಅಶ್ವತ್ಥ ಕಟ್ಟೆಯಲ್ಲಿ ಕಟ್ಟೆಪೂಜೆ ನರವೇರಿಸಲಾಗಿ ಉಪ್ಪಿನಂಗಡಿಯ ನೇತ್ರಾವತಿ ಕುಮಾರಾಧಾರ ನದಿ ಸಂಗಮ ಸ್ಥಳದಲ್ಲಿ ದೇವರ ಅವಭೃಥ ಸ್ನಾನವು ಭಕ್ತಗಡಣದೊಂದಿಗೆ ನಡೆಯಿತು. ಬಳಿಕ ಉದ್ಭವ ಲಿಂಗದಲ್ಲಿ ದೇವರಿಗೆ ರಂಗಪೂಜೆ ನೆರವೇರಿಸಿ, ದೇವಸ್ಥಾನದ ಧ್ವಜಾವರೋಹಣವನ್ನು ಮಾಡಲಾಯಿತು.
ಈ ಸಂದರ್ಭ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಅಲಿಮಾರ ರಘುನಾಥ ರೈ, ಸದಸ್ಯರಾದ ಕೆ. ರಾಧಾಕೃಷ್ಣ ನಾೖಕ್, ಡಾ| ಕೆ.ಬಿ. ರಾಜಾರಾಮ್, ಸವಿತಾ ಕೆ., ಅನಿತಾ ಕೆ., ಸೋಮನಾಥ, ಪ್ರಕಾಶ್ ರೈ ಬೆಳ್ಳಿಪ್ಪಾಡಿ, ಜಿ. ಕೃಷ್ಣ ರಾವ್, ಹರೀಶ್ ಉಪಾಧ್ಯಾಯ, ಗಣ್ಯರಾದ ಕಂಗ್ವೆ ವಿಶ್ವನಾಥ ಶೆಟ್ಟಿ, ಸುಧಾಕರ ಶೆಟ್ಟಿ, ವಿಜಯ ಕುಮಾರ್ ಕಲ್ಲಳಿಕೆ, ರಮೇಶ್ ಭಂಡಾರಿ, ಉಷಾ ಚಂದ್ರ ಮುಳಿಯ, ಚಿದಾನಂದ ನಾಯಕ್, ಎನ್. ಗೋಪಾಲ ಹೆಗ್ಡೆ, ಕಾಮಾಕ್ಷಿ ಜಿ ಹೆಗ್ಡೆ, ಐ. ಸುಧಾಕರ ನಾಯಕ್, ಅಶೋಕ್ ಕುಮಾರ್ ರೈ ನೆಕ್ಕರೆ, ದೇಗುಲದ ವ್ಯವಸ್ಥಾಪಕ ವೆಂಕಟೇಶ್ ಭಟ್ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂಗವಾಗಿ ಉಪ್ಪಿನಂಗಡಿ ಹಳೆ ಬಸ್ ನಿಲ್ದಾಣದಲ್ಲಿ ಗೆಳೆಯರು 94 ಇದರ ಸಾರಥ್ಯದಲ್ಲಿ ಭಕ್ತಿ- ಭಾವ ರಸಮಂಜರಿ, ಅನ್ನಬ್ರಹ್ಮ ಯೋಜನೆಗೆ ಧನ ಸಹಾಯ ವಿತರಣೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.