ಸಮರೋಪಾದಿಯಲ್ಲಿ ನೀರಿನ ಸಮಸ್ಯೆ ನಿವಾರಿಸಿ


Team Udayavani, Mar 17, 2017, 3:59 PM IST

CM-Meet-1.jpg

ಕೋಲಾರ: ಬೇಸಿಗೆಯ ಕಷ್ಟದ ದಿನಗಳಲ್ಲಿ ತಾಲೂಕಿನ ಜನತೆಗೆ ಕುಡಿಯುವ ನೀರು ಕಲ್ಪಿಸಲು ಅಧಿಕಾರಿಗಳು ಸಮರೋಪಾದಿಯಲ್ಲಿ ಕೆಲಸ ಮಾಡಬೇಕೆಂದು ಶಾಸಕ ಆರ್‌.ವರ್ತೂರು ಪ್ರಕಾಶ್‌ ಸೂಚಿಸಿದರು. ನಗರದ ತಾಲೂಕು ಪಂಚಾಯ್ತಿ ಸಭಾಂಗಣದಲ್ಲಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ಸಲುವಾಗಿ ಕರೆದಿದ್ದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. 

ಕೋಲಾರ ತಾಲೂಕು ವ್ಯಾಪ್ತಿಗೆ ಬರುವ ಸುಮಾರು 365 ಗ್ರಾಮಗಳ ಪೈಕಿ ಸುಮಾರು 25 ಗ್ರಾಮಗಳಲ್ಲಿ ಕುಡಿಯುವ ನೀರಿನ ತೀವ್ರ ಅಭಾವವಿದೆ. ಹದಿನೈದು ಗ್ರಾಮಗಳಲ್ಲಿ ಕೊಳವೆ ಬಾವಿ ಕೊರೆದು ನೀರು ನೀಡುವ ಪ್ರಯತ್ನ ಮಾಡಲಾಗುತ್ತಿದೆ.

ಉಳಿದ ಹತ್ತು ಗ್ರಾಮಗಳಲ್ಲಿ ಹೊಸದಾಗಿ ಕೊಳವೆ ಬಾವಿಗಳನ್ನು ಕೊರೆಸಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕೆಂದು ಸೂಚಿಸಿದರು. ನೀರು ಸಿಗುವ ಕೊಳವೆ ಬಾವಿಗಳಿಗೆ ತ್ವರಿತವಾಗಿ ಪಂಪು ಮೋಟಾರು ಅಳವಡಿಸಿ ಜನತೆಗೆ ನೀರು ನೀಡುವ ಕೆಲಸ ಮಾಡಬೇಕೆಂದು ಒತ್ತಾಯಿಸಿದರು.

ಅಮಾನತ್‌ಗೆ ಶಿಫಾರಸು: ಕೆಲವು ಗ್ರಾಮ ಪಂಚಾಯ್ತಿಗಳಲ್ಲಿ ಅಗತ್ಯಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಟ್ಯಾಂಕರ್‌ಗಳಲ್ಲಿ ನೀರು ಪೂರೈಕೆ ಮಾಡಲಾಗುತ್ತಿದೆ ಎಂದು ಬಿಲ್‌ ಮಾಡಿ ಹಣ ದುರುಪಯೋಗ ಮಾಡಲಾಗುತ್ತಿದೆ.

 ಈ ಸಂಬಂಧ ಮಾಹಿತಿ ನೀಡುವಂತೆ ಜನಪ್ರತಿನಿಧಿಗಳನ್ನು ಶಾಸಕರು ಕೋರಿದರು. ಈ ಸಂದರ್ಭದಲ್ಲಿ ಸದಸ್ಯರಿಂದ ಬಂದ ಮಾಹಿತಿ ಪ್ರಕಾರ ಅರಾಭಿಕೊತ್ತನೂರು ಹಾಗೂ ಕೊಂಡರಾಜನಹಳ್ಳಿಯಲ್ಲಿ ಕಡಿಮೆ ಟ್ಯಾಂಕರ್‌ಗಳಲ್ಲಿ ನೀರು ನೀಡುತ್ತಾ ಹೆಚ್ಚಿನ ಟ್ಯಾಂಕರ್‌ಗಳನ್ನು ನಮೂದಿಸಲು ಅವಕಾಶ ಕಲ್ಪಿ$ಸಿರುವ ಪಿಡಿಒಗಳ ಅಮಾನತು ಮಾಡಬೇಕೆಂದು ಶಾಸಕರು ಅಧಿಕಾರಿಗಳನ್ನು ಸೂಚಿಸಿದರು.

ಮೊದಲ ವಾರವೇ ಬಿಲ್‌ ನೀಡಿ: ಟ್ಯಾಂಕರ್‌ಗಳ ಮೂಲಕ ನೀರು ಪೂರೈಕೆ ಬಿಲ್ಲುಗಳನ್ನು ಏಳೆಂಟು ತಿಂಗಳ ನಂತರ ನೀಡಿ ಅವುಗಳಲ್ಲಿ ಪೂರೈಕೆ ಮಾಡದ ದಿನಗಳ ಬಿಲ್ಲುಗಳನ್ನು ಸೇರಿಸಲಾಗುತ್ತಿದೆ. ಆನಂತರ ಜಿಲ್ಲಾಡಳಿತದ ಮೇಲೆ ಒತ್ತಡ ತಂದು ಟ್ಯಾಂಕರ್‌ ಬಿಲ್ಲುಗಳನ್ನು ಪಾವತಿ ಮಾಡಿಸಿಕೊಳ್ಳಲಾಗುತ್ತಿದೆ. ಇದರಿಂದ ಅಕ್ರಮವಾಗಲು ಕಾರಣವಾಗುತ್ತಿದೆಯೆಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ವರ್ತೂರು ಪ್ರಕಾಶ್‌, ಇನ್ನು ಮುಂದೆ ಗ್ರಾಮ ಪಂಚಾಯ್ತಿಗಳು ಸರಬರಾಜು ಮಾಡುತ್ತಿರುವ ಟ್ಯಾಂಕರ್‌ ನೀರಿನ ಬಿಲ್ಲುಗಳನ್ನು ತಿಂಗಳು ಆಯಾ ತಿಂಗಳ ಮೊದಲ ವಾರದೊಳಗೆ ಸಲ್ಲಿಸಿ ಪಾವತಿಗೆ ಸಹಕರಿಸಬೇಕು. ಇದರಿಂದ ಆಗಿರುವ ಅಕ್ರಮಗಳನ್ನು ತಡೆಯಲು ಸಾಧ್ಯವೆಂದರು.

ನೀರು ಸೋರಿಕೆ ತಡೆಯಿರಿ: ತಾಲೂಕು ಪಂಚಾಯ್ತಿ ಸದಸ್ಯ ಮುರಳೀಧರ ಮಾತನಾಡಿ, ನೀರಿಗೆ ತೀವ್ರ ಅಭಾವವಿರುವುದರಿಂದ ಕುಡಿಯುವ ನೀರನ್ನು ಪೂರೈಕೆಯ ಜೊತೆಗೆ ಹಾಲಿ ನೀರು ಸರಬರಾಜು ವಿಧಾನದಲ್ಲಿ ಆಗುತ್ತಿರುವ ಸೋರಿಕೆಯನ್ನು ತಡೆಯಬೇಕು ಮತ್ತು ಗ್ರಾಮಸ್ಥರಿಗೆ ನೀರಿನ ಮಿತ ಬಳಕೆ ಕುರಿತು ಜಾಗೃತಿ ಮೂಡಿಸಬೇಕೆಂದು ಸಲಹೆ ನೀಡಿದರು. ಈ ಕುರಿತು ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಡಿಸಿ ಹಾಗೂ ಸಿಇಒ ಭರವಸೆ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಗೆ ಸಲಹೆ ನೀಡಿದರು.

ಏಳು ವಾರಕ್ಕೆ ಮೇವು: ಕೋಲಾರ ತಾಲೂಕಿನಲ್ಲಿ ಹಾಲಿನ ಡೇರಿ ಜೊತೆ ಒಪ್ಪಂದ ಮಾಡಿ 1300 ಎಕರೆಯಲ್ಲಿ ಹಾಗೂ ಸಾರ್ವಜನಿಕರಿಂದ 1500 ಎಕರೆಯಲ್ಲಿ ಮೇವು ಬೆಳೆಸಿರುವುದರಿಂದ ಮುಂದಿನ ಏಳು ವಾರಕ್ಕೆ ಆಗುವಷ್ಟು ಮೇವು ಲಭ್ಯವಿದೆಯೆಂದು ಪಶುಪಾಲನಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದರು. ಇದಕ್ಕೆ ಸ್ಪಂದಿಸಿದ ಶಾಸಕ ವರ್ತೂರು ಪ್ರಕಾಶ್‌, ಬರದ ಮುಂಜಾಗ್ರತೆ ಅರಿತು ಜಿಲ್ಲಾಧಿಕಾರಿಗಳು ಜಿಲ್ಲೆಯಲ್ಲಿ ಯಥೇತ್ಛವಾಗಿ ಮೇವು ಬೆಳೆಸಲು ಕ್ರಮ ಕೈಗೊಂಡಿರುವುದರಿಂದ ಮೇವು ಲಭ್ಯವಿದೆಯೆಂದು ಮೆಚ್ಚುಗೆ ವ್ಯಕ್ತಪಡಿಸಿದರು. 

ಕೋಲಾರ ಜಿಲ್ಲೆಯ ಎಲ್ಲಾ ಜಾನುವಾರುಗಳಿಗೆ ಮುಂದಿನ ವಾರದಿಂದಲೇ ಕಾಲು ಬಾಯಿ ಜ್ವರಕ್ಕೆ ಲಸಿಕೆ ಹಾಕುವ ಕಾರ್ಯಕ್ರಮದ ಎರಡನೇ ಹಂತದ ಕಾರ್ಯಕ್ರಮ ಆರಂಭಿಸಬೇಕೆಂದು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಜೆಟ್‌ನಲ್ಲಿ ಪಂಚಾಯ್ತಿ ಪ್ರತಿನಿಧಿಗಳ ವೇತನ ಗೌರವಧನವನ್ನು ಹೆಚ್ಚಳ ಮಾಡಿದ್ದಕ್ಕೆ ಹರ್ಷ ವ್ಯಕ್ತಪಡಿಸಿ ಶಾಸಕ ವರ್ತೂರು ಪ್ರಕಾಶ್‌ ತಾಪಂ ಜಿಪಂ ಸದಸ್ಯರಿಗೆ ತಾವು ತಂದಿದ್ದ ಜಿಲೇಬಿ ಹಂಚಿದರು.

ಸಭೆಯಲ್ಲಿ ತಾಪಂ ಅಧ್ಯಕ್ಷ ಸೂಲೂರು ಆಂಜಿನಪ್ಪ, ಉಪಾಧ್ಯಕ್ಷೆ ಲಕ್ಷ್ಮೀ, ಜಿಲ್ಲಾಧಿಕಾರಿ ಡಾ.ಕೆ.ವಿ.ತ್ರಿಲೋಕಚಂದ್ರ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಬಿ.ಕಾವೇರಿ, ತಾಪಂ ಕಾರ್ಯನಿರ್ವಹಣಾಧಿಕಾರಿ ನಾರಾಯಣಸ್ವಾಮಿ, ತಹಸೀಲ್ದಾರ್‌ ವಿಜಯಣ್ಣ ಇತರರು ಹಾಜರಿದ್ದರು.

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Kolar: ಧಾರ್ಮಿಕ ಮೆರವಣಿಗೆಯಲ್ಲಿ ಯಾಂತ್ರಿಕ ಆನೆ ಬಳಕೆ!

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

Karnataka: ಅನರ್ಹರ ಕಾರ್ಡ್‌ ಮಾತ್ರ ಎಪಿಎಲ್‌ಗೆ: ಮುನಿಯಪ್ಪ

ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ: ಅಶ್ವತ್ಥನಾರಾಯಣ

C. N. Ashwath Narayan: ಕೆಲ ಕಾರಣಗಳಿಂದ ಯೋಗೇಶ್ವರ್‌ಗೆ ನೋವಾಗಿದೆ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

Kolar: ಮಗುವನ್ನು ಆಸ್ಪತ್ರೆಯಲ್ಲೇ ಬಿಟ್ಟು ಪೋಷಕರು ಪರಾರಿ

0528

Bangarapet: ಗ್ರಾಪಂಗಳಲ್ಲಿ ಇಲ್ಲ ಅಧಿಕಾರಿ-ಸಿಬ್ಬಂದಿ; ಸಮಸ್ಯೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.