ಉ.ಪ್ರ. ಮುಖ್ಯಮಂತ್ರಿ ನಿರ್ಧಾರ ಇಂದು; ವಾರಾಣಸಿ ದೇವಳಗಳಿಗೆ ಸಿನ್ಹಾ
Team Udayavani, Mar 18, 2017, 11:50 AM IST
ಲಕ್ನೋ : ಉತ್ತರ ಪ್ರದೇಶ ವಿಧಾನಸಭೆಗೆ ನೂತನವಾಗಿ ಚುನಾಯಿತರಾಗಿರುವ ಬಿಜೆಪಿ ಶಾಸಕರು ಇಂದು ಶನಿವಾರ ತಮ್ಮ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಸಭೆ ಸೇರಲಿದ್ದಾರೆ. ಭಾರೀ ಕುತೂಹಲ ಕೆರಳಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಪಟ್ಟಕ್ಕೆ ಈಗ ಕೇಂದ್ರ ಸಚಿವ ಮನೋಜ್ ಸಿನ್ಹಾ ಅವರ ಹೆಸರು ಬಲವಾಗಿ ಕೇಳಿ ಬರುತ್ತಿದ್ದು ಅವರೇ ಈಗ ಸ್ಪರ್ಧೆಯ ಮುಂಚೂಣಿಯಲ್ಲಿದ್ದಾರೆ.
ಕೇಂದ್ರ ಸಹಾಯಕ ರೈಲ್ವೆ ಹಾಗೂ ಸಂಪರ್ಕ ಸಚಿವ ಮನೋಜ್ ಸಿನ್ಹಾ ಅವರಿಂದು ಬೆಳಗ್ಗೆ ವಾರಾಣಸಿಯಲ್ಲಿನ ಹಲವಾರು ದೇವಾಲಯಗಳನ್ನು ಸಂದರ್ಶಿಸಿದ್ದಾರೆ.
ಉತ್ತರ ಪ್ರದೇಶ ಮುಖ್ಯಮಂತ್ರಿ ಪದಕ್ಕೆ ಬಿಜೆಪಿಯು ಈಗಿನ್ನೂ ಯಾರ ಹೆಸರನ್ನೂ ಪ್ರಕಟಿಸಿಲ್ಲವಾದರೂ ರಾಜ್ಯಪಾಲ ರಾಮ ನಾಯಕ್ ಅವರು ನೂತನ ಮುಖ್ಯಮಂತ್ರಿ ಮತ್ತು ಸಂಪುಟ ಸಹೋದ್ಯೋಗಿಗಳು ಮಾರ್ಚ್ 19ರ ಭಾನುವಾರ ಸಂಜೆ 5.00 ಗಂಟೆಗೆ ಕಾನ್ಶಿರಾಮ್ ಸ್ಮತಿ ಉಪವನದಲ್ಲಿ ಪ್ರಮಾಣ ವಚನ ಸ್ವೀಕರಿಸುವರೆಂದು ಎಂದು ಈಗಾಗಲೇ ಪ್ರಕಟಿಸಿದ್ದಾರೆ.
ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸ್ವತಃ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಪಾಲ್ಗೊಳ್ಳಲಿರುವುದರಿಂದ ಇದೊಂದು ಭವ್ಯ ಸಮಾರಂಭವಾಗಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
MUST WATCH
ಹೊಸ ಸೇರ್ಪಡೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.