ಅನುದಾನದ ಕೊರತೆ : ಪಾಸ್‌ಪೋರ್ಟ್ ಸೇವಾ ಕೇಂದ್ರ ಉದ್ಘಾಟನೆ ವಿಳಂಬ
Team Udayavani, Mar 18, 2017, 2:47 PM IST
ಕಾಸರಗೋಡು: ಹಲವು ವರ್ಷಗಳ ಬೇಡಿಕೆ, ಹೋರಾಟದ ಫಲಶ್ರುತಿಯಾಗಿ ಕಾಸರಗೋಡಿಗೆ ಮಂಜೂರುಗೊಂಡಿರುವ ಪಾಸ್ ಪೋರ್ಟ್ ಸೇವಾ ಕೇಂದ್ರ ಉದ್ಘಾಟನೆಗೆ ವಿಳಂಬವಾಗುತ್ತಿದೆ. ಪಾಸ್‌ಪೋರ್ಟ್ ಕೇಂದ್ರ ಉದ್ಘಾಟನೆ ವಿಳಂಬವಾಗಲು ಅನುದಾನದ ಕೊರತೆ ಕಾರಣ ಎಂಬುದಾಗಿ ಮೇಲ್ನೋಟಕ್ಕೆ ತೋರಿಬಂದರೂ, ಸಂಬಂಧಪಟ್ಟವರ ಇಚ್ಛಾಶಕ್ತಿಯ ಕೊರತೆಯನ್ನು ಅಲ್ಲಗಳೆಯುವಂತಿಲ್ಲ. ಕೆಲವೊಂದು ತಾಂತ್ರಿಕ ಕಾರಣಗಳೂ ಪಾಸ್‌ಪೋರ್ಟ್ ಸೇವಾ ಕೇಂದ್ರ ಉದ್ಘಾಟನೆ ವಿಳಂಬವಾಗಲು ಕಾರಣವಾಗಿದೆ ಎಂಬ ಸಂಬಂಧಪಟ್ಟವರು ಸಬೂಬು ನೀಡುತ್ತಿದ್ದಾರೆ.
ಕಾಸರಗೋಡು ಜಿಲ್ಲೆಯಿಂದ ಕೊಲ್ಲಿ ರಾಷ್ಟ್ರ ಸಹಿತ ವಿದೇಶದಲ್ಲಿ ಉದ್ಯೋಗಕ್ಕಾಗಿ ಹೋಗುವವರ ಸಂಖ್ಯೆ ಅಧಿಕವಾಗಿರುವ ಹಿನ್ನೆಲೆಯಲ್ಲಿ ಕಾಸರಗೋಡಿನಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರವನ್ನು ಸ್ಥಾಪಿಸಬೇಕೆಂದು ಹಲವು ವರ್ಷಗಳ ಬೇಡಿಕೆ ಹಾಗು ಹೋರಾಟದ ಫಲವಾಗಿ ಕೇಂದ್ರ ಸರಕಾರ ಮಂಜೂರು ಮಾಡಿದ ಪಾಸ್‌ಪೋರ್ಟ್ ಸೇವಾ ಕೇಂದ್ರವನ್ನು ಫೆಬ್ರವರಿ 28 ರಂದು ಉದ್ಘಾಟಿಸಲು ತೀರ್ಮಾನಿಸಲಾಗಿತ್ತು. ಕಾಸರಗೋಡು ನಗರದಲ್ಲಿರುವ ಪ್ರಧಾನ ಅಂಚೆ ಕಚೇರಿಯ ಕಟ್ಟಡದಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರ ಕಚೇರಿಯನ್ನು ಆರಂಭಿಸಲು ಉದ್ದೇಶಿಸಲಾಗಿದ್ದು, ಪ್ರಾರಂಭಿಕ ಪ್ರಕ್ರಿಯೆ ಆರಂಭಗೊಂಡಿತ್ತು. ಆದರೆ ಸಾಕಷ್ಟು ಅನುದಾನ ಲಭಿಸದಿರುವುದರಿಂದಾಗಿ ಪಾಸ್‌ಪೋರ್ಟ್ ಕೇಂದ್ರ ತೆರೆಯಲು ವಿಳಂಬವಾಗುತ್ತಿದೆ.
ಕೇಂದ್ರದಿಂದ ಅನುಮತಿ ಲಭಿಸಿದ್ದು ಕಾಸರಗೋಡಿನ ಅಂಚೆ ಕಚೇರಿಯ ಕಟ್ಟಡದ ಕೊಠಡಿಯನ್ನು ಇನ್ನೂ ವ್ಯವಸ್ಥಿತಗೊಳಿಸಲಾಗಿಲ್ಲ, ಮೊತ್ತ ಮಂಜೂರುಗೊಂಡಿಲ್ಲ. ಇದರಿಂದಾಗಿ ಪಾಸ್‌ಪೋರ್ಟ್ ಸೇವಾ ಕೇಂದ್ರ ಕಚೇರಿ ಉದ್ಘಾಟನೆಗೆ ವಿಳಂಬವಾಗುತ್ತಿದೆ.
ಕೇಂದ್ರ ಸರಕಾರಕ್ಕೆ ಮನವಿ
ಕಾಸರಗೋಡಿನ ಪ್ರಧಾನ ಅಂಚೆ ಕಚೇರಿ ಕಟ್ಟಡದಲ್ಲಿ ಆರಂಭಿಸಲು ಉದ್ದೇಶಿಸಿದ ಪಾಸ್‌ಪೋರ್ಟ್ ಸೇವಾ ಕೇಂದ್ರವನ್ನು ಆರಂಭಿಸಲು ಅಗತ್ಯದ ಮೊತ್ತವನ್ನು ಮಂಜೂರು ಮಾಡುವಂತೆ ಕೇಂದ್ರ ಸರಕಾರದ ವಿದೇಶಾಂಗ ಖಾತೆ ಸಚಿವೆ ಸುಷ್ಮಾ ಸ್ವರಾಜ್ ಮತ್ತು ಕೇಂದ್ರದ ಮುಖ್ಯ ಪಾಸ್‌ಪೋರ್ಟ್ ಅಧಿಕಾರಿಗೆ ಪತ್ರ ಬರೆದಿರುವುದಾಗಿ ಕಾಸರಗೋಡು ಸಂಸದ ಪಿ. ಕರುಣಾಕರನ್ ಅವರು ಹೇಳಿದ್ದಾರೆ.
ಪಾಸ್‌ಪೋರ್ಟ್ ಸೇವಾ ಕೇಂದ್ರ ಆರಂಭಿಸಲು ಸುಮಾರು 50 ಲಕ್ಷ ರೂ. ಮೊತ್ತ ಅನಿವಾರ್ಯವಾಗಿದ್ದು, ಈ ಮೊತ್ತವನ್ನು ಕಲ್ಲಿಕೋಟೆಯ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿಯಿಂದ ನೀಡಬೇಕಾಗಿದೆ. ಈ ಬಗ್ಗೆ ಸಂಬಂಧಪಟ್ಟವರೊಂದಿಗೆ ಮನವಿ ಸಲ್ಲಿಸಿ ಚರ್ಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ನೈತಿಕ ಹಕ್ಕಿಲ್ಲ
ಕಾಸರಗೋಡಿನ ಜನರು ಹಲವು ವರ್ಷಗಳಿಂದ ಬೇಡಿಕೆಯಿಟ್ಟಿದ್ದ ಹಾಗೂ ಹೋರಾಟ ಮಾಡಿದ್ದ ಕಾಸರಗೋಡು ಪಾಸ್‌ಪೋರ್ಟ್ ಸೇವಾ ಕೇಂದ್ರವನ್ನು ಎನ್‌ಡಿಎ ನೇತೃತ್ವದ ಕೇಂದ್ರ ಸರಕಾರ ಮಂಜೂರು ಮಾಡಿದೆ. ಆದರೆ ಕೇಂದ್ರದಲ್ಲಿ ದೀರ್ಘ ಕಾಲ ಆಡಳಿತದಲ್ಲಿದ್ದ ಕಾಂಗ್ರೆಸ್ ನೇತೃತ್ವದಲ್ಲಿ ಯುಪಿಎ ಸರಕಾರ ಕಾಸರಗೋಡಿನಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರ ತೆರೆಯಲು ಉತ್ಸಾಹ ತೋರಿಸಿರಲಿಲ್ಲ. ಕೆಲವೊಂದು ತಾಂತ್ರಿಕ ಕಾರಣಗಳಿಂದ ಪಾಸ್‌ಪೋರ್ಟ್ ಸೇವಾ ಕೇಂದ್ರ ಉದ್ಘಾಟನೆಗೆ ವಿಳಂಬವಾಗುತ್ತಿದೆ. ಇದನ್ನೇ ಮುಂದಿಟ್ಟುಕೊಂಡು ಪ್ರತಿಭಟನೆಯ ಕೂಗು ಹೇಳಿಕೆ ನೀಡುತ್ತಿರುವುದು ಖಂಡನೀಯ. ಯುಪಿಎ ಸರಕಾರಕ್ಕೆ ಸಾಧ್ಯವಾಗದ ಕೆಲಸವನ್ನು ಎನ್‌ಡಿಎ ಸರಕಾರ ಮಂಜೂರು ಮಾಡಿದೆ. ಈ ಹಿನ್ನೆಲೆ ಯಲ್ಲಿ ಡಿಸಿಸಿ ಅಧ್ಯಕ್ಷ ಹಕೀಂ ಕುನ್ನಿಲ್ ಅವರಿಗೆ ಪ್ರತಿಭಟನೆಯ ಹೇಳಿಕೆ ನೀಡಲು ನೈತಿಕ ಹಕ್ಕಿಲ್ಲ ಎಂದು ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯ, ಬಿಜೆಪಿ ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಕೆ. ಶ್ರೀಕಾಂತ್ ಹೇಳಿದ್ದಾರೆ.
ಕಚೇರಿಗಾಗಿ ಹೋರಾಟ
ಕಾಸರಗೋಡಿನಲ್ಲಿ ಪಾಸ್‌ಪೋರ್ಟ್ ಸೇವಾ ಕೇಂದ್ರ ತೆರೆಯಲು ವಿಳಂಬ ವಾಗುತ್ತಿರುವುದನ್ನು ಖಂಡಿಸಿ ಈಗಾಗಲೇ ವಿವಿಧ ಸಂಘಟನೆಗಳು ಹೋರಾಟದ ಹಾದಿ ಹಿಡಿದಿವೆ. ದೀರ್ಘಕಾಲದ ಬೇಡಿಕೆಯಾಗಿರುವ ಪಾಸ್‌ಪೋರ್ಟ್ ಸೇವಾ ಕೇಂದ್ರ ಕಾಸರಗೋಡಿನಲ್ಲಿ ಆರಂಭಿಸುವ ವಿಷಯದಲ್ಲಿ ಕೇಂದ್ರ ಸರಕಾರ ಹಾಗು ರಾಜ್ಯ ಸರಕಾರ ಜಿಲ್ಲೆಯ ಜನರನ್ನು ವಂಚಿಸಿವೆ ಎಂದು ಡಿಸಿಸಿ ಅಧ್ಯಕ್ಷ ಹಕೀಂ ಕುನ್ನಿಲ್ ಆರೋಪಿಸಿದ್ದಾರೆ. ಪಾಸ್‌ಪೋರ್ಟ್ ಸೇವಾ ಕೇಂದ್ರ ಆರಂಭಿಸಲು ಅನುಮತಿ ನೀಡಿ ಕೇವಲ ಉದ್ಘಾಟನೆಗಾಗಿ ದಿನ ನಿಗದಿಯಾಗಿತ್ತು. ಆದರೆ ಆ ದಿನದಂದು ಉದ್ಘಾಟನೆ ಸಾಧ್ಯವಾಗಿಲ್ಲ. ಅಲ್ಲದೆ ಈ ಕೇಂದ್ರಕ್ಕೆ ಅಗತ್ಯದ ಮೊತ್ತ ಹಾಗೂ ಉಪಕರಣಗಳನ್ನು ನೀಡಿಲ್ಲ ಎಂದು ಆರೋಪಿಸಿರುವ ಹಕೀಂ ಕುನ್ನಿಲ್ ಪಾಸ್‌ಪೋರ್ಟ್ ಸೇವಾ ಕೇಂದ್ರ ಉದ್ಘಾಟನೆಗೆ ವಿಳಂಬವಾಗುತ್ತಿರುವುದರಿಂದ ಡಿಸಿಸಿ ವತಿಯಿಂದ ಪ್ರತಿಭಟನೆ ನಡೆಸುವುದಾಗಿ ಹಕೀಂ ಮುನ್ನೆಚ್ಚರಿಕೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.