ಅಂಬೇಡ್ಕರ್‌ ಜಯಂತಿ ಆಚರಣೆಗೆ ಗಣ್ಯರ ದಂಡು


Team Udayavani, Mar 18, 2017, 3:34 PM IST

gul7.jpg

ಚಿತ್ತಾಪುರ: ಪಟ್ಟಣದ ರಿಂಗ್‌ ರೋಡ್‌ ಮಾರ್ಗದಲ್ಲಿನ ಮಿನಿ ವಿಧಾನ ಸೌಧದ ಆವರಣದಲ್ಲಿ ನಡೆಯಲಿರುವ ಡಾ| ಬಿ.ಆರ್‌. ಅಂಬೇಡ್ಕರ್‌ರ 125ನೇ ಜಯಂತಿ ಕಾರ್ಯಕ್ರಮದ ವೇದಿಕೆ ಸಿದ್ಧತೆ ಕಾರ್ಯಗಳನ್ನು ಪ್ರವಾಸೋದ್ಯಮ ಮತ್ತು ಐಟಿ-ಬಿಟಿ ಸಚಿವ ಪ್ರಿಯಾಂಕ ಖರ್ಗೆ ಪರಿಶೀಲಿಸಿದರು. 

ಮಾ.18ರಂದು ಬೆಳಗ್ಗೆ 9:30ಕ್ಕೆ ಪ್ರವಾಸೋದ್ಯಮ ಮತ್ತು ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ ಖರ್ಗೆ, ಸಮಿತಿ ಅಧ್ಯಕ್ಷ ಮಾಪಣ್ಣ ಗಂಜಗೇರಿ ಸೇರಿದಂತೆ ವಿವಿಧ ಗಣ್ಯರು ಪಟ್ಟಣದ ಲಾಡ್ಜಿಂಗ್‌ ಕ್ರಾಸ್‌ನಿಂದ ಭವ್ಯ ಮೆರವಣಿಗೆಗೆ ಚಾಲನೆ ನೀಡುವರು. 

ಮಹಾರಾಷ್ಟ್ರ ರಾಜ್ಯದ ಪುಣಾದ ನಾಗಾಬ್ರಹ್ಮ ಕಲಾತಂಡದಿಂದ ವಿಶೇಷ ಕಲೆಗಳ ಪ್ರದರ್ಶನ, ಬೈಕ್‌ ರ್ಯಾಲಿ ಹಾಗೂ ವಿವಿಧ ಕಡೆಗಳಿಂದ ಆಗಮಿಸಿದ್ದ ಕಲಾ ತಂಡದವರೊಂದಿಗೆ ಲಾಡ್ಜಿಂಗ್‌ ಕ್ರಾಸ್‌ನಿಂದ ಆರಂಭಗೊಂಡ ಮೆರವಣಿಗೆಯಲ್ಲಿ ಅಂಬೇಡ್ಕರ್‌ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಲಿದೆ.

ಮೆರವಣಿಗೆಯಲ್ಲಿ ಲೇಜಿಂ, ಕೋಲಾಟ, ಡೊಳ್ಳಾಟ, ಕಲಾನೃತ್ಯ ಹಾಗೂ ಯುವಕರು ಬೈಕ್‌ರ್ಯಾಲಿ ನಡೆಸಲಿದ್ದಾರೆ. ಮೆರವಣಿಗೆಯು ಪಟ್ಟಣದ ಲಾಡ್ಜಿಂಗ್‌ ಕ್ರಾಸ್‌, ಬಸವೇಶ್ವರ ವೃತ್ತ, ಅಂಬೇಡ್ಕರ್‌ ವೃತ್ತ, ಜನತಾ ಚೌಕ್‌, ನಾಗಾವಿ ವೃತ್ತ, ಸ್ಟೇಷನ್‌ ರಸ್ತೆ ಮೂಲಕ ಸಾಗಿ ಮಧ್ಯಾಹ್ನದ ಹೊತ್ತಿಗೆ ಮಿನಿ ವಿಧಾನ ಸೌಧದ ಪ್ರಧಾನ ವೇದಿಕೆಗೆ ತಲುಪಲಿದೆ. 

ನಂತರ ಮಿನಿ ವಿಧಾನಸೌಧದ ಆವರಣದಲ್ಲಿ ಡಾ| ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ 125ನೇ ಪ್ರಧಾನ ವೇದಿಕೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಕಾಂಗ್ರೆಸ್‌ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವ ಜಿ. ಪರಮೇಶ್ವರ,

ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌. ಆಂಜನೇಯ, ಲೋಕೋಪಯೋಗಿ ಇಲಾಖೆ ಸಚಿವ ಎಚ್‌ .ಸಿ ಮಹಾದೇವಪ್ಪ, ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ, ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ, ಮಾಜಿ ಸಚಿವರಾದ ಖಮರುಲ್‌ ಇಸ್ಲಾಂ,

ಗಡಿನಾಡು ಪ್ರಾಧಿಕಾರ ಅಧ್ಯಕ್ಷ ಬಾಬುರಾವ ಚಿಂಚನಸೂರ್‌, ಗೃಹ ನಿರ್ಮಾಣ ಮಂಡಳಿ ಅಧ್ಯಕ್ಷ ಮಾಲಿಕಯ್ಯ ಗುತ್ತೇದಾರ, ಶಾಸಕರಾದ ಉಮೇಶ ಜಾಧವ, ಜಿ. ರಾಮಕೃಷ್ಣ, ಅಜಯ್‌ಸಿಂಗ್‌ ಆಗಮಿಸಲಿದ್ದಾರೆ. ಜಯಂತಿ ಕಾರ್ಯಕ್ರಮಕ್ಕೆ 40 ರಿಂದ 50 ಸಾವಿರ ಜನ ಸೇರುವ ನಿರೀಕ್ಷೆಯಿದೆ.

ಈ ನಿಟ್ಟಿನಲ್ಲಿ ಡಾ| ಬಾಬಾ ಸಾಹೇಬ್‌ ಅಂಬೇಡ್ಕರ್‌ ತಾಲೂಕು ಸಮಿತಿ ವತಿಯಿಂದ ಬೃಹತ್‌ ವೇದಿಕೆ ನಿರ್ಮಿಸಿದೆ. ಬಂದ ಅತಿಥಿಗಳಿಗೆ ಬಿಸಿಲ ನಾಡು ಹೈ.ಕ ಶೈಲಿಯ ಭೋಜನ ಸವಿ ಸಿಗಲಿದೆ. ಭದ್ರತೆಗಾಗಿ ಪಟ್ಟಣದ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಎಸ್‌ಪಿ-2, ಡಿವೈಎಸ್ಪಿ-7, ಸಿಪಿಐ-20, ಪಿಎಸ್‌ಐ-24, ಎಎಸ್‌ಐ-51, 

ಎಚ್‌ಸಿ, ಪಿಸಿ-538, ಕೆಎಸ್‌ಆರ್‌ಪಿ-6, ಡಿಎಆರ್‌-4, ಪೊಪೆಶನಲ್‌ ಪಿಎಸ್‌ಐ-30 ಜನರನ್ನು ಒಳಗೊಂಡು ಸೂಕ್ತ ರೀತಿಯಲ್ಲಿ ಪೊಲೀಸ್‌ ಬಿಗಿ ಭದ್ರತೆ ಒದಗಿಸಲಾಗಿದೆ. ಅಲ್ಲದೇ ಡಾ| ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರ 125ನೇ ಜಯಂತಿ ಸಮಿತಿ ಪದಾಧಿಧಿಕಾರಿಗಳು, ಸ್ವಯಂ ಸೇವಕರು ಕಾರ್ಯಕ್ರಮದ ಯಶಸ್ಸಿಗಾಗಿ ಶ್ರಮಿಸಲಿದ್ದಾರೆ. 

*  ಎಂ.ಡಿ. ಮಶಾಖ 

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ

Kalaburagi: 6 acres of sugarcane crop caught fire after being struck by an electric wire

Kalaburagi: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.