ವೈದ್ಯಕೀಯ ವಲಯದಲ್ಲಿ  ಅಭಿವೃದ್ಧಿ ಅಗತ್ಯ


Team Udayavani, Mar 18, 2017, 3:45 PM IST

1703kdb1a.jpg

ಕಡಬ : ತಾಲೂಕು ಕೇಂದ್ರವಾದ ಇಲ್ಲಿ  ವೈದ್ಯಕೀಯ ಸೇವೆ ವ್ಯವಸ್ಥೆ ಹೇಳಿಕೊಳ್ಳುವಷ್ಟು ಅಭಿವೃದ್ಧಿಯಾಗಿಲ್ಲ. ಸುಮಾರು 8 ವರ್ಷಗಳ ಹಿಂದೆ 6 ಹಾಸಿಗೆಗಳ ಪ್ರಾಥಮಿಕ ಆರೋಗ್ಯ ಕೇಂದ್ರ 30 ಹಾಸಿಗೆಗಳ  ಸಮುದಾಯ ಆಸ್ಪತ್ರೆ ಯಾಯಿತು. ಇತ್ತೀಚೆಗೆ ಇದಕ್ಕೆ 4.85 ಕೋಟಿ ರೂ. ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ. ಹಾಗೆಂದು ಖಾಸಗಿ ವೈದ್ಯ ಸೇವೆಗಳೂ‌ ಚಿಕಿತ್ಸಾಲಯದ ಮಟ್ಟದಿಂದ ಮೇಲೇರಿಲ್ಲ.

30 ಹಾಸಿಗೆಗಳ ಆಸ್ಪತ್ರೆ
ಆರು ಹಾಸಿಗೆಗಳ ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು  ಸರಕಾರ 30 ಹಾಸಿಗೆಗಳ ಸಮುದಾಯ ಆರೋಗ್ಯ ಕೇಂದ್ರವಾಗಿ ಮೇಲ್ದರ್ಜೆಗೇರಿಸಿತು. ದಿನಂಪ್ರತಿ ಸುಮಾರು 300ಕ್ಕೂ ಹೆಚ್ಚು ಹೊರರೋಗಿಗಳು ಚಿಕಿತ್ಸೆಗಾಗಿ ಬರುತ್ತಾರೆ. ಉಳಿದಂತೆ ಹೆಚ್ಚಿನ ಚಿಕಿತ್ಸೆಗೆ ಜನರು ಪುತ್ತೂರು ಮತ್ತು ಮಂಗಳೂರಿಗೆ ತೆರಳಬೇಕು.  2007ರಲ್ಲಿ ಸರಕಾರವು ದ.ಕ. ಜಿಲ್ಲೆಯ ಕಡಬ, ಧರ್ಮಸ್ಥಳ ಹಾಗೂ ಉಪ್ಪಿನಂಗಡಿ ಸೇರಿದಂತೆ ರಾಜ್ಯದ ಒಟ್ಟು 24 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಅಗತ್ಯ ಹೆಚ್ಚುವರಿ ಹುದ್ದೆಗಳ ಸಮೇತ ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆಗೇರಿಸಿತ್ತು.

ಅದರಂತೆ ಕಡಬ ಆಸ್ಪತ್ರೆಗೆ ಪ್ರಸೂತಿ ತಜ್ಞರು, ಶಿಶು ತಜ್ಞರು ಸೇರಿದಂತೆ 4 ಮಂದಿ ವೈದ್ಯಾಧಿಕಾರಿಗಳು, ಓರ್ವ ದಂತ ವೈದ್ಯರು- ಒಟ್ಟು 34 ಹುದ್ದೆಗಳು ಮಂಜೂರಾಗಿವೆ. ಇವುಗಳಲ್ಲಿ ಹಾಲಿ ಲಭ್ಯವಿರುವ ಹುದ್ದೆಗಳನ್ನು ಹೊರತು ಪಡಿಸಿ ಉಳಿದವುಗಳನ್ನು ಕೇಂದ್ರದ ಕಟ್ಟಡ ಕಾಮಗಾರಿ ಶೇ. 60ರಷ್ಟು ಪೂರ್ಣಗೊಂಡ ಬಳಿಕ ಭರ್ತಿ ಮಾಡುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ. ಕಟ್ಟಡ ಕಾಮಗಾರಿ ಶೀಘ್ರವೇ ಮುಗಿದು, ತಜ್ಞ ವೈದ್ಯರು ಹಾಗೂ ಅಗತ್ಯ ಸವಲತ್ತು ಸಿಕ್ಕರೆ ಸಾರ್ವಜನಿಕರಿಗೆ ಅನುಕೂಲವಾಗಲಿದೆ. 

ದೊಡ್ಡಮಟ್ಟದ ಆಸ್ಪತ್ರೆಗಳಿಲ್ಲ
ಸಣ್ಣ ಪುಟ್ಟ ಚಿಕಿತ್ಸಾಲಯಗಳನ್ನು ಬಿಟ್ಟರೆ ಇಲ್ಲಿ ದೊಡ್ಡಮಟ್ಟದ ಖಾಸಗಿ ಆಸ್ಪತ್ರೆಗಳೂ ಇಲ್ಲ. ಮರ್ದಾಳದಲ್ಲಿ ಖಾಸಗಿ ಟ್ರಸ್ಟ್‌ ವತಿಯಿಂದ 400 ಹಾಸಿಗೆಗಳ ಆಸ್ಪತ್ರೆಗೆ ಶಂಕುಸ್ಥಾಪನೆ ಕಳೆದ ತಿಂಗಳು ನೆರವೇರಿದೆ. ಹಾಗೆಯೇ ಕಡಬದ ಸೈಂಟ್‌ ಜೋಕಿಮ್ಸ್‌ ಚರ್ಚ್‌ನ ಬಳಿ ಬೆಂಗಳೂರು ಮೂಲದ ಕೆಥೋಲಿಕ್‌ ಕ್ರೈಸ್ತ ಧರ್ಮಭಗಿನಿಯರ ನೇತೃತ್ವದ ಆಸ್ಪತ್ರೆ ಆರಂಭಿಸುವ ವಿಚಾರ ಪ್ರಾಥಮಿಕ ಹಂತದಲ್ಲಿದೆ. ಕಡಬ ತಾಲೂಕು ಕೇಂದ್ರವಾಗಿ ಅಭಿವೃದ್ಧಿಯಾದರೆ ವೈದ್ಯಕೀಯ ಸೇವೆಗಳೂ ಬೆಳೆಯಬಹುದು. ಪ್ರಸ್ತುತ ಇಲ್ಲಿ ತಜ್ಞ ದಂತ ವೈದ್ಯರನ್ನು ಹೊರ ತುಪಡಿಸಿದರೆ ಇನ್ನಿತರ ಯಾವುದೇ ವೈದ್ಯ ಕೀಯ ವಿಭಾಗದಲ್ಲಿ ಪರಿಣಿತ ವೈದ್ಯರು ಲಭ್ಯರಿಲ್ಲ ಎಂಬುದು ವಾಸ್ತವ.

8 ಗ್ರಾಮಗಳ ವ್ಯಾಪ್ತಿ
ಕಡಬ, ಕೋಡಿಂಬಾಳ, ಬಂಟ್ರ, 102ನೇ ನೆಕ್ಕಿಲಾಡಿ, ಕುಟ್ರಾಪ್ಪಾಡಿ, ಬಲ್ಯ, ನೂಜಿಬಾಳ್ತಿಲ ಹಾಗೂ ರೆಂಜಿಲಾಡಿ – 8 ಗ್ರಾಮಗಳ ವ್ಯಾಪ್ತಿ ಈ ಆಸ್ಪತ್ರೆಯದ್ದು. ಆದರೆ ಹತ್ತಿರದ ಕುಂತೂರು, ಆಲಂಕಾರು, ಕೊಂಬಾರು, ಸಿರಿಬಾಗಿಲು, ಐತ್ತೂರು, ಕೊಣಾಜೆ, ಕಾಣಿಯೂರು, ಚಾರ್ವಾಕ, ಸುಳ್ಯ ತಾಲೂಕಿನ ಸುಬ್ರಹ್ಮಣ್ಯ, ಪಂಜ, ಯೇನೆಕಲ್‌, ಬಳ್ಪ, ಕೇನ್ಯ, ಎಡಮಂಗಲ ಪ್ರದೇಶ ದವರೂ ಇಲ್ಲಿಗೇ ಚಿಕಿತ್ಸೆಗೆ ಬರುತ್ತಿ ರುವುದರಿಂದ ವ್ಯಾಪ್ತಿ ಹೆಚ್ಚಾಗಿದೆ.

ಸವಲತ್ತು ನೀಡುವುದಕ್ಕೆ ಆದ್ಯತೆ 
ಕಡಬದಲ್ಲಿ ಸಮುದಾಯ ಆಸ್ಪತ್ರೆಗೆ ಸುಸಜ್ಜಿತ ಕಟ್ಟಡ ಹಾಗೂ ಅಗತ್ಯ ಸವಲತ್ತುಗಳನ್ನು ನೀಡುವುದು ನಮ್ಮ ಮೊದಲ ಗುರಿ. ಮುಂದಿನ ದಿನಗಳಲ್ಲಿ  ವಿವಿಧ ಇಲಾಖೆಗಳ ತಾಲೂಕು ಮಟ್ಟದ ಕಚೇರಿಗಳು ಇಲ್ಲಿ ಆರಂಭಗೊಳ್ಳಲಿವೆ. ಅದೇ ರೀತಿ ಆರೋಗ್ಯ ಇಲಾಖೆಯ ತಾಲೂಕುಮಟ್ಟದ ಸೌಲಭ್ಯಗಳು ಕೂಡ ಲಭಿಸಿಲು   ಕಾಲಾವಕಾಶ ಅಗತ್ಯವಿದೆ. ಹಂತ ಹಂತವಾಗಿ ಕಡಬಕ್ಕೂ ಕೂಡ ತಾಲೂಕು ಆಸ್ಪತ್ರೆಯ ಮಾನ್ಯತೆ ಹಾಗೂ ಸವಲತ್ತುಗಳು ಸಿಗಲಿವೆ.
-ಡಾ| ರಾಮಕೃಷ್ಣ ರಾವ್‌, 
ಜಿಲ್ಲಾ ಆರೋಗ್ಯಾಧಿಕಾರಿ

– ನಾಗರಾಜ್‌ ಎನ್‌.ಕೆ. ಕಡಬ

ಟಾಪ್ ನ್ಯೂಸ್

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

Bhalla,-VK-Singh-Gov.

New Appointment: ಐದು ರಾಜ್ಯಗಳಿಗೆ ಹೊಸ ರಾಜ್ಯಪಾಲರ ನೇಮಿಸಿದ ಕೇಂದ್ರ ಸರ್ಕಾರ

CTRavi

Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ

ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ 10, ದೆಹಲಿಯಲ್ಲಿ 11 ಮಂದಿ ಸೆರೆ

Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ

Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-bntwl

Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು

6-aranthodu

Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು

Police-logo

CEN Police Station: ದಕ್ಷಿಣ ಕನ್ನಡ ಜಿಲ್ಲಾ ಸೆನ್‌ ಪೊಲೀಸ್‌ ಠಾಣೆ ಬಂಟ್ವಾಳಕ್ಕೆ

aane

Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ

bjp-congress

Aranthodu:ಕಾಂಗ್ರೆಸ್‌-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

World Rapid Chess: ಕಡೆಗೂ ಅರ್ಜುನ್‌ ಎರಿಗೈಸಿಗೆ ಅಮೆರಿಕ ವೀಸಾ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

Women’s ODI: ಹರ್ಲೀನ್ ಶತಕ; ವಿಂಡೀಸ್‌ ವಿರುದ್ಧ ಭಾರತಕ್ಕೆ 2-0 ಸರಣಿ ಜಯ

k

Udupi: ʼಭಾರತೀಯ ಸಂಸ್ಕೃತಿ, ಭಗವದ್ಗೀತೆʼ ಕುರಿತು ಕೆ.ಪಿ.ಪುತ್ತೂರಾಯ ಉಪನ್ಯಾಸ

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

BBK11: ಬಿಗ್ ಬಾಸ್ ರೆಸಾರ್ಟ್ ನಲ್ಲಿ ಹೆಣ್ಮಕ್ಕಳ ಬಟ್ಟೆ ಒಗೆದ ರಜತ್ – ತ್ರಿವಿಕ್ರಮ್

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗದ್ಗೀತೆಯ ಪ್ರಸ್ತುತತೆ ವಿಶೇಷ ಸಂವಾದ

ಶ್ರೀಕೃಷ್ಣ ಮಠದಲ್ಲಿ ಡಿ.25ಕ್ಕೆ ನ್ಯಾಯಾಂಗದಲ್ಲಿ ಭಗವದ್ಗೀತೆ ಪ್ರಸ್ತುತತೆಯ ವಿಶೇಷ ಸಂವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.