ಹಳೆ ನೋಟು ವಿನಿಮಯ ಮಾಡುತ್ತಿದ್ದವರ ಸೆರೆ
Team Udayavani, Mar 19, 2017, 11:33 AM IST
ಬೆಂಗಳೂರು: ಅಮಾನ್ಯಗೊಂಡ ನೋಟುಗಳನ್ನು ಹೊಂದಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು ಒಂದು ಸಾವಿರ ಮುಖ ಬೆಲೆಯ 1 ಲಕ್ಷ ಹಾಗೂ 500 ಮುಖ ಬೆಲೆಯ 49 ಲಕ್ಷ ರೂ. ಹಳೇ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ಕಳೆದ ಡಿಸೆಂಬರ್ 31ರ ನಂತರ ಹಳೇ ನೋಟುಗಳನ್ನು ಹೊಂದುವುದು ಅಪರಾಧ ಎಂಬ ಕಾನೂನು ಜಾರಿಯಾದ ಬಳಿಕ ಪೊಲೀಸರು ವಶಪಡಿಸಿಕೊಂಡಿರುವ ದೊಡ್ಡ ಮೊತ್ತದ ಹಣ ಇದಾಗಿದೆ. ಪ್ರಕರಣ ಸಂಬಂಧ ಆಡುಗೋಡಿ ನಿವಾಸಿ, ಶಾಂತಿನಗರದಲ್ಲಿ ಪಾನ್‌ಬ್ರೋಕರ್ ಮಳಿಗೆ ನಡೆಸುವ ಆನಂದ್ ಜೈನ್ (45) ಮತ್ತು ಈಜಿಪುರದ ರಿಯಲ್ ಎಸ್ಟೇಟ್ ಉದ್ಯಮಿ ವಿನಾಯಕ್ ಪ್ರಸಾದ್ (49) ಎಂಬುವರನ್ನು ಬಂಧಿಸಲಾಗಿದೆ.
ಸದಾಶಿವ ನಗರದಲ್ಲಿ ಗಣೇಶ್ ಜ್ಯೂವೆಲ್ಲರಿ ಮಳಿಗೆ ಹೊಂದಿರುವ ವಿಜಯ್ ಕುಮಾರ್ ಮತ್ತು ರಿಯಲ್ ಎಸ್ಟೇಟ್ ಏಜಂಟ್ ಸಲಾಂ ಎಂಬುವರು ತಲೆ ಮರೆಸಿಕೊಂಡಿದ್ದು, ಶೋಧ ಕಾರ್ಯ ನಡೆಯುತ್ತಿದೆ ಎಂದು ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ಎಸ್.ರವಿ ಶನಿವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಶಾಂತಿನಗರ ಲಾಂಗ್‌ಫೋರ್ಡ್ ಲೇಔಟ್‌ನ ಲಿಂಕ್ ರಸ್ತೆಯಲ್ಲಿಯ ಮನೆಯೊಂದರಲ್ಲಿ ಆರೋಪಿಗಳು ನೋಟುಗಳನ್ನು ಬದಲಾಯಿಸಲು ಯತ್ನಿಸುತ್ತಿದ್ದಾರೆ ಎಂಬ ಮಾಹಿತಿ ಆಧಾರದ ಮೇಲೆ ದಾಳಿ ನಡೆಸಲಾಗಿದೆ. ಒಂದು ಕೋಟಿ ಹೊಸ ನೋಟುಗಳ ಬದಲಾವಣೆಗೆ ಒಂದು ಲಕ್ಷ ಕಮಿಷನ್ ಕೊಡುವುದಾಗಿ ಕೆಲವರಿಗೆ ಆಮಿಷವೊಡ್ಡುತ್ತಿದ್ದರು ಎಂದು ಅವರು ತಿಳಿಸಿದ್ದಾರೆ.
ಆರೋಪಿಗಳು ನೋಟುಗಳ ಬದಲಾವಣೆಗೆ 15 ದಿನಗಳ ಹಿಂದೆಯೇ ಸಂಚು ರೂಪಿಸಿದ್ದರು. ಆದರೆ, ಮನೆಯಿಂದ ಹೊರಬರದೆ ಎಲ್ಲವನ್ನು ಮನೆಯಲ್ಲೇ ನಿರ್ವಹಿಸುತ್ತಿದ್ದರು. ಈ ಹಿನ್ನಲೆಯಲ್ಲಿ ಶುಕ್ರವಾರ ರಾತ್ರಿ ಮನೆ ಮೇಲೆ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ವಿದೇಶಿಯರಿಗೂ ವಂಚಿಸಲು ಸಂಚು
ಬಂಧನಕ್ಕೊಳಗಾಗಿರುವ ಆನಂದ್ ಮತ್ತು ವಿನಾಯಕ್ ಪ್ರಸಾದ್ ತಮ್ಮ ಬಳಿ ಹಳೇ ನೋಟುಗಳನ್ನು ಇಟ್ಟುಕೊಂಡಿ ದ್ದರು. ಹೊಸ ನೋಟುಗಳಿಗೆ ಬದಲಾವಣೆ ಮಾಡಿಕೊಡುತ್ತೇವೆಂದು ಚಿನ್ನಾಭರಣ ಅಂಗಡಿ ಮಾಲೀಕರಿಂದ ಲಕ್ಷಾಂತರ ರುಪಾಯಿ ಹಣ ಪಡೆಯುತ್ತಿದ್ದರು.
ಅಲ್ಲದೇ ವಿದೇಶದಲ್ಲಿರುವ ಭಾರತೀಯರ ನೋಟುಗಳ ಬದಲಾವಣೆಗೆ ಮಾ.31ರವರೆಗೆ ಗಡುವು ನೀಡಲಾಗಿದೆ. ಈ ಅವಕಾಶವನ್ನು ದುರ್ಬಳಕೆ ಮಾಡಿಕೊಳ್ಳಲು ಸಂಚು ರೂಪಿಸಿದ್ದ ಆರೋಪಿಗಳು, ಕಮಿಷನ್ ಆಧಾರದ ಮೇಲೆ ಕೆಲ ಅನಿವಾಸಿ ಭಾರತೀಯರನ್ನು ಸಂಪರ್ಕಿಸಿ ಹಣ ಪಡೆದು ವಂಚನೆ ಮಾಡಲು ಸಂಚು ರೂಪಿಸಿದ್ದರು ಎಂದು ಸಿಸಿಬಿ ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
MUST WATCH
ಹೊಸ ಸೇರ್ಪಡೆ
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.