“ಮುಂದಿನ ಬಾರಿಯೂ ಕಾಂಗ್ರೆಸ್‌ಗೆ ಅಧಿಕಾರ’

Team Udayavani, Mar 19, 2017, 1:51 PM IST

15ule1.jpg

ಬಂಟ್ವಾಳ : ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಗ್ರಾಮೀಣ ಪ್ರದೇಶ ಸಹಿತ ರಾಜ್ಯಾದ್ಯಂತ ನಡೆಸಿರುವ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನರು ಅರಿತಿದ್ದು, ಮುಂದಿನ ಬಾರಿಯೂ ರಾಜ್ಯದಲ್ಲಿ ಕಾಂಗ್ರೆಸ್‌ ನೇತೃತ್ವದ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್‌ ಹೇಳಿದರು.

ಅವರು ಕೈರಂಗಳ ಗ್ರಾಮದ ಪೊಯೆಲ್‌ ರಸ್ತೆಗೆ 8 ಲಕ್ಷ ರೂ. ಶಾಸಕರ ಅನುದಾನದಿಂದ ಡಾಮರು ಕಾಮಗಾರಿಗೆ ಶಿಲಾನ್ಯಾಸ ಮತ್ತು ಮುದುಂಗಾರು ಮಸೀದಿ ರಸ್ತೆಗೆ 9 ಲಕ್ಷ ರೂ. ಅನುದಾನದಲ್ಲಿ ನಿರ್ಮಾಣ ಗೊಂಡ ಕಾಂಕ್ರೀಟ್‌ ರಸ್ತೆಯನ್ನು ಉದ್ಘಾಟಿಸಿದರು.

ಕೆಲವರು ಗೋ ಸಂಪತ್ತಿನ ರಕ್ಷಣೆಯ ಬಗ್ಗೆ ಮಾತನಾಡಿ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಆದರೆ ರಾಜ್ಯ ಸರಕಾರದ ಗೋಸಾಕಣೆ ಸಂಬಂಧಿಸಿದ ಯೋಜನೆ ಯಿಂದ ಹಲವಾರು ಮಂದಿ ಹೈನುಗಾರಿಕೆಯಲ್ಲಿ ಯಶಸ್ವಿಯಾಗಿದ್ದಾರೆ. ಗೋ ಸಂರಕ್ಷಣೆಯ ಬೆಂಬಲದಿಂದ ರಾಜ್ಯದಲ್ಲಿ ಹಾಲು ಉತ್ಪಾದನೆಯ ಪ್ರಮಾಣ ಹೆಚ್ಚಿದ್ದು, ಹೆಚ್ಚುವರಿ ಹಾಲನ್ನು ಬಡವರ ಮಕ್ಕಳು ಕುಡಿಯಬೇಕೆನ್ನುವ ನಿಟ್ಟಿನಲ್ಲಿ  ಶಾಲೆಗಳಿಗೆ ಉಚಿತ ಹಾಲು ನೀಡುವ ಕಾರ್ಯ  ಮಾಡಲಾಗಿದೆ.  ಕಳೆದ ಹಲವು ವರ್ಷಗಳಿಂದ ಬಾಕಿಯಿದ್ದ ಹಕ್ಕುಪತ್ರ ವಿತರಣೆಗೂ ರಾಜ್ಯ ಸರಕಾರ ಚಾಲನೆ ನೀಡಿದೆ ಎಂದವರು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ  ಪಂಚಾಯತ್‌  ಸದಸ್ಯೆ ಮಮತಾ ಗಟ್ಟಿ, ಬಂಟ್ವಾಳ ತಾಲೂಕು ಪಂಚಾಯತ್‌  ಅಧ್ಯಕ್ಷ ಚಂದ್ರಹಾಸ ಕರ್ಕೇರ, ಸದಸ್ಯರಾದ ಹೈದರ್‌ ಕೈರಂಗಳ, ಮುಡಿಪು ಬ್ಲಾಕ್‌ ಕಾಂಗ್ರೆಸ್‌ ಕಾರ್ಯದರ್ಶಿ ಅಬ್ದುಲ್‌ ಜಲೀಲ್‌, ನರಿಂಗಾನ ಗ್ರಾ. ಪಂ.ನ ಇಸ್ಮಾಯಿಲ್‌ ಮೀನಂಕೋಡಿ, ಬಾಳೆಪುಣಿ ಪಂಚಾಯತ್‌ ಉಪಾಧ್ಯಕ್ಷೆ ವನಿತಾ ಬಿ. ರೈ, ವಲಯಾಧ್ಯಕ್ಷ ಬಾಳೆಪುಣಿ ಜಗದೀಶ್‌  ಪಲಾಯಿ, ರಾಜಗೋಪಾಲ್‌ ಭಟ್‌, ಪಂಚಾಯತ್‌ ಸದಸ್ಯರಾದ ನಾಸಿರ್‌ ನಡುಪದವು, ಮುರಳೀಧರ ಶೆಟ್ಟಿ, ಅಬ್ದುಲ್‌ ರೆಹಮಾನ್‌, ಅಬ್ದುಲ್‌ ಖಾದರ್‌, ಗಣೇಶ್‌ ನಾಯಕ್‌, ಸೋಮನಾಥ ನಾಯಕ್‌, ಜನಾರ್ದನ, ಎಂಜಿನಿಯರ್‌ ರವಿ, ರಮೇಶ್‌ ಶೇಣವ, ಬಶೀರ್‌, ಹನೀಫ್‌, ಪದ್ಮನಾಭ ನರಿಂಗಾನ ಮತ್ತಿತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Kannada-Replica

ಬೆಳೆ ಕನ್ನಡ: ಉಪಭಾಷೆಗಳು ಉಳಿದರೆ ಸಂಸ್ಕೃತಿಯೂ ಉಳಿಯುತ್ತದೆ…

money

Agriculture: ಕೃಷಿಗೆ ಶೂನ್ಯ ಬಡ್ಡಿ ಸಾಲಕ್ಕೆ ಬೇಕಿದೆ ಮಾರ್ಗೋಪಾಯ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullala-Swim-1

Ullala Resort: ಮೃತ ಯುವತಿಯ ಕುಟುಂಬಸ್ಥರ ಆಕ್ರಂದನ

Arrest

Mangaluru: ಮದ್ಯ ಅಕ್ರಮ ದಾಸ್ತಾನು: ಮನೆ ಮೇಲೆ ಅಬಕಾರಿ ದಾಳಿ; ಮದ್ಯ ಸಹಿತ ಇಬ್ಬರು ವಶಕ್ಕೆ

2

Mulki: ವ್ಯಕ್ತಿ ನಾಪತ್ತೆ; ಸೂಚನೆ; ದೂರು ದಾಖಲು

Belthangady: ಅಡಿಕೆ ವ್ಯಾಪಾರಿಯ ಬ್ಯಾಗಿನಲ್ಲಿದ್ದ 2 ಲಕ್ಷ ರೂ. ಕಳವು

missing

Mangaluru: ಎಂಜಿನಿಯರಿಂಗ್‌ ವಿದ್ಯಾರ್ಥಿನಿ ನಾಪತ್ತೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Parameahwar

Congress: ಜಮೀರ್ “ಕರಿಯ’ ಹೇಳಿಕೆ ಕುರಿತು ಶಿಸ್ತು ಸಮಿತಿಗೆ ವರದಿ ಕೊಟ್ಟರೆ ಕ್ರಮ: ಪರಂ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Manipur; ಹಿಂಸೆ ಉಲ್ಬಣ: ಗೋಲಿಬಾರ್‌ಗೆ ಒಬ್ಬ ಬಲಿ: ಕರ್ಫ್ಯೂ ಮುಂದುವರಿಕೆ

Kannada-Replica

ಬೆಳೆ ಕನ್ನಡ: ಉಪಭಾಷೆಗಳು ಉಳಿದರೆ ಸಂಸ್ಕೃತಿಯೂ ಉಳಿಯುತ್ತದೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.